ಈ ಭಾನುವಾರ ಎಲ್ಲಿಗೆ ಹೋಗುವುದು?
ಪ್ರತಿವಾರ ಕಾಡುವ ಪ್ರಶ್ನೆ ಇದು. ಆದರೆ, ಈ ವಾರ ಅದರ ಬಗ್ಗೆ ಯೋಚಿಸಬೇಕಿಲ್ಲ, ನಾನಂತೂ ರವೀಂದ್ರ ಕಲಾಕ್ಷೇತ್ರದಲ್ಲಿರುತ್ತೇನೆ.
ಆವತ್ತು, ದೇಶಕಾಲ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ. ಅನಂತಮೂರ್ತಿ, ಗಿರೀಶ್ ಕಾರ್ನಾಡ್ ಮತ್ತು ಜಾವೇದ್ ಅಖ್ತರ್ ವೇದಿಕೆಯಲ್ಲಿರುತ್ತಾರೆ ಎಂಬ ಖುಷಿಯ ಜೊತೆ, ನೂರಾರು ಗೆಳೆಯರು, ಸಹಲೇಖಕರು ಸಿಗುತ್ತಾರೆ ಎಂಬುದು ಮತ್ತೊಂದು ಸಂತೋಷ.
ಹಳೆಯ ದಿನಗಳು ನೆನಪಾಗುತ್ತಿವೆ. ಸಂಕೇತ್ -ನಾಗಮಂಡಲ- ನಾಟಕ ಆಡಿದಾಗ ಚಿತ್ರಕಲಾ ಪರಿಷತ್ತಿನಲ್ಲಿ ಸಂಭ್ರಮ, ಅದಕ್ಕೂ ಮುಂಚೆ ಬಿವಿ ಕಾರಂತರು ಮೂರು ನಾಟಕಗಳ ಪ್ರದರ್ಶನ ಏರ್ಪಡಿಸಿ ಥ್ರಿಲ್ ಕೊಟ್ಟಿದ್ದರು. ಆಮೇಲೆ, ಕುಸುಮಬಾಲೆ ನಾಟಕದ ಪ್ರದರ್ಶನ ನಡೆಯಿತು. ಅಡಿಗರ ಭೂಮಿಗೀತ ರಂಗಕ್ಕೆ ಬಂದಾಗೊಂದು ಸಂಭ್ರಮವಿತ್ತು. ಕಾರ್ನಾಡರ ಅಗ್ನಿ ಮತ್ತು ಮಳೆಯ ಇಂಗ್ಲಿಷ್ ಪ್ರದರ್ಶನ ಕೊಟ್ಟ ಖುಷಿಯೇ ಬೇರೆ. ಇತ್ತೀಚೆಗೆ ಸೂರಿ ನಿರ್ದೇಶಿಸಿದ ಇಬ್ಬರು ಮುದುಕರ ಕತೆ ಹೇಳುವ ನಾಟಕ ನಾ ತುಕಾರಾಮ್ ಅಲ್ಲ- ಹೀಗೆ ನಮ್ಮ ಖುಷಿಯನ್ನು ಹೆಚ್ಚಿಸುವ ಹಬ್ಬಗಳು ಆಗಾಗ ನಡೆಯುತ್ತಿರುತ್ತವೆ.
ಈ ಸಲದ ಹಬ್ಬಕ್ಕೆ ವಿವೇಕ ಶಾನಭಾಗರು ನೆಪ. ಅವರು ಅಕ್ಕರೆಯಿಂದ ರೂಪಿಸಿದ ದೇಶಕಾಲ ವಿಶೇಷ ಸಂಚಿಕೆಯ ಬಿಡುಗಡೆ ಮತ್ತೊಂದು ನೆಪ. ಬೆಳಗ್ಗೆ ಒಂಬತ್ತೂವರೆಗೆಲ್ಲ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೇರಿ, ಒಂದಿಷ್ಟು ಕಾಫಿ ಕುಡಿದು, ಹರಟುತ್ತಾ ನಮ್ಮ ಜ್ಞಾಪಕ ಚಿತ್ರಶಾಲೆಯನ್ನು ಅಲಂಕರಿಸಿಕೊಳ್ಳೋಣ.
ಬರ್ತೀರಲ್ಲ, ಈ ಭಾನುವಾರ ನಮ್ಮದು.
Friday, April 23, 2010
ಬೇಸಗೆಯಲ್ಲಿ ಕುರಿತು ಚಳಿಗಾಲದ ನಿರರ್ಥಕತೆಯನ್ನು ನೆನೆಯುತ್ತಾ..
ಬೆಂಗಳೂರಿನ ಬೇಸಗೆಯ ಬಣ್ಣ ಯಾವುದು ಒಂದು ಯೋಚಿಸುತ್ತಿದ್ದೆ. ನಮ್ಮರಲ್ಲಂತೂ ಬೇಸಗೆ ಸುಡುಹಳದಿ. ಮಳೆಗಾಲ ಕಡು ಹಸಿರು. ಚಳಿಗಾಲಕ್ಕೂ ಬೇಸಗೆಗೂ ಅಂಥ ವ್ಯತ್ಯಾಸವಿಲ್ಲ. ಒಂದಷ್ಟು ಮರಗಳು ಎಲೆಯುದುರಿಸಿ ನಿಂತದ್ದು ಬಿಟ್ಟರೆ, ಹಗಲಿಡೀ ಅದೇ ಸುಡುವ ಸೂರ್ಯ ಮತ್ತು ಆ ಬೆಳಕಲ್ಲಿ ಮತ್ತಷ್ಟು ಚಪ್ಪಟೆಯಾಗಿ ಕಾಣುವ ಚಿತ್ರಗಳು.
ಆದರೆ ಬೆಂಗಳೂರಲ್ಲಿ ಹಾಗಲ್ಲ. ಅಲ್ಲಿ ಋತುಗಳು ಬದಲಾದದ್ದೇ ಗೊತ್ತಾಗುವುದಿಲ್ಲ. ಇದೀಗ ವಸಂತ ಋತು ಅನ್ನುವುದಾಗಲೀ, ಇದು ಶಿಶಿರ ಅನ್ನುವುದಾಗಲೇ ಪ್ರಕೃತಿಯಿಂದ ಗೊತ್ತಾಗಬೇಕೇ ಹೊರತು ಕ್ಯಾಲೆಂಡರಿನಿಂದಲ್ಲ. ಬೆಂಗಳೂರಿನಿಂದ ಕೊಂಚ ಆಚೆಗೆ ಹೋದರೆ ಮುಂಜಾನೆ ಹೊತ್ತಲ್ಲಿ ದಟ್ಟ ಮಂಜು ಕವಿದಿರುತ್ತದೆ. ಆದರೆ ಬೆಂಗಳೂರಲ್ಲಿ ಮಂಜು, ಮಳೆ ಮತ್ತು ಬಿಸಿಲು ಮೂರೂ ಅಕಾಲಿಕ. ಇಲ್ಲಿ ಮಳೆಯಾದರೂ ಅದು ಬ್ರೇಕಿಂಗ್ ನ್ಯೂಸ್.
ನನಗೆ ಬೇಸಗೆ ಇಷ್ಟ. ಬೇಸಗೆಯಲ್ಲಿ ಪ್ರಕೃತಿ ಉಳಿದೆಲ್ಲ ಕಾಲಕ್ಕಿಂತ ಸಮೃದ್ಧವಾಗಿರುತ್ತದೆ. ಬೇಸಗೆಯ ಆರಂಭಕ್ಕೆ ಎಲ್ಲ ಮರಗಳೂ ಹೂ ಬಿಡುತ್ತವೆ. ನಡುಬೇಸಗೆಯ ಹೊತ್ತಿಗೆ ಫಲವತಿ ಪೃಥ್ವಿ. ಮಾವಿನ ಹಣ್ಣು, ಗೇರುಹಣ್ಣು, ನೇರಳೆ, ಪೇರಲ ಮತ್ತು ಹೆಸರಿಲ್ಲದ ನೂರೆಂಟು ಹಣ್ಣುಗಳ ಸುಗ್ಗಿಕಾಲ ಅದು. ಜಂಬುನೇರಳೆಯೆಂಬ ರುಚಿರುಚಿಯಾದ ಹಣ್ಣಿಗೆ ಮನಸ್ಸು ಹಂಬಲಿಸುತ್ತದೆ. ತುಮಕೂರು, ಗುಬ್ಬಿ, ಚಿಕ್ಕಮಗಳೂರು ಮುಂತಾದ ಕಡೆ ತಾಳೆಗಿಡಗಳು ಖರ್ಜೂರದ ರುಚಿಯ ಹೊಂಬಣ್ಣದ ಹಣ್ಣನ್ನು ಮೈತುಂಬ ತುಂಬಿಕೊಂಡು ಆಕರ್ಷಿಸುತ್ತವೆ.
ಇಂಥ ಬೇಸಗೆಯಲ್ಲೇ ಎಷ್ಟೋ ಸಲ ಕಾದಂಬರಿಗೊಂದು ವಸ್ತು ಸಿಗುತ್ತದೆ. ಯಾರೋ ಬರೆದ ರುಚಿಕಟ್ಟಾದ ಕಾದಂಬರಿಯೊಂದು ಹೇಗೋ ಕೈ ಸೇರುತ್ತದೆ. ಮೊನ್ನೆ ಹಾಗೇ ಆಯ್ತು. ಯುಸುನಾರಿ ಕವಾಬಾಟ ಎಂಬ ಜಪಾನ್ ಕಾದಂಬರಿಕಾರ ಬರೆದ ಸಾವಿರ ಪಕ್ಷಿಗಳು’ ಎಂಬ ಪುಟ್ಟ ಕಾದಂಬರಿ ಹೇಗೋ ಕೈಸೇರಿತು. ಹಳೆಯ ಕಾಲದ ಕಾದಂಬರಿ ಎಂದುಕೊಂಡು ನಿರ್ಲಕ್ಷಿಸಿದ್ದನ್ನು ಸೆಕೆಗೆ ನಿದ್ದೆ ಬಾರದ ರಾತ್ರಿ ಕೈಗೆತ್ತಿಕೊಂಡಾಗ ಬೆಳಗಿನ ತನಕ ಓದಿಸಿಕೊಂಡಿತು.
ತುಂಬ ವಿಚಿತ್ರವಾಗಿ ಬರೆಯುತ್ತಾನೆ ಕವಾಬಾಟ. ಕಿಕುಜಿ ಎಂಬ ಹುಡುಗನ ಕತೆ ಅದು. ಕಾದಂಬರಿಯಲ್ಲಿ ಎಲ್ಲೂ ತುಂಬ ಅಚ್ಚರಿ ಹುಟ್ಟಿಸುವ ಚಿತ್ರಗಳು ಎದುರಾಗುವುದಿಲ್ಲ. ಆ ಪುಟ್ಟ ಹುಡುಗ ತನ್ನ ತಂದೆಯನ್ನು ಗೆಲ್ಲುವ ಕತೆ ಅದು ಅಂತ ಮುನ್ನುಡಿ ಓದಿದ ಮೇಲೆ ನನಗೂ ಅನ್ನಿಸಿತು. ಕಾದಂಬರಿಯನ್ನಷ್ಟೇ ಓದಿದಾಗ ನೆನಪಾದದ್ದು ನಮ್ಮ ಬಾಲ್ಯ. ನಮ್ಮೂರು, ನಮ್ಮೂರಿನ ರೂಪಸಿಯರು ಮತ್ತು ಎಲ್ಲರೂ ಸಿಟ್ಟಿನಿಂದ ನೋಡುತ್ತಿದ್ದ ಆದರೆ, ನಮ್ಮಂಥ ಹುಡುಗರಲ್ಲಿ ಕುತೂಹಲ ಹುಟ್ಟಿಸುತ್ತಿದ್ದ ದಿಟ್ಟೆಯರು.
ಹೇಗೆ ನಮ್ಮ ಅಭಿಪ್ರಾಯಗಳು ಬದಲಾಗುತ್ತಾ ಹೋಗುತ್ತವೆ ಎಂದು ಯೋಚಿಸುತ್ತೇನೆ. ಚಿಕ್ಕವರಿದ್ದಾಗ ಈ ರೂಪಸಿಯರು ಅಮ್ಮನ ಕಣ್ಣಿಗೋ ಅತ್ತಿಗೆಯ ಕಣ್ಣಿಗೋ ಸವತಿಯರ ಹಾಗೆ, ಸ್ಪರ್ಧಿಗಳ ಹಾಗೆ ಕಾಣಿಸುತ್ತಾರೆ ಎಂದು ನಮಗೆ ಅನ್ನಿಸಿರಲೇ ಇಲ್ಲ. ಅವರ ಜೀವನೋತ್ಸಾಹ, ಗಟ್ಟಿ ನಗು, ಆತ್ಮವಿಶ್ವಾಸ, ನಾಜೂಕು ಎಲ್ಲವೂ ಇಷ್ಟವಾಗುತ್ತಿತ್ತು. ಆದರೆ ಅದನ್ನು ಅದುಮಿಡುವ, ಹೀಗಳೆಯುವ ಹೆಂಗಸರನ್ನೂ ನೋಡಿದ್ದೆ. ಒಂದು ಹೊಸ ಸ್ನೇಹ ಅರಳಬಹುದು ಎಂಬ ನಿರೀಕ್ಷೆಯಲ್ಲಿ ಗಂಡಸರೂ ಆತಂಕದಲ್ಲಿ ಹೆಂಗಸರೂ ಬದುಕುತ್ತಿರುತ್ತಾರೆ ಎಂದು ಆಮೇಲೆ ಗೊತ್ತಾಯಿತು. ಈಗ ಅಂಥ ಆತಂಕ ಹುಡುಗರಲ್ಲೂ ಮನೆ ಮಾಡಿಕೊಂಡಿದೆ. ತನ್ನನ್ನು ಪ್ರೀತಿಸುವ ಹುಡುಗಿಯನ್ನು ತನಗಿಂತ ಸುಂದರನೊಬ್ಬ ಆಕರ್ಷಿಸಬಹುದು. ಅಷ್ಟಕ್ಕೂ ಅವಳಿಗೆ ಸೌಂದರ್ಯವಷ್ಟೇ ಮುಖ್ಯವಾಗದೇ ಹೋಗಬಹುದು. ಅವನ ಮಾತು, ಸಾಂತ್ವನ, ಧಾರಾಳತನ, ಮುಗ್ಧತೆ, ಸಂಕೋಚಗಳೂ ಅವಳನ್ನು ಸೆಳೆಯಬಹುದಲ್ಲ ಎಂದು ಅನೇಕರು ಯೋಚಿಸುತ್ತಾರೆ. ಹಿಂದಿನ ಕಾಲದಲ್ಲಿ ಆಗುತ್ತಿದ್ದ ಹಾಗೆ, ಮದುವೆಯೆಂಬ ಬಂಧನ ಗಂಡನ್ನಾಗಲೀ ಹೆಣ್ಣನ್ನಾಗಲೀ ಕಟ್ಟಿಹಾಕಲಾರದು.
ಕವಾಬಾಟನ ಕಾದಂಬರಿಯಲ್ಲೂ ಅದೇ ಆಗುತ್ತದೆ. ಅವನ ಅಪ್ಪನಿಗೆ ಇಬ್ಬರು ಪ್ರೇಯಸಿಯರು: ಚಿಕಕೋ ಮತ್ತು ಓಟ. ಅವಳಲ್ಲಿ ಒಬ್ಬಳು, ಇನ್ನೊಬ್ಬಳಿಂದ ಕಿಕುಜಿಯನ್ನು ಕಾಪಾಡಲು ಹೆಣಗಾಡುತ್ತಿರುತ್ತಾಳೆ. ಕೊನೆಗೂ ಕಿಕುಜಿಯನ್ನು ಆ ಇನ್ನೊಬ್ಬಳೇ ಸೆಳೆಯುತ್ತಾಳೆ. ಅವಳ ಪ್ರೀತಿಯಲ್ಲೊಂದು ಸಹಜತೆ ಅವನಿಗೆ ಕಾಣಿಸುತ್ತದೆ. ತಾನು ತಪ್ಪು ಮಾಡುತ್ತಿದ್ದೇನೆ ಎಂದು ಆಕೆಯೇ ಹೇಳಿಕೊಂಡರು ಕೂಡ ಕಿಕುಜಿಗೆ ಪಾಪಪ್ರಜ್ಞೆ ಕಾಡುವುದಿಲ್ಲ.
ಅವನನ್ನು ಇಮುನಾರ ಎಂಬ ಹುಡುಗಿಗೆ ಕೊಟ್ಟು ಮದುವೆ ಮಾಡುವುದು ಚಿಕಕೋಳ ಉದ್ದೇಶ. ಕಿಕುಜಿಗೂ ಅವಳು ಮತ್ತು ಅವಳ ಕೈಯಲ್ಲಿರುವ ಸಾವಿರ ಕ್ರೌಂಚಪಕ್ಷಿಗಳ ಕರ್ಚೀಫು ಇಷ್ಟ. ಆದರೆ ಸಂಬಂಧಗಳ ಮಾತು ಬಂದಾಗ ಅವನು ವರ್ತಿಸುವ ರೀತಿಯೇ ಬೇರೆ. ತನ್ನ ಅಪ್ಪನನ್ನು ಸೆಳೆದುಕೊಂಡಿದ್ದ ಓಟಾಳ ಸಂಗ ಅವನಿಗೆ ಹಿತವೆನ್ನಿಸುತ್ತದೆ. ಅದಕ್ಕೆ ಕಾರಣ ಅವನಿಗೆ ಓಟಾಳ ಮೇಲಿರುವ ಪ್ರೀತಿಯೋ, ಅಪ್ಪನ ಮೇಲಿರುವ ದ್ವೇಷವೋ ಅನ್ನುವುದೂ ಅರ್ಥವಾಗುವುದಿಲ್ಲ. ಇಂಥ ಅನಿರೀಕ್ಷಿತ ಘಟನೆಗಳ ಮೂಲಕವೇ ಇಡೀ ಕತೆ ಸಾಗುತ್ತದೆ. ಅವು ನಮ್ಮ ಪಾಲಿಗೆ ಅನಿರೀಕ್ಷಿತ, ಕತೆಯ ಪಾತ್ರಕ್ಕಲ್ಲ ಎಂಬ ಕಾರಣಕ್ಕೆ ಅದು ಇಷ್ಟವಾಗುತ್ತದೆ.
ಇಂಥ ಸರಳ ಕತೆಗಳನ್ನು ಓದುವುದು ಸದ್ಯದ ಖುಷಿ. ಬೇಸಗೆಯ ಮಧ್ಯಾಹ್ನಗಳಲ್ಲಿ ಸುಮ್ಮನೆ ಕೂತಾಗ ಕಾರಂತರ ಸರಸಮ್ಮನ ಸಮಾಧಿ’ಯ ಸರಸಿ, ಸೀತಕ್ಕ ಕಣ್ಮುಂದೆ ಬರುತ್ತಾರೆ. ಅವರ ಮೂಲಕ ಕಾದಂಬರಿಯನ್ನು ನೋಡಬೇಕು ಅನ್ನಿಸುತ್ತದೆ. ಇದ್ದಕ್ಕಿದ್ದ ಹಾಗೆ de-construction ಥಿಯರಿ ನೆನಪಾಗುತ್ತದೆ. ಓದಿದ ಕತೆಯನ್ನು ಮತ್ತೊಂದು ಕ್ರಮದಲ್ಲಿ ಅರ್ಥ ಮಾಡಿಕೊಳ್ಳುವ ಪ್ರಯತ್ನವಂತೆ ಅದು. ಲೇಖಕನ ದೃಷ್ಟಿಕೋನ ಬದಿಗಿಟ್ಟು, ಮತ್ತೊಂದು ಪಾತ್ರದ ದೃಷ್ಟಿಕೋನದಿಂದ ನೋಡಿದಾಗ ಕಾದಂಬರಿಯ ನೆಲೆಯೇ ಬದಲಾಗಬಹುದಲ್ಲ. ಉದಾಹರಣೆಗೆ ನನ್ನವಳು ನನ್ನೆದೆಯ ಹೊನ್ನಾಡನಾಳುವಳು, ಬೆಳಗುಗೆನ್ನೆಯ ಚೆಲುವೆ ನನ್ನ ಹುಡುಗಿ ಕವಿತೆಯಲ್ಲಿ ಬಂಗಾರದೊಡವೆಗಳ ಬಯಸಿಲ್ಲ ಮನಸಿನಲಿ, ಬಂಗಾರದಂಥ ಹುಡುಗಿ ಎಂಬ ಸಾಲು ಬರುತ್ತದೆ. ಇದು ಕವಿಯ ಆಶಯವೋ ಅವಳ ಸ್ಥಿತಿಯೋ ಅನ್ನುವುದು ನಮಗೆ ಗೊತ್ತಿಲ್ಲ. ನಮಗೂ ಕೂಡ ಬಂಗಾರದೊಡವೆಗಳ ಬಯಸದ ಬಂಗಾರದಂಥ ಹುಡುಗಿ ಆ ಕ್ಷಣ ಇಷ್ಟವಾಗುತ್ತಾಳೆ. ಅದೇ, ಡಿವಿಜಿಯವರ ಅಂತಃಪುರಗೀತೆ ಏನೀ ಮಹಾನಂದವೇ’ ಕವಿತೆಯಲ್ಲಿ ಆಭರಣ ಕೊಟ್ಟುಕೊಂಡ ಸುಂದರಿಯ ವರ್ಣನೆ ಬರುತ್ತದೆ. ಆಗ ನಮಗೆ ಆಭರಣಗಳಿಂದ ಅಲಂಕೃತಳಾದ ಹುಡುಗಿ ಇಷ್ಟವಾಗತೊಡಗುತ್ತಾಳೆ. ಹೀಗೆ ನಮ್ಮೊಳದೇ ಒಂದು ಸಂಘರ್ಷವೋ ವಿರೋಧಾಭಾಸವೂ ಸೃಷ್ಟಿಯಾಗುತ್ತದೆ. ಅದನ್ನು ನಾವು ಹೇಗೆ ಮೀರುತ್ತೇವೆ ಅನ್ನುವುದು ನಿಜಕ್ಕೂ ನಮ್ಮ ಮುಂದಿರುವ ಸವಾಲು.
ಬೇಸಗೆಯಲ್ಲಿ ವಿಚಿತ್ರವಾದ ಹೂವುಗಳೂ ಅರಳುತ್ತವೆ. ಸುಗಂಧ ಬೀರುತ್ತಾ ಇಡೀ ಕಾಡನ್ನೇ ಪುಷ್ಪವತಿಯನ್ನಾಗಿ ಮಾಡುತ್ತವೆ. ಅವುಗಳತ್ತ ನಮ್ಮ ಕಣ್ಣೇ ಹಾಯುವುದಿಲ್ಲ. ತೇಜಸ್ವಿಯ ಕಾದಂಬರಿಯಲ್ಲಿ ಬರುವ ಹಕ್ಕಿಗಳ ಹೆಸರನ್ನಷ್ಟೇ ಕೇಳಿ ಖುಷಿಪಟ್ಟಿದ್ದ ಗೆಳೆಯ, ಅದ್ಭುತ ಛಾಯಾಗ್ರಾಹಕ ಸತ್ಯಬೋಧ ಜೋಶಿ, ಅವನ್ನೆಲ್ಲ ಚಾರ್ಮಾಡಿ ಘಾಟಿಯ ಉದ್ದಕ್ಕೂ ನೋಡಿದಾಗ ಬೆರಗಾದರು. ಸಾಹಿತ್ಯದಿಂದಲೋ ಸುತ್ತಾಟದಿಂದಲೋ ಏನು ಉಪಯೋಗ ಎಂದು ಕೇಳುವವರಿಗೆ ಅವರ ಮಾತು ಉತ್ತರವಾಗಬಹುದು: ಇಂಥ ಪ್ರಯಾಣ ನಂಗಿಷ್ಟ. ನನ್ನ ಮಗಳಿಗೆ ಮುಂದೆ ನಾನು ಇಂಥ ಕಡೆ ಹೋಗಿದ್ದೆ, ಇಂಥ ಹಕ್ಕಿ ನೋಡಿದ್ದೆ ಅಂತ ಹೇಳಬಹುದು. ಇಲ್ಲದೇ ಹೋದರೆ ನಾನೇನು ಹೇಳಲಿ, ನನ್ನ ಜಗತ್ತು ಯಾವುದು ಅಂತ ಹೇಗೆ ತೋರಿಸಲಿ. ನನ್ನಲ್ಲಿ ಅವಳಿಗೆ ತೋರಿಸೋದಕ್ಕೆ ದೊಡ್ಡ ಮನೆಯೋ ವೈಭವದ ಬದುಕೋ ಇಲ್ಲ. ಅವಳಿಗೆ ನಾನು ಕೊಡಬಹುದಾದದ್ದು ನನ್ನ ಇಂಥ ಅನುಭವದ ತುಣುಕೊಂದನ್ನು ಮಾತ್ರ.
ಮಕ್ಕಳಿಗೆ ಅವೆಲ್ಲ ಬೇಕಾ ಎಂಬ ಪ್ರಶ್ನೆಯೂ ಇಂಥ ಹೊತ್ತಲ್ಲಿ ಅನೇಕರನ್ನು ಕಾಡೀತು. ಆದರೆ ಎರಡೂ ಜಗತ್ತನ್ನು ಕಂಡುಕೊಳ್ಳುವುದು ಅವರವರ ಭಾಗ್ಯ. ಆದರೆ ಅದಕ್ಕೆ ಬೇಕಾದ ಅವಕಾಶವನ್ನಷ್ಟೇ ನಾವು ಕಲ್ಪಿಸಬಹುದು. ನಮ್ಮ ಬಾಲ್ಯದ
ಜಗತ್ತೂ ಹಾಗೇ ಇತ್ತೆಂದು ಕಾಣುತ್ತದೆ. ಬಹುಶಃ ಅಲ್ಲಿ ಮತ್ತಷ್ಟು ಸಂಘರ್ಷಗಳಿದ್ದವೇನೋ?
ಈ ವರ್ಷ ಮಾವಿನಮಿಡಿಯಿಲ್ಲ. ಹೊತ್ತಲ್ಲದ ಹೊತ್ತಲ್ಲಿ ಮಳೆ ಸುರಿಯುತ್ತದೆ. ದೇವಸ್ಥಾನದ ಜೀರ್ಣೋದ್ಧಾರ ಆಗಿಲ್ಲ, ಭಕ್ತಾದಿಗಳು ಹೆಚ್ಚಾಗಿದ್ದಾರೆ. ದೇವರ ಮಹಿಮೆಯ ಬಗ್ಗೆ ಪ್ರಚಾರ ಬೇಕು, ದುಡ್ಡಂತೂ ಧಾರಾಳವಾಗಿ ಹರಿದು ಬರುತ್ತದೆ. ಭಕ್ತರು ಉದಾರಿಗಳಾಗಿದ್ದಾರೆ.
ಉದಾರಿಗಳಾಗಬೇಕಾದದ್ದು ಭಕ್ತರೋ ದೇವರೋ ಎಂಬ ಗೊಂದಲದಲ್ಲಿ ಅರ್ಚಕರು ನಿಂತಿದ್ದರು. ದೇವರು ಉದಾರಿಯಾದರೆ ಇಡಿ ಪ್ರದೇಶ ಸುಭಿಕ್ಷವಾಗುತ್ತದೆ. ಭಕ್ತರು ಉದಾರಿಯಾದರೆ ದೊಡ್ಡ ದೇವಸ್ಥಾನ ಕಟ್ಟುತ್ತಾರೆ. ರಾಜಮಹಾರಾಜರು ಕಟ್ಟಿಸಿದ ದೇವಾಲಯಗಳನ್ನು ಪ್ರಾಚ್ಯವಸ್ತು ಇಲಾಖೆ ಶಿಲ್ಪಕಲೆಯೆಂಬ ಹೆಸರಲ್ಲಿ ಕಾಪಾಡುತ್ತದೆ. ಅಲ್ಲಿ ದೇವರೂ ಇಲ್ಲ. ಭಕ್ತಿಯೂ ಇಲ್ಲ, ಕೇವಲ ಸೌಂದರ್ಯ ಮಾತ್ರ. ಈಗಿನ ಹೊಸ ದೇವಾಲಯಗಳಲ್ಲಿ ಸೌಂದರ್ಯವೂ ಇಲ್ಲ, ಭಕ್ತಿಯೂ ಇಲ್ಲ. ಯಾರೋ ಜ್ಯೋತಿಷಿ ಎಳ್ಳು ಕೊಡಿ, ನೀರು ಕೊಡಿ, ಉಂಗುರ ಧರಿಸಿ, ಹಾರ ಹಾಕಿಕೊಳ್ಳಿ, ಹರಕೆ ಹೇಳಿ ಎಂದು ಸಲಹೆ ಕೊಡುತ್ತಾ ಭಯಂಕರ ರಗಳೆ ಮಾಡುತ್ತಿರುತ್ತಾರೆ. ಅದನ್ನು ನಂಬಿಕೊಂಡು ಹುಡುಗ ಹುಡುಗಿಯರೂ ತಾಯಿತ ಹಾಕಿಕೊಂಡು, ಕೈಗೊಂದು ದಾರ ಕಟ್ಟಿಕೊಂಡು ಓಡಾಡುತ್ತಾರೆ.
ನಮ್ಮ ಆತ್ಮವಿಶ್ವಾಸ, ಆರೋಗ್ಯವಂತ ಉಡಾಫೆ, ತಮಾಷೆ ಮಾಡುವ ಗುಣ ಮತ್ತು ನಮ್ಮ ಮೇಲೆ ನಮಗೇ ಇರುವ ನಂಬಿಕೆ ಕೂಡ ಪ್ರಾಚ್ಯವಸ್ತು ಸಂಗ್ರಹಾಲಯ ಸೇರಿಕೊಂಡಿದೆಯೇನೋ ಎಂದು ಅನುಮಾನವಾಗುತ್ತದೆ.

Friday, March 26, 2010
ಪೇಜಾವರ
ಸದಾಶಿವ ತುಂಬ ಒಳ್ಳೆಯ ಬರಹಗಾರ. ಇವತ್ತಿಗೂ ಅವನನ್ನು ನಾನು ನೆನಪಿಸ್ಕೋತೇನೆ’ ಅಂತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅನಂತಮೂರ್ತಿಯವರು ಹೇಳಿದ್ದು ಮಾರನೆಯ ದಿನ ಪತ್ರಿಕೆಗಳಲ್ಲೂ ವರದಿಯಾಯಿತು. ಅವರು ಹೇಳಿದ ಸದಾಶಿವ ಯಾರು ಎನ್ನುವ ಬಗ್ಗೆ ತಲೆಕೆಡಿಸಿಕೊಳ್ಳುವ ಆಸಕ್ತಿ ಇಂಗ್ಲಿಷ್ ಪತ್ರಿಕೆಯ ವರದಿಗಾರರಿಗೆ ಇರಲಿಲ್ಲ. ಕನ್ನಡ ಪತ್ರಿಕೆಗಳ ವರದಿಗಾರರು ಅದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಲಿಲ್ಲ. ಅಷ್ಟಕ್ಕೂ ಅವರಲ್ಲಿ ಅನೇಕರಿಗೆ ಇಬ್ಬರೂ ಸದಾಶಿವರಿರುವ ವಿಚಾರವೇ ಗೊತ್ತಿರಲಿಲ್ಲ.
ಆ ಸುದ್ದಿ ಪತ್ರಿಕೆಯಲ್ಲಿ ಬಂದ ದಿನವೇ, ಪೇಪರ್ ಓದುತ್ತಾ ರಸ್ತೆ ದಾಟುತ್ತಿದ್ದ ಸಾಹಿತ್ಯಾಸಕ್ತನೊಬ್ಬನ್ನು ಅಪರಿಚಿತ ವಾಹನವೊಂದು ತಡವಿಕೊಂಡು ಹೋಯಿತು. ಕೈಯಲ್ಲಿ ಪೇಪರ್ ಹಿಡಿದುಕೊಂಡೇ ಅವನು ಪ್ರಾಣಬಿಟ್ಟಿದ್ದ. ಪತ್ರಿಕೆ ಓದುತ್ತಾ ಕನ್ನಡ ಸರಸ್ವತಿಯ ಸೇವೆ ಮಾಡುತ್ತಾ ಪ್ರಾಣಬಿಟ್ಟದ್ದರಿಂದ ಅವನಿಗೆ ತಕ್ಷಣವೇ ಸ್ವರ್ಗಕ್ಕೆ ಪ್ರವೇಶ ಸಿಕ್ಕಿತು. ಪತ್ರಿಕೆ ಕಂಕುಳಲ್ಲಿಟ್ಟುಕೊಂಡೇ ಆ ಸಾಹಿತ್ಯಾಸಕ್ತ ಸ್ವರ್ಗಕ್ಕೆ ಕಾಲಿಟ್ಟ. ಅಲ್ಲಿನ ಸೊಬಗನ್ನು ನೋಡಿ ಬೆರಗಾಗುತ್ತಾ, ಪತ್ರಿಕೆಯನ್ನು ಅಲ್ಲಿದ್ದ ಅಮೃತಶಿಲೆಯ ಹಾಸಿನ ಮೇಲಿಟ್ಟು ಸ್ವರ್ಗದಲ್ಲೊಂದು ಸುತ್ತು ಹಾಕಲು ಹೊರಟ.
ಆ ಕಲ್ಲುಹಾಸಿನ ಮೇಲೆ ವಾಕಿಂಗ್ ಮುಗಿಸಿ ಬಂದ ಜಿಎಸ್ ಮತ್ತು ಕೆ ಎಸ್ ಆಸೀನರಾದರು. ಎಂದಿನಂತೆ ನವ್ಯ ಸಾಹಿತ್ಯ ಕ್ರಮೇಣ ನಶಿಸುತ್ತಿದೆ, ಬಂಡಾಯಕ್ಕೆ ಮೊದಲಿನ ದಮ್ಮಿಲ್ಲ, ದಲಿತ ಸಾಹಿತ್ಯದಲ್ಲಿ ಹೊಸ ಭರವಸೆಯ ಲೇಖಕರು ಹುಟ್ಟುತ್ತಿಲ್ಲ. ನಾನೀಗ ಅಲ್ಲಿದ್ದರೆ ಒಂದು ಅದ್ಭುತವಾದ ಕಾದಂಬರಿ ಬರೆಯುತ್ತಿದ್ದೆ ಎಂದು ಕೆಎಸ್ ಉತ್ಸಾಹದಲ್ಲಿ ಮಾತಾಡುತ್ತಿದ್ದರು. ಜಿಎಸ್ ಕೇಳಿಸಿಕೊಳ್ಳುತ್ತಿದ್ದರು.
ಅಷ್ಟು ಹೊತ್ತಿಗೆ ಜಿಎಸ್ ಕೈಗೆ ಸಾಹಿತ್ಯಾಸಕ್ತ ಬಿಟ್ಟು ಹೋಗಿದ್ದ ಪತ್ರಿಕೆ ಸಿಕ್ಕಿತು. ಅದನ್ನೆತ್ತಿಕೊಂಡು ಓದುತ್ತಾ, ಕೆಎಸ್ ಮಾತಿನ ದಾಳಿಯಿಂದ ಸ್ವಲ್ಪ ಮಟ್ಟಿಗೆ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಂತೆ ಅವರಿಗೆ ಅನಂತಮೂರ್ತಿಯವರ ಹೇಳಿಕೆ ಕಾಣಿಸಿತು. ಅದನ್ನು ಓದುತ್ತಲೇ ಖುಷಿಯಾಗಿ ಜಿಎಸ್ ನೋಡೋ ಇಲ್ಲಿ, ಅನಂತಮೂರ್ತಿ ನನ್ನ ಬಗ್ಗೆ ಹೇಳಿದ್ದಾನೆ’ ಅಂದರು ಜಿಎಸ್.
ಕೆಎಸ್ ಪತ್ರಿಕೆಯನ್ನು ಕಸಿದುಕೊಂಡು ಓದತೊಡಗಿದರು. ಯಾವುದೋ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅನಂತಮೂರ್ತಿಯವರು ಮಾತಾಡಿದ್ದು ವರದಿಯಾಗಿತ್ತು. ಈ ಬರಹಗಳು ತುಂಬಾ ಚೆನ್ನಾಗಿವೆ. ಇವನ್ನು ಓದುತ್ತಿದ್ದರೆ ನನಗೆ ಸದಾಶಿವ ನೆನಪಾಗುತ್ತಾನೆ. ಸದಾಶಿವ ತುಂಬ ಒಳ್ಳೆಯ ಬರಹಗಾರ. ಇವತ್ತಿಗೂ ಅವನು ನನ್ನ ಮೆಚ್ಚಿನ ಲೇಖಕ ಎಂದು ಅನಂತಮೂರ್ತಿ ಹೇಳಿದರು’ ಎಂದು ವರದಿಗಾರ ಬರೆದಿದ್ದ. ಕೆಎಸ್ ಅದನ್ನು ಓದಿ ಗಹಗಹಿಸಿ ನಕ್ಕರು. ಏನಾಯಿತು ಎಂಬಂತೆ ಜಿಎಸ್ ತಲೆಯೆತ್ತಿ ನೋಡಿದರು.
ಮೂರ್ತಿ ಹೇಳಿದ್ದು ನನ್ನ ಬಗ್ಗೆ’ ಅಂದರು ಕೆಎಸ್.
ಇಲ್ಲ, ನನ್ನ ಬಗ್ಗೆ ಹೇಳಿದ್ದು. ನಿನ್ನನ್ನು ಅವರು ಮರೆತು ಯಾವ ಕಾಲವಾಯಿತೋ ಏನೋ?’ ಎಂದು ಜಿಎಸ್ ಗಂಭೀರವಾಗಿ ಹೇಳಿದರು.
ನಾನೂ ಅನಂತೂ ಎಂಥಾ ಸ್ನೇಹಿತರು ಗೊತ್ತೇನೋ ನಿಂಗೆ. ನಾವು ಜೊತೆಗೇ ಕತೆ ಬರೀತಿದ್ದವರು. ನನ್ನ ಬಹಳಷ್ಟು ಕತೆಗಳನ್ನು ಅವನು ಪ್ರಿಂಟಾಗುವ ಮೊದಲೇ ಓದಿದ್ದ. ನಿನ್ನ ನೆನಪಿರೋ ಚಾನ್ಸೇ ಇಲ್ಲ’ ಕೆಎಸ್ ಹಳೆಯ ಸ್ನೇಹವನ್ನು ನೆನಪಿಸಿಕೊಂಡರು.
ಸರಿ ಅಂತ ಸುಮ್ಮನಾಗಲು ಹೊರಟ ಜಿಎಸ್, ಇದ್ದಕ್ಕಿದ್ದ ಹಾಗೆ ವಾದಿಸುವ ಹುರುಪು ಬಂದವರ ಹಾಗೆ ಮಾತು ಶುರುಮಾಡಿದರು. ಸಾಧ್ಯವೇ ಇಲ್ಲ, ನನ್ನ ಬಗ್ಗೇನೇ ಬರೆದದ್ದು. ನಾವಿಬ್ಬರೂ ಮೈಸೂರಲ್ಲಿ ಕಾಫಿ ಹೌಸಲ್ಲಿ ಕೂತು ಕತೆ ಬಗ್ಗೆ ಮಾತಾಡ್ತಿದ್ದೆವು. ನನ್ನ ಎಷ್ಟೋ ಕತೆಗಳನ್ನು ಅನಂತು ತುಂಬಾ ಹೊಗಳ್ತಿದ್ದ’.
ಹೀಗೆ ಮಾತಿಗೆ ಮಾತು ಬೆಳೆಯುತ್ತಾ ಹೋಯಿತು. ಜಿಎಸ್ ತಾನು ಸಿಕ್ಕು’ ಕತೆ ಬರೆದ ಸಂದರ್ಭವನ್ನೂ ಅದನ್ನು ಸಿನಿಮಾ ಮಾಡಲು ಹೋರಾಡಿದ್ದನ್ನೂ ಹೇಳಿಕೊಂಡರು. ಅಪಘಾತ’ ಕತೆ ಬರೆದದ್ದು ಒಂದು ಸತ್ಯಘಟನೆ ಆಧರಿಸಿಯೇ ಅಂದರು. ಚಪ್ಪಲಿಗಳು ಕತೆ ಬರೆಯಲು ವೈಎನ್‌ಕೆ ಕಥಾವಸ್ತು ಕೊಟ್ಟದ್ದು, ಅದನ್ನೇ ಇಟ್ಟುಕೊಂಡು ಲಂಕೇಶ್ ನಾನಲ್ಲ’ ಅನ್ನೋ ಕತೆ ಬರೆದಿದ್ದು. ತನ್ನ ಕತೆಯೇ ಅತ್ಯುತ್ತಮ ಎಂದು ವೈಎನ್‌ಕೆ, ಅನಂತಮೂರ್ತಿ ಎಲ್ಲರೂ ಹೇಳಿದ್ದು- ಹೀಗೆ ಜಿಎಸ್ ಮತ್ತಷ್ಟು ಘಟನೆಗಳನ್ನು ನೆನಪು ಮಾಡಿಕೊಟ್ಟರು.
ಕೆಎಸ್ ಸುಮ್ಮನಿರಲಿಲ್ಲ. ನನ್ನ ಸಮಗ್ರ ಕತೆಗಳಿಗೆ ಅನಂತು ಒಂದು ಟಿಪ್ಪಣಿ ಬರೆದಿದ್ದಾನೆ, ಓದಿದ್ದೀಯಾ? ನಾವಿಬ್ರೂ ಸೇರಿ ಏನೇನು ಆಟ ಆಡಿದ್ದೀವಿ ಗೊತ್ತೇನೋ ನಿಂಗೆ. ಇಬ್ಬರೂ ಆ ಕಾಲಕ್ಕೆ ಬಡವರಾಗಿದ್ವಿ. ಆದರೆ ಬಡತನ ತೋರಿಸಿಕೊಳ್ತಿರಲಿಲ್ಲ. ಕ್ಷ್ವಾರ ಮಾಡಿಸೋದಕ್ಕೆ ಇಬ್ಬರೂ ಜೊತೆಗೇ ಹೋಗ್ತಿದ್ವಿ. ಒಂದ್ಸಾರಿ ನಾನು ತಮಾಷೆ ಮಾಡೋದಕ್ಕೆ ಅಂತ ನನ್ನ ತಮ್ಮ ಇವನು, ಸಣ್ಣದಾಗಿ ಕಟ್ಟಿಂಗ್ ಮಾಡು’ ಅಂದಿದ್ದೆ. ಕಟ್ಟಿಂಗ್ ಮುಗಿಸಿ ಹೊರಡ್ತಾ ದುಡ್ಡು ನಮ್ಮಣ್ಣನ ಹತ್ರ ತಗೊಳ್ಳಿ’ ಅಂತ ಅನಂತು ಹೇಳಿ ಹೊರಟು ಹೋಗಿದ್ದ. ಅಂಥಾ ತರಲೆಗಳು ನಾವು. ಯಾರಾದ್ರೂ ಬಕ್ಕತಲೆಯವರು ಕಂಡ್ರೆ ಇದ್ದಕ್ಕಿದ್ದ ಹಾಗೆ ಅನಂತು ನಿನ್ನ ಟೋಫನ್‌ಗೆ ಎಷ್ಟು ಕೊಟ್ಟೆ’ ಅಂತ ಕೇಳ್ತಿದ್ದ. ನಂದು ಟೋಫನ್ ಅಂತ ಇಬ್ಬರೂ ಸೇರಿ ಅವನನ್ನು ನಂಬಿಸಿಬಿಡ್ತಿದ್ವಿ.’
ಆದ್ರೆ ನೀನು ಪತ್ರಕರ್ತರು ಬರೆಯೋ ವರದಿ ಥರದ ಕತೆ ಬರೀತಿ ಅಂತ ಅನಂತು ನಿನ್ನ ತಿರಸ್ಕಾರದಿಂದ ಕಾಣ್ತಿದ್ದ’ ಅಂದರು ಜಿಎಸ್.
ಅದು ಆರಂಭದಲ್ಲಿ. ಆದ್ರೆ ನಾನು ನಲ್ಲಿಯಲ್ಲಿ ನೀರು ಬಂದದ್ದು’ ಬರೆದ ನಂತರ ತುಂಬಾ ದೊಡ್ಡ ಕತೆಗಾರ ಅಂತ ಮೆಚ್ಕೊಂಡಿದ್ದ. ನಿನ್ನ ಕತೆಗಳನ್ನು ಅವನು ಏಕಾಂತದಲ್ಲಿ ಮೆಚ್ಕೋತಿದ್ದ, ಅದೂ ಅನುಕಂಪದಿಂದ’
ಜಿಎಸ್‌ಗೆ ಸಿಟ್ಟು ಬಂತು. ನಿನ್ನ ರಾಮನ ಸವಾರಿ ಸಂತೆಗೆ ಹೋದದ್ದು’ ಸಿನಿಮಾ ಆಗಬೇಕು ಅಂತ ಆಶೆಯಿತ್ತು ನಿಂಗೆ. ಆಗಲಿಲ್ಲ. ನನ್ನ ಸಿಕ್ಕು’ ಸಿನಿಮಾ ಆಯ್ತು. ಅದಕ್ಕೇ ನಿಂಗೆ ಹೊಟ್ಟೆಕಿಚ್ಚು’ ಎಂದು ಕೋಪದಿಂದ ಹೇಳಿದರು. ಸಿನಿಮಾ ಆದ್ರೇನಂತೆ. ರಿಲೀಸ್ ಆಗಿಲ್ಲವಲ್ಲ’ ಎಂದು ಕೆಎಸ್ ಕೊಂಚ ಜೋರಾಗಿಯೇ ಗೊಣಗಿಕೊಂಡರು. ಮತ್ತೆ ಸ್ವಲ್ಪ ಹೊತ್ತು ಇಬ್ಬರೂ ಸುಮ್ಮನೇ ಕೂತರು.
ಹೋಗ್ಲಿ ಬಿಡೋ, ಯಾರ ಬಗ್ಗೆ ಹೇಳಿದ್ರೆ ಏನಂತೆ? ಅದಕ್ಕೋಸ್ಕರ ನಾವು ಜಗಳ ಆಡೋದು ಬೇಡ ಬಿಡು. ನಿನ್ನ ಬಗ್ಗೇನೇ ಹೇಳಿದ್ದು ಅಂತಿಟ್ಕೋ. ಐ ವಿತ್‌ಡ್ರಾ’
ಅಷ್ಟು ಹೇಳಿ ಜಿ ಎಸ್ ಸುಮ್ಮನಾದರು. ಕೆ ಎಸ್‌ಗೆ ಸಮಾಧಾನವಾದಂತೆ ಕಾಣಲಿಲ್ಲ. ಎದ್ದು ಹೋಗಿ, ಸ್ವರ್ಗದ ಅಂಚಲ್ಲಿ ನಿಂತು ಕೆಳಗೆ ನೋಡಿದರು. ತಮಗೆ ಗೊತ್ತಿದ್ದವರು ಯಾರಾದರೂ ಕಾಣಿಸುತ್ತಾರೇನೋ ಎಂದು ಹುಡುಕಾಡಿದರು. ಯಾರೂ ಕಾಣಿಸಲಿಲ್ಲ. ಯಾವುದೋ ಬೀದಿಯಲ್ಲಿ ಒಂದಷ್ಟು ಮಂದಿ ಹೆಂಗಸರು ಬಿಂದಿಗೆ ಹಿಡಕೊಂಡು ನಲ್ಲಿಯಲ್ಲಿ ನೀರು ಬರಲಿಲ್ಲ ಎಂದು ಗೊಣಗುತ್ತಿದ್ದರು. ತಾನು ಕತೆ ಬರೆದು ಇಷ್ಟು ವರ್ಷಗಳಾದರೂ ಸಮಸ್ಯೆ ನೀಗಿಲ್ಲವಲ್ಲ ಎಂದುಕೊಂಡು ಮತ್ತೊಂದು ದಿಕ್ಕಿಗೆ ತಿರುಗಿ ಕಣ್ಣು ಹಾಯಿಸಿದರೆ ರಾಮನ ಸವಾರಿ ಸಂತೆಗೆ ಹೊರಟಿತ್ತು. ಮತ್ತದೇ ಕತೆ ಎಂದು ಗೊಣಗಿಕೊಂಡು ಬಂದು ಪೇಪರ್ ಕೈಗೆತ್ತಿಕೊಂಡು ಜಿಎಸ್ ಮುಖ ನೋಡಿದರು. ಅದು ಸಿಕ್ಕುಗಟ್ಟಿತ್ತು. ಇದ್ದಕ್ಕಿದ್ದಂತೆ ಕೆ. ಎಸ್. ದೊಡ್ಡದನಿಯಲ್ಲಿ ಇಲ್ನೋಡೋ’ ಅಂತ ಕೂಗಿಕೊಂಡರು. ಮತ್ತದೇ ರಗಳೆ ಎತ್ತುತ್ತಾನೆ ಅಂದುಕೊಂಡು ಜಿಎಸ್ ಪ್ರತಿಕ್ರಿಯಿಸಲಿಲ್ಲ. ನೋಡೋ ಇಲ್ಲಿ, ನಾಡಿಗ, ಚಿಮೂ, ಎನ್ನೆಸ್ಸೆಲ್ ನಾಮರ್ದಗಳು ಅಂತ ಪೇಪರಲ್ಲಿ ಬರೆದಿದ್ದಾರೆ. ಚಂಪಾ ಮಾತಾಡ್ತಾ ಹಾಗಂದಿದ್ರಂತೆ’ ಅಂತ ಕೆಎಸ್ ಹೇಳಿದರೂ ಜಿಎಸ್‌ಗೆ ಉತ್ಸಾಹ ಬರಲಿಲ್ಲ. ಏನಾದ್ರೂ ಬರ್ಕೊಳ್ಳಲಿ ಬಿಡೋ’ ಅಂತ ಜಿ ಎಸ್ ಮತ್ತೆ ಹಳೇ ಭಂಗಿಗೆ ಮರಳಿದರು.
ಹಾಗಂದ್ರೆ ಹೇಗೋ ಆಗತ್ತೆ. ಇಲ್ನೋಡೀಗ, ಎನ್ನೆಸ್ಸೆಲ್ ಅಂತ ಬರೆದಿದ್ದಾರೆ, ನಾಡಿಗ ಅಂತ ಬರೆದಿದ್ದಾರೆ. ಅವರು ಯಾರೂ ಅಂತ ಎಲ್ಲರಿಗೂ ಹೇಗೋ ಗೊತ್ತಾಗುತ್ತೆ. ನಮ್ಮದು ಇದೇ ಕೇಸು. ಸುಮ್ಮನೆ ಸದಾಶಿವ ಅಂತ ಹೇಳಿಬಿಟ್ರೆ ನೀನೋ ನಾನೋ ಅಂತ ಎಲ್ಲರಿಗೂ ಗೊತ್ತಾಗೋದು ಹೇಗೆ? ಇದನ್ನು ಸುಮ್ನೆ ಬಿಡಬಾರದು’ ಎಂದರು ಕೆಎಸ್. ಅವರು ಅದನ್ನು ಇತ್ಯರ್ಥ ಮಾಡಲೇಬೇಕು ಎಂಬ ತೀರ್ಮಾನಕ್ಕೆ ಬಂದಂತಿತ್ತು. ಜಿಎಸ್ ಅದನ್ನು ಮರೆಯಲು ನಿರ್ಧರಿಸಿದ್ದರು.
ಅದಾಗಿ ಒಂದು ವಾರಕ್ಕೆ ದಂತಗೋಪುರದಲ್ಲಿ ಕೂತು ಜಿಎಸ್ ದಣಿವಾರಿಸಿಕೊಳ್ಳುತ್ತಿದ್ದರು. ಅಷ್ಟು ಹೊತ್ತಿಗೆ ಕೆಎಸ್ ಓಡೋಡಿ ಬರುತ್ತಿರುವುದು ಕಾಣಿಸಿತು. ಬಂದವರೇ ಏದುಸಿರು ಬಿಡುತ್ತಾ, ಬೇಗ ಬಾ, ಒಂದು ತಮಾಷೆ ತೋರಿಸ್ತೀನಿ’ ಅಂದರು ಕೆಎಸ್. ಏನು ಅಂತ ಕೇಳುವುದರೊಳಗೆ ಜಿಎಸ್ ಕೈ ಹಿಡಕೊಂಡು ಹೊರಟೇ ಬಿಟ್ಟರು.
ಇಬ್ಬರೂ ಸ್ವರ್ಗದ ಅಂಚಿಗೆ ಬಂದು ನಿಂತರು. ಯಾರಿಗಾದ್ರೂ ನಮಗೆ ಬಂದ ಅನುಮಾನ ಬರುತ್ತೇನೋ ಅಂತ ಕಾದೆ. ಎಲ್ಲರೂ ಹಾಳುಬಿದ್ದುಹೋಗಿದ್ದಾರೆ ಕಣಯ್ಯ. ಒಬ್ಬರಿಗೂ ಸಾಹಿತ್ಯದಲ್ಲಿ ನಿಜವಾದ ಆಸಕ್ತಿ ಇಲ್ಲ. ಅನಂತು ಹಾಗೆ ಹೇಳಿದ್ದು ಯಾರ ಬಗ್ಗೆ ಅಂತ ತಿಳ್ಕೊಳ್ಳೋ ಆಸಕ್ತಿಯೂ ಇಲ್ಲ. ಅದಕ್ಕೇ ಒಂದು ಉಪಾಯ ಮಾಡಿದ್ದೀನಿ. ಅಲ್ನೋಡು, ಅಲ್ಲಿ, ನೀಲಿ ಶರ್ಟು ಹಾಕ್ಕೊಂಡಿದ್ದಾನಲ್ಲ, ಅವನ ತಲೆಯೊಳಗೆ ಈ ಪ್ರಶ್ನೆ ಬಿಟ್ಟಿದ್ದೇನೆ. ಅವನು ಅನಂತು ಮನೆಗೇ ಹೋಗ್ತಿದ್ದಾನೆ. ಈಗ ಗೊತ್ತಾಗತ್ತೆ ತಡಿ, ನೀನೋ ನಾನೋ ಅಂತ’ ಎಂದು ಹುರುಪಿನಿಂದ ಜಿಎಸ್ ಮುಖ ನೋಡಿದರು. ಜಿಎಸ್ ನಿರುತ್ಸಾಹದಿಂದ ಸುಮ್ಮನೆ ನಿಂತಿದ್ದರು.
ನೀಲಿ ಶರಟಿನ ವ್ಯಕ್ತಿ ಅನಂತಮೂರ್ತಿಯವರ ಮನೆಗೆ ಬಂದು ತನ್ನನ್ನು ಸಾಹಿತ್ಯದ ಆಸಕ್ತಿ ಇರುವ ಪತ್ರಕರ್ತ ಎಂದು ಪರಿಚಯಿಸಿಕೊಂಡಿತು. ತಪ್ಪುತಪ್ಪಾಗಿ ವರದಿ ಮಾಡ್ತೀರಯ್ಯ ನೀವೆಲ್ಲ’ ಎಂದು ಬೈಸಿಕೊಂಡಿತು. ಕೊನೆಗೆ ಧೈರ್ಯಮಾಡಿ ಪ್ರಶ್ನೆ ಕೇಳಿಯೇ ಬಿಟ್ಟಿತು.
ಸರ್, ಆವತ್ತು ಒಂದು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನೀವು ಸದಾಶಿವ ತುಂಬ ಒಳ್ಳೆಯ ಬರಹಗಾರ ಅಂದಿದ್ರಿ. ನೀವು ಹೇಳಿದ್ದು ಯಾವ ಸದಾಶಿವ ಬಗ್ಗೆ ಅಂತ ಗೊತ್ತಾಗ್ಲಿಲ್ಲ. ಯಾರ ಬಗ್ಗೆ ಅಂತ ಹೇಳ್ತೀರಾ?’ ಎಂದು ಕೇಳಿ ಉತ್ತರಕ್ಕಾಗಿ ಕಾದು ಕೂತಿತು.
ಜಿಎಸ್ ಸದಾಶಿವ ಮತ್ತು ಕೆ ಸದಾಶಿವ ಕಿವಿ ನಿಮಿರಿಸಿಕೊಂಡು ಉತ್ತರಕ್ಕಾಗಿ ಕಾದರು.
ಪೇಜಾವರ ಸದಾಶಿವ. ತುಂಬ ಒಳ್ಳೇ ಪದ್ಯ ಬರೀತಿದ್ದ, ನಾಟ್ಯೋತ್ಸವ ಅಂತ ಒಂದು ....’
ನೀಲಿ ಶರಟು ಮಾತ್ರ ಹುಸಿ ಶ್ರದ್ಧೆಯಿಂದ ಕೇಳಿಸಿಕೊಳ್ಳುತ್ತಿತ್ತು.

Tuesday, March 9, 2010
ಆಯವ್ಯಯದ ಹಿನ್ನೆಲೆಯಲ್ಲಿ ಬದುಕಿನ ಮುಂಗಡ ಪತ್ರ
ಟೀವಿಯಲ್ಲಿ ಆತ ಅವಸರವಸರವಾಗಿ ಏನೋ ಓದುತ್ತಿದ್ದರು. ಇನ್ಯಾರೋ ಕಿರುಚುತ್ತಿದ್ದರು. ಮತ್ಯಾರೋ ಹಿಂದೆ ನಿಂತುಕೊಂಡು ಕಿರುಚಾಡುತ್ತಿದ್ದರು. ಮತ್ತೊಂದೆಡೆ ಯಾರೋ ಅದರ ಬಗ್ಗೆ ವಿಶ್ಲೇಷಣೆ ಮಾಡುತ್ತಾ ಕೂತಿದ್ದರು. ಎಲ್ಲರಿಗೂ ಧಾವಂತ ಇನ್ನೊಬ್ಬರಿಗಿಂತ ತಾವೇ ಮೊದಲು ಪ್ರಶ್ನೆ ಕೇಳಿಬಿಡುವ ಆತುರ.
ಮೊನ್ನೆ ಮೊನ್ನೆ ತನಕ ಒದ್ದಾಟದಲ್ಲಿದ್ದ, ಎಲ್ಲೆಲ್ಲೋ ಓಡಾಡುತ್ತಿದ್ದ, ಚಿಂತಾಕ್ರಾಂತನಾಗಿ ಅಲೆದಾಡುತ್ತಿದ್ದ ವ್ಯಕ್ತಿ ಅಷ್ಟು ಬೇಗ ಇಡೀ ರಾಜ್ಯದ ಆಯವ್ಯಯ ಲೆಕ್ಕಾಚಾರವನ್ನು ಹಿಡಿದಿಡಲು ಸಾಧ್ಯವಾಗುತ್ತದಾ ಎಂದು ಯೋಚಿಸುತ್ತಿದ್ದೆ. ಅದಕ್ಕೋಸ್ಕರ ಆತ ಎಷ್ಟು ಗಂಟೆ ವ್ಯಯಿಸಿರಬಹುದು. ಆತನ ಸಹಾಯಕರು ಯಾವ ಮಾನದಂಡಗಳನ್ನು ಬಳಸಿರಬಹುದು. ಸುಲಭವಾಗಿ ಸಿಗುವ ಆದಾಯವನ್ನು ಬಾಚಿಕೊಂಡು, ಮುಂದಿನ ಚುನಾವಣೆಗೆ ನೆರವಾಗುವುದಕ್ಕೆ ಒಂದಷ್ಟು ರಿಯಾಯಿತಿ ತೋರಿಸಿ, ಅರ್ಥ ಪಂಡಿತರು ಹೇಳಿದ ಕೆಲವೊಂದು ಸಂಗತಿಗಳನ್ನು ಅಳವಡಿಸಿಕೊಂಡು, ಧರ್ಮಭೀರು ಅನ್ನಿಸಿಕೊಳ್ಳುವುದಕ್ಕೆ ವಿವಿಧ ಮಠಮಾನ್ಯಗಳಿಗೆ ದಾನ, ಅನುದಾನ ಕೊಟ್ಟು, ಪತ್ರಕರ್ತರ ಕಣ್ಣೊರೆಸಿದಂತೆ ಮಾಡಿ....
ಇಡೀ ರಾಜ್ಯವನ್ನು ಕಣ್ಮುಂದೆ ತಂದುಕೊಂಡು ಆತ ಕನಿಷ್ಠ ಒಂದು ಗಂಟೆ ಧ್ಯಾನಿಸಿರಬಹುದೇ? ಯಾರೋ ಯಾವತ್ತೋ ಸಿದ್ಧಮಾಡಿಟ್ಟು ಹೋದ ಒಂದು ಕೋಷ್ಠಕವನ್ನು ತುಂಬುವ ಕೆಲಸ ಮಾತ್ರ ಆಗುತ್ತಿದೆ ಎಂದು ಇವತ್ತಿನ ಬಜೆಟ್ ನೋಡಿದ ಯಾರಿಗಾದರೂ ಅನ್ನಿಸದೇ ಇರದು. ಕಾರು, ಪೆಟ್ರೋಲು, ಸಿಗರೇಟು, ಬಂಗಾರ, ಮದ್ಯ ತುಟ್ಟಿ. ಕಂಪ್ಯೂಟರ್ರು, ಮೊಬೈಲ್ ಅಗ್ಗ. ಅದ್ಯಾವುದ್ಯಾವುದೋ ಊರಿಗೆ ಎಕ್ಸ್‌ಪ್ರೆಸ್ ಹೈವೇ. ಚತುಷ್ಪಥ ರಸ್ತೆ. ಇಂಥದ್ದೇ ತುಂಬಿಕೊಂಡು ಹೊಸದಾಗಿ ಚಿಂತಿಸಲೂ ಆಗದ ಹಳೆಯ ತಲೆ.
ತುಂಬ ಮೆಲೋಡ್ರಾಮಾಟಿಕ್ ಆಗದೇ ಯೋಚಿಸಲು ಯತ್ನಿಸೋಣ. ಇತ್ತೀಚೆಗೆ ನಾವೊಂದಷ್ಟು ಸ್ನೇಹಿತರು ಯಾವುದೋ ಕಾರ್ಯನಿಮಿತ್ತ ಊರೂರು ಸುತ್ತುತ್ತಿದ್ದೆವು. ಚಿಕ್ಕಪುಟ್ಟ ಹಳ್ಳಿಗಳನ್ನೆಲ್ಲ ಸವರಿಕೊಂಡು ಹೋಗುತ್ತಿದ್ದೆವು. ಸೋಮನಮನೆ ಎಂಬ ಉತ್ತರ ಕನ್ನಡದ ಹಳ್ಳಿಯಿಂದ ರಾತ್ರೋ ರಾತ್ರಿ ಹೊರಟು, ಎಷ್ಟೋ ದೂರ ಸವೆಸಿದ ಮೇಲೆ ನಮಗೊಂದು ಪುಟ್ಟ ಅಂಗಡಿ ಸಿಕ್ಕಿತು. ರಾತ್ರಿ ಒಂಬತ್ತಾದರೂ ತೆರೆದೇ ಇದ್ದ ಆ ಅಂಗಡಿಯಲ್ಲಿ ಆತ ಮಾರುತ್ತಿದ್ದದ್ದು ಏನು ಎಂದು ನೋಡಿದರೆ ಆಶ್ಚರ್ಯ ಕಾದಿತ್ತು. ಮನೆಯಲ್ಲಿ ಮಾಡಿ ತಂದಿದ್ದ ಇಡ್ಲಿಗಳನ್ನು ಆತ ಒಂದಕ್ಕೆ ಒಂದು ರುಪಾಯಿಯಂತೆ ಮಾರುತ್ತಿದ್ದ. ಅಲ್ಲಿಗೆ ಇಡ್ಲಿ ತಿನ್ನುವುದಕ್ಕೆ ಬರುವವರಲ್ಲಿ ಹೆಚ್ಚಿನವರು ತೋಟದಲ್ಲಿ ಕೆಲಸ ಮಾಡುವವರು. ಅವರು ವಾರಕ್ಕೊಮ್ಮೆ ಅವನಿಗೆ ದುಡ್ಡು ಕೊಡುತ್ತಾರೆ. ಆ ಹುಡುಗರು ಅಲ್ಲೇಕೆ ಬಂದು ತಿನ್ನುತ್ತಾರೆ ಎಂದು ಯೋಚಿಸುತ್ತಿದ್ದೆ.
ಹಳ್ಳಿಗಳಲ್ಲಿ ರಾತ್ರಿಯೂಟವನ್ನು ಹೊಟೆಲ್ಲಿನಲ್ಲಿ ಮಾಡುವ ಸಂಪ್ರದಾಯವೇ ಇರಲಿಲ್ಲ. ಕೆಲಸಕ್ಕೆ ಹೋಗುವ ಕೂಲಿಯಾಳುಗಳು ಕೂಡ ಗಡಂಗಿಗೆ ಹೋಗಿ ಒಂದೆರಡು ಗ್ಲಾಸು ಶೇಂದಿ ಏರಿಸಿಕೊಂಡು ಹಾಡುತ್ತಾ ಮನೆಯ ಹಾದಿ ಹಿಡಿಯುತ್ತಿದ್ದರು. ಮನೆಯಲ್ಲಿ ಗಂಜಿ ಮತ್ತು ಮೀನಿನ ಚಟ್ನಿ ತಿಂದು ಮಲಗುತ್ತಿದ್ದರು. ಆದರೆ ಈ ಮಂದಿಯೇಕೆ ಇಲ್ಲಿಗೆ ಬರುತ್ತಿದ್ದಾರೆ ಎಂದು ವಿಚಾರಿಸಿದಾಗ, ಅವರ ಮನೆಯಲ್ಲಿ ಅಡುಗೆ ಮಾಡುವುದಕ್ಕೆ ಯಾರೂ ಇಲ್ಲ ಎಂದು ಗೊತ್ತಾಯಿತು.
ಅವರಲ್ಲಿ ಬಹಳಷ್ಟು ಮಂದಿಗೆ ಮದುವೆ ಆಗಿರಲಿಲ್ಲ. ಅನೇಕರಿಗೆ ಮದುವೆಯಾಗುವ ವಯಸ್ಸು ದಾಟಿತ್ತು. ಕೂಲಿ ಕಾರ್ಮಿಕರನ್ನು ಯಾರು ತಾನೇ ಮದುವೆ ಆಗ್ತಾರೆ ಅಂತ ಅಂಗಡಿಯಾತ ಬೇಸರದಿಂದ ನಕ್ಕ. ಅವನಿಗೆ ಐವತ್ತೋ ಐವತ್ತಾರೋ ಇರಬೇಕು. ನಮ್ಮ ಮದುವೆ ಆಗಿ ಹೋಗಿದ್ದು ಪುಣ್ಯ. ಈಗಿನ ಹುಡುಗರ ಅವಸ್ಥೆ ನೋಡಿ ಅಂತ ತೋರಿಸಿದ.
ಹುಡುಗರು ಇಡ್ಲಿ ತಿಂದು, ನೀರು ಕುಡಿದು ಬೀಡಿ ಸೇದುತ್ತಾ ಮಧ್ಯರಾತ್ರಿಯ ತನಕ ಅಲ್ಲೇ ಕೂತಿದ್ದರು. ಎಷ್ಟು ದಿನ ಅಂತ ಹೀಗೇ ಬದುಕ್ತಾರೆ ಹೇಳಿ, ಒಂಚೂರು ತಲೆಕೆಟ್ಟರೆ ಕೋವಿ ಹಿಡೀತಾರೆ. ಆಮೇಲೆ ಅವರನ್ನು ಹುಡುಕೋದಕ್ಕೆ ಸರ್ಕಾರ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತೆ. ಅದರ ಬದಲು ಈಗಲೇ ಇವರಿಗೇನಾದರೂ ಮಾಡೋದಕ್ಕಾಗಲ್ವಾ ಅಂದರು. ಆ ಕ್ಷಣಕ್ಕೆ ನಮಗೆಲ್ಲ ಅದೊಂದು ಸರಳವಾದ, ಆಗದ ಹೋಗದ ಮಾತಿನಂತೆ ಕಂಡಿತ್ತು.
ಗ್ರಾಮಗಳು, ಹಳ್ಳಿಗಳೂ ಹೇಗೆ ನಗರದಿಂದ ಹೊರಗೆ ಉಳಿಯುತ್ತಲಿವೆ ಎಂದು ಯೋಚಿಸಿ. ಎಲ್ಲರೂ ಚತುಷ್ಪಥ ರಸ್ತೆಯ ಬಗ್ಗೆ ಯೋಚಿಸುತ್ತಿದ್ದಾರೆ. ಖೇಣಿಯಂಥವರು ರಸ್ತೆ ಮಾಡಿ ಅದಕ್ಕೆ ಎರಡೂ ಬದಿಯಲ್ಲಿ ಬೇಲಿ ಹಾಕಿ, ಆ ರಸ್ತೆಗೆ ಹಳ್ಳಿಯ ಮಂದಿ ಕಾಲಿಡದ ಹಾಗೆ ಮಾಡುತ್ತಾರೆ. ಇವತ್ತು ಇಲ್ಲಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಹೋಗಿ ಬರಬೇಕು ಅಂದರೆ ಇನ್ನೂರು ರುಪಾಯಿ ಟೋಲ್ ಫೀ ಕಟ್ಟಬೇಕು. ಮಂಗಳೂರು ರಸ್ತೆಯಲ್ಲಿ ವೈಷ್ಣೋದೇವಿ ಸೇತುವೆಗೆ ಶತಮಾನಗಳಿಂದ ಸುಂಕ ವಸೂಲಿ ಮಾಡುತ್ತಲೇ ಇದ್ದಾರೆ.
ಒಳ್ಳೆಯ ರಸ್ತೆಗೆಂದು ಮುಂಗಡ ಪತ್ರ ಅದೆಷ್ಟೋ ಲಕ್ಷ ಕೋಟಿ ರುಪಾಯಿಗಳನ್ನು ಎತ್ತಿಡುತ್ತದೆ. ರಸ್ತೆಯೂ ನಿರ್ಮಾಣ ಆಗುತ್ತದೆ. ಆ ರಸ್ತೆಗೆ ಮತ್ತೆ ನಾವು ಟೋಲ್ ಫೀ ಕೊಟ್ಟೇ ಓಡಾಡಬೇಕು. ಬಸ್ಸುಗಳಲ್ಲಿ ಹೋದರೂ ಟಿಕೆಟ್ಟಿಗೆ ಎರಡು ರುಪಾಯಿ ಟೋಲ್ ಫೀ.
ಮೊನ್ನೆ ಕಾರ್ಕಳ ಎಂಬ ಪುಟ್ಟ ಊರಿಗೆ ನಡುರಾತ್ರಿ ಕಳೆದ ನಂತರ ತಲುಪಿದರೆ, ಅಲ್ಲಿ ಸರ್ಕಲ್ಲಿನಲ್ಲೊಬ್ಬ ಹಿರಿಯರು ಆಮ್ಲೆಟ್ಟು ಟೀ ಮಾರುತ್ತಾ ಕೂತಿದ್ದರು. ಬ್ರೆಡು, ಆಮ್ಲೆಟ್ಟು, ಟೀ ಧಾರಾಳವಾಗಿ ಸಿಗುತ್ತಿತ್ತು. ಬೆಳಗಿನ ತನಕ ದುಡಿಯುತ್ತಾರೆ ಅಂತ ಯಾರೋ ಹೇಳಿದರು. ಅಲ್ಲೇ ಪಕ್ಕದಲ್ಲಿ ಒಂದು ಟಾಟ ಸುಮೋ ನಿಂತಿತ್ತು. ಅದರೊಳಗಿನಿಂದ ನಾಲ್ಕಾರು ಕಾಲೇಜು ಹುಡುಗರು, ಒಬ್ಬಳು ಹುಡುಗಿ ಕೆಳಗಿಳಿದರು. ಅವರು ಕಾರಲ್ಲೇ ಕುಳಿತು ಕುಡಿದು ಮುಗಿಸಿದಂತಿತ್ತು. ಅವರ ಜೊತೆಗಿದ್ದ ಹುಡುಗಿ, ಒಂದು ಬ್ರೆಡ್ಡು ಆಮ್ಲೆಟ್ಟು ತಿಂದು ರಸ್ತೆ ಪಕ್ಕ ನಿಂತಿದ್ದಳು. ಸ್ವಲ್ಪ ಹೊತ್ತಿಗೆ ಅದೇ ಟಾಟಾ ಸುಮೋ ಮರಳಿ ಬಂತು. ಅದರಲ್ಲಿ ಮತ್ತೊಂದಷ್ಟು ಹುಡುಗರು ಬಂದಿದ್ದರು. ಆಕೆಯನ್ನು ಹತ್ತಿಸಿಕೊಂಡ ಸುಮೋ ಕತ್ತಲ ರಸ್ತೆಯಲ್ಲಿ ಮರೆಯಾಯಿತು.
ನಾನಿಲ್ಲಿ ರಾತ್ರಿ ಪೂರ ದುಡಿಯುತ್ತೇನೆ. ನನ್ನ ಮಗ ಬೆಳಗ್ಗೆ ಜಬರದಸ್ತು ಮಾಡಿ ನೂರೋ ಇನ್ನೂರೋ ಕಿತ್ತುಕೊಂಡು ಹೋಗುತ್ತಾನೆ. ಅವನೂ ಹೀಗೆಯೇ ಈ ಹುಡುಗರ ಜೊತೆ ಸೇರಿ ಹಾಳಾಗಿದ್ದಾನೆ. ನಾವು ಹಳ್ಳಿಗಳು ಇದ್ದದ್ದರಲ್ಲಿ ಒಳ್ಳೇದು ಅಂತೀವಿ. ಈಗ ಹಾಗೇನಿಲ್ಲ’ ಅಂತ ತುಂಬ ಹೊತ್ತು ಅಲ್ಲೇ ಕೂತಿದ್ದ ನಮ್ಮ ಜೊತೆ ಆ ಅಂಗಡಿಯ ಹಿರಿಯರು ಹೇಳಿದರು.
ಕಾರ್ಕಳದ ರಸ್ತೆಯಲ್ಲಿ ನಿಂತು ನೋಡಿದರೆ ಕುದುರೆಮುಖದ ಇನ್ನೊಂದು ಬದಿ ಹಬ್ಬಿ ನಿಂತದ್ದು ಕಾಣಿಸುತ್ತದೆ. ಕತ್ತಲಲ್ಲಿ ಆ ಆಕಾರ ನಿಗೂಢವಾಗಿ ಕಂಡು ಹಾಗೇ ನೋಡುತ್ತಾ ನಿಲ್ಲುವ ಆಸೆಯಾಗುತ್ತದೆ. ಆ ಬೆಟ್ಟಗಳಿಗೆ ಬೇಸಗೆಯಲ್ಲಿ ಕಾಡ್ಗಿಚ್ಚು ಹತ್ತಿಕೊಂಡು ಹವಳದ ಹಾರ ತೊಡಿಸಿದಂತೆ ಕಾಣುತ್ತದೆ. ಆ ಹಿರಿಯರ ಮಾತುಗಳನ್ನು ಕೇಳಿದಾಗ ಅದನ್ನೆಲ್ಲ ನೋಡಬೇಕು ಅನ್ನಿಸಲಿಲ್ಲ. ಕೆ ಎಸ್ ನ ತುಂಬ ಹಿಂದೆ ಬರೆದ ನಾಲ್ಕು ಸಾಲುಗಳು ನೆನಪಾದವು:
ಬತ್ತಿದ ಕೆರೆಯಂಗಳದಲಿ
ಹಾಡು ಹಕ್ಕಿ ಸತ್ತಿದೆ
ಅದರ ಕತೆಯ ಕೇಳಲಿಕ್ಕೆ
ಯಾರಿಗೆ ಪುರುಸೊತ್ತಿದೆ?
*********
ಸುಮ್ಮನೆ ಯೋಚಿಸುತ್ತಿದ್ದೆ. ನಾವು ಹೇಗೆ ಬದಲಾಗುತ್ತಾ ಬಂದಿದ್ದೇವೆ. ಬಡತನವನ್ನು ಮೀರುತ್ತಾ, ದಾಟುತ್ತಾ, ಆಧುನಿಕರಾಗುತ್ತಾ, ವೈಜ್ಞಾನಿಕವಾಗಿ ಮುಂದುವರಿಯುತ್ತಾ, ಗಂಟೆಗೆ ಇನ್ನೂರು ಕಿಲೋಮೀಟರ್ ವೇಗದಲ್ಲಿ ಓಡುವ ಕಾರುಗಳಲ್ಲಿ ಓಡಾಡುತ್ತಾ, ರಸಗ್ರಹಣ ಶಕ್ತಿಯನ್ನು ಮಾತ್ರ ಕಳೆದುಕೊಂಡಿದ್ದೇವೆ. ಯೂಜಿ ಕೃಷ್ಣಮೂರ್ತಿ ಹೇಳುತ್ತಿದ್ದರು. ಅಮೆರಿಕನ್ ಮಹಿಳೆ ಎಂಥ ದಡ್ಡಿಯೆಂದರೆ ಗೋಡಂಬಿ ತುಂಬಿದ ಡಬ್ಬವನ್ನು ಅಂಗಡಿಯಿಂದ ತಂದಾಗ, ಆ ಡಬ್ಬದ ಮೇಲೆ ಅದನ್ನು ತೆರೆಯುವುದು ಹೇಗೆ ಅನ್ನುವುದನ್ನೂ ಬರೆದಿರಬೇಕಾಗುತ್ತದೆ. ಇನ್‌ಸ್ಟ್ರಕ್ಷನ್ಸ್ ಟು ಓಪನ್- ಇಲ್ಲದೇ ಹೋದರೆ ಅವಳಿಗೆ ಡಬ್ಬ ತೆರೆಯುವುದು ಹೇಗೆ ಅಂತಲೂ ಗೊತ್ತಾಗುವುದಿಲ್ಲ. ಅದನ್ನೇ ಕೋತಿಯ ಕೈಗೆ ಕೊಟ್ಟರೆ ಸುಲಭವಾಗಿ ಮುಚ್ಚಳ ತೆಗೆಯುತ್ತದೆ.
ನಮಗೀಗ ಸೂಚನೆಗಳು ಬೇಕು, ಸಲಹೆ ಕೊಡುವವರು ಬೇಕು. ದಿನ ಬೆಳಗಾಗೆದ್ದು ಅರ್ಧ ಗಂಟೆ ನಡೆಯಿರಿ ಎಂದು ಹೇಳುವುದಕ್ಕೊಬ್ಬ ಡಾಕ್ಟರ್, ಎರಡು ಇಡ್ಲಿ ಜೊತೆಗೆ ಮೂರು ಕ್ಯಾರಟ್ ತುಂಡು ತಿನ್ನಿ ಎಂದು ಹೇಳುವುದಕ್ಕೆ ಒಬ್ಬ ಡಯಟೀಷಿಯನ್, ಯಾವ ಬಣ್ಣದ ಅಂಗಿ ಹಾಕಿಕೊಂಡು ಹೋಗಬೇಕು ಎಂದು ಹೇಳುವುದಕ್ಕೊಬ್ಬ ಜ್ಯೋತಿಷಿ, ಏನು ಕೆಲಸ ಮಾಡಬೇಕು ಎಂದು ಹೇಳುವುದಕ್ಕೊಬ್ಬ ಬಾಸ್, ಏನು ಕುಡಿಯಬೇಕು ಎಂದು ಹೇಳುವುದಕ್ಕೊಬ್ಬ ಬಾರ್‌ಮನ್, ಎಷ್ಟು ವೇಗದಲ್ಲಿ ಕಾರು ಓಡಿಸಬೇಕು ಎಂದು ಸೂಚಿಸುವ ಸೈನ್‌ಬೋರ್ಡ್, ಎಷ್ಟು ಗಂಟೆಗೆ ಮಲಗಬೇಕು ಎಂದು ಹೇಳುವುದಕ್ಕೆ ಒಂದು ವೆಬ್‌ಸೈಟು...
ಸತ್ಯಂ, ಶಿವಂ, ಸುಂದರಂ..

Monday, February 22, 2010
ನಿಲ್ಲಿಸದಿರು ವನಮಾಲೀ ಕೊಳಲ ಗಾನವಾ...
ಎಪ್ಪತ್ತು ಕತೆಗಳನ್ನು ಬರೆದಾದ ನಂತರ ಒಂದು ದಿನ ವೈಯನ್ಕೆಗೆ ಹೇಳಿದ್ದೆ. ಇನ್ನು ನಾನು
ಬರೆಯುವುದಿಲ್ಲ, ಅವರು ಹೇಳಿದರು : ಬರೆಯುವುದನ್ನು ನಿಲ್ಲಿಸಬೇಡ, ಪ್ರಕಟಿಸುವುದನ್ನು ನಿಲ್ಲಿಸು.
ಆವತ್ತು ಡೈರಿ ಬರೆಯಲು ಆರಂಭಿಸಿದೆ. ದಿನಕ್ಕೆ ಹತ್ತು ಪುಟದಂತೆ ಬರೆಯುತ್ತಾ ಹೋದೆ. ತಿಂಗಳಲ್ಲಿ 20 ದಿನವಂತೂ ಬರೆದೇ ಬರೆಯುತ್ತಿದ್ದೆ. ಪ್ರತಿತಿಂಗಳೂ 200 ಪುಟದ ಪುಸ್ತಕದ ತುಂಬ ನಾನು ನೋಡಿದ ಸಿನಿಮಾ, ಓದಿದ ಪುಸ್ತಕ, ಆಗಷ್ಟೇ ಹುಟ್ಟಿದ ಕತೆ, ಎಲ್ಲೋ ಓದಿದ ಕತೆಯಿಂದ ಗ್ರಹಿಸಿದ್ದು, ನ್ಯೂಯಾರ್ಕ್ ಟೈಮ್ಸಲ್ಲಿ ಬಂದು ಲೇಖನದ ಅನುವಾದ- ಹೀಗೆ ಏನಾದರೊಂದು ಬರೆಯುತ್ತಿದ್ದೆ. ಬರೆಯದೇ ಊಟ ಮಾಡುವುದಿಲ್ಲ ಎಂಬುದನ್ನು ಶ್ರದ್ಧೆಯಿಂದ ಪಾಲಿಸುತ್ತಿದ್ದೆ. ನಾಲ್ಕು ವರ್ಷ ಹಾಗೆ ಬರೆದಿಟ್ಟದ್ದು ಸುಮಾರು 60 ಪುಸ್ತಕಗಳಲ್ಲಿ ತುಂಬಿಹೋಗಿದೆ.
ಅವನ್ನೆಲ್ಲ ಎತ್ತಿ ಅಟ್ಟಕ್ಕೆ ಹಾಕುವಾಗ ಕಣ್ಣೀರು ಬಂತು. ಪ್ರಕಟಿಸುವ ಆಸೆಯಾಯಿತು. ಎಷ್ಟಾದರೂ ನಾನೇ ಬರೆದದ್ದು. ಯಾರಾದರೂ ಪ್ರಕಾಶಕರು ಕೇಳಿದರೆ ಥಟ್ಟನೆ ಇದನ್ನು ಪ್ರಕಟಿಸಿ ಅಂತ ಕೊಟ್ಟುಬಿಟ್ಟರೆ? ಏನು ಮಾಡಲಿ ಅಂತ ವೈಯನ್ಕೆಗೆ ಕೇಳಿದೆ.
ಕಿಲ್ಯುವರ್ ಬೇಬೀಸ್ ಅಂದರು. ಮರದ ಹಾಗೆ ದಿನವೂ ಹೂವು ಅರಳಿಸುತ್ತಿರಬೇಕು. ಅವನ್ನು ಕಾಪಿಟ್ಟುಕೊಳ್ಳಲು ಹೋಗಬಾರದು. ಯೋಜನಗಂಧಿಯ ಹಾಗೆ ಹೆತ್ತ ಮಕ್ಕಳನ್ನೆಲ್ಲ ನೀರಿಗೆ ಎಸೆಯಬೇಕು. ಲೇಖಕನಿಗೂ ಆ ನಿಷ್ಠುರವಾದ ನಿಲುವು ಇರಬೇಕು. ಪ್ರಕಟಿಸಬೇಕಾದ ಪುಸ್ತಕಗಳು ಯಾವುದು, ಯಾವುದು ಪ್ರಕಟಣೆಗೆ ಅರ್ಹವಲ್ಲ ಎಂಬುದು ಗೊತ್ತಿರಬೇಕು. ಎಷ್ಟೋ ಸಲ ಪ್ರಕಟಣೆಗೆ ಅರ್ಹವಾಗಿದ್ದರೂ ಪ್ರಿಂಟು ಮಾಡಲಿಕ್ಕೆ ಹೋಗಬಾರದು. ಪ್ರಕಟಿಸುವ ಆಮಿಷವೇ ಲೇಖಕನಿಗೆ ಶತ್ರು. ಅಂಥ ಆಮಿಷ ಇಲ್ಲದವರೆಂದರೆ ಕಿ ರಂ ನಾಗರಾಜ ಮತ್ತು ಬಿವಿ ಕಾರಂತ ಅಂದಿದ್ದರು ವೈಯನ್ಕೆ.
ಅದಾಗಿ ಎಷ್ಟೋ ದಿನದ ನಂತರ ಕಿರಂ ಸಿಕ್ಕಾಗ ವೈಯನ್ಕೆ ಹೇಳಿದ್ದನ್ನು ಅವರಿಗೆ ಹೇಳಿದೆ. ಅವರು ಎಂದಿನ ಉಡಾಫೆಯಲ್ಲಿ ನಕ್ಕು, ಅಯ್ಯೋ ಯಾವನ್ರೀ ಬರೀತಾನೆ ಅಂದರು. ಬರೆದು ಏನು ಮಾಡೋದಿದೆ ಹೇಳಿ. ಅಡಿಗರು ಹೇಳಿದ್ದು ಗೊತ್ತಲ್ಲ ಅಂತ ಒಂದು ಪ್ರಸಂಗ ನೆನಪಿಸಿಕೊಂಡರು: ಸಂದರ್ಭ ಅಡಿಗರ ಹುಟ್ಟುಹಬ್ಬ. ನಡೆದದ್ದು ಜಯನಗರದ ಪ್ರಿಸಂ, ದಿ ಬುಕ್ ಶಾಪ್ನಲ್ಲಿ. “ನಾನೂ, ಅಡಿಗರು ನಡೀತಾ ಹೋಗುತ್ತಿದ್ವಿ. ನೆಟ್ಟಕಲ್ಲಪ್ಪ ಸರ್ಕಲ್ ಹತ್ತಿರ ಒಬ್ಬ ಹಳ್ಳಿಯ ಹುಂಬ ರಸ್ತೆ ದಾಟುತ್ತಿದ್ದ. ಅಡಿಗರು ನನ್ನನ್ನೊಂದು ಕ್ಷಣ ತಡೆದು ನಿಲ್ಲಿಸಿ, ಅವನನ್ನು ತೋರಿಸಿ ಹೇಳಿದರು. “ನೋಡಯ್ಯಾ, ನೀನು ಆ ರಸ್ತೆದಾಟುವ ಹಳ್ಳಿಯವನನ್ನು ಹೇಗೆ ನೋಡ್ತೀಯೋ, ನನ್ನನ್ನು ಕೂಡ ಹಾಗೇ ನೋಡಬೇಕು. ನಾನು ಬೇರೆಯಲ್ಲ. ಅಲ್ಲಿ ರಸ್ತೆ ದಾಟುವ ಹಳ್ಳಿಗ ಬೇರೆಯಲ್ಲ.” ನಾವೆಲ್ಲ, ಅಡಿಗರ ಥಿಂಕಿಂಗ್ ಬಗ್ಗೆ ಮೆಚ್ಚುಗೆ ಪಡುತ್ತಿರಬೇಕಾದರೆ ಕಿ.ರಂ. ಮುಂದುವರೆಸಿದರು. “...ಮತ್ತೆ ನೀನೂ ಕೂಡ ಬೇರೆಯಲ್ಲ!”
ಕಿರಂ ಸಂಯಮದ ಗುಟ್ಟೇನು ಅಂತ ನನಗೆ ಕೊನೆಗೂ ಗೊತ್ತೇ ಆಗಲಿಲ್ಲ. ನೀವೇ ಬರೆಯಿರಿ, ನಾವು ಬರೀತೀವಿ, ನೀವು ಡಿಕ್ಟೇಟ್ ಮಾಡಿ, ನೀವು ಮಾತಾಡಿದ್ದನ್ನೆಲ್ಲ ರೆಕಾರ್ಡ್ ಮಾಡಿಕೊಂಡು ಪುಸ್ತಕ ಮಾಡೋಣ ಅಂತ ನಾನೂ ಉದಯ ಮರಕಿಣಿಯೂ ಅವರಿಗೆ ನೂರಾರು ಸಲ ಹೇಳಿದ್ದೆವು. ಒಂದು ಸಲ ನೆಟ್ಟಕಲ್ಲಪ್ಪ ಸರ್ಕಲಿನ ಬಾರಲ್ಲಿ ಕೂತಾಗ ಗುಟ್ಟಾಗಿ ಕಿರಂ ಮಾತಾಡಿದ್ದನ್ನು ರೆಕಾರ್ಡು ಮಾಡಲು ನನ್ನ ಹಳೆಯ ಟೇಪ್ ರೆಕಾರ್ಡು ಒಯ್ದು ಆನ್ ಮಾಡಿ ಇಟ್ಟಿದ್ದೆ. ಪಾರ್ಟಿ ಮುಗಿಸಿ ಮನೆಗೆ ಬಂದ ರೆಕಾರ್ಡು ಹಾಕಿದರೆ ಮೆತ್ತಗೆ ಮಾತಾಡುವ ಕಿರಂ ದನಿ ದಾಖಲಾಗಿರಲೇ ಇಲ್ಲ. ನಮ್ಮ ಪಕ್ಕದ ಟೇಬಲಲ್ಲಿ ಕೂತಿದ್ದವನು ಕೆಟ್ಟ ಮಾತಲ್ಲಿ ಯಾರಿಗೋ ಬೈಯುತ್ತಿದ್ದದ್ದು, ಸಪ್ಲೈಯರ್ ಏನ್ ಕೊಡ್ಲಿ, ಚಿಕನ್ ಸುಕ್ಕಾ, ಮಟನ್ ಕೈಮ, ಪಿಷ್ ಫಿಂಗರ್ ಇದೆ ಅಂದಿದ್ದೆಲ್ಲ ಸ್ಪಷ್ಟವಾಗಿ ಕೇಳಿಸುತ್ತಿತ್ತು. ಅದನ್ನು ಕಿರಂಗೆ ಹೇಳಿದಾಗ ಮನಸಾರೆ ನಕ್ಕು, ಅದೇ ಅತ್ಯುತ್ತಮ ಸಾಹಿತ್ಯ ಅಂದಿದ್ದರು.
ವೈಯನ್ಕೆ 1999ರ ಅಕ್ಟೋಬರ್ 16ರಂದು ಕಾಲವಾದರು. ಅವರು ಅಮೆರಿಕಾಕ್ಕೆ ಹೋಗುವ ತಿಂಗಳ ಮುಂಚೆ ಅವರಿಗೆ ನನ್ನ ಹೊಸ ಪುಸ್ತಕದ ಹಸ್ತಪ್ರತಿ ತೋರಿಸಿದೆ. ಅವರು ಅದನ್ನು ತಮ್ಮ ಎಂದಿನ ಶರವೇಗದಲ್ಲಿ ಕಣ್ಣಾಡಿಸಿ ಓದಿದರು. ಗುಡ್ ಗುಡ್... ಅಂದರು. ರಾತ್ರಿ ಗಾಲ್ಫ್ ಕ್ಲಬ್ಬಲ್ಲಿ ನಾನೂ ಉದಯ್ ಮರಕಿಣಿ ಕೂತಿದ್ದಾಗ ಮತ್ತೆ ಪುಸ್ತಕದ ಬಗ್ಗೆ ಮಾತಾಡಿದರು.ಆ ಪುಸ್ತಕ ಪ್ರಿಂಟ್ ಮಾಡ್ಲೇಬೇಕಾ ನೀನು ಅಂತ ಕೇಳಿದ್ದರು. ಹಾಗೇನಿಲ್ಲ ಸರ್. ಚೆನ್ನಾಗಿದ್ದರೆ ಮಾಡ್ತೀನಿ ಅಂದಿದ್ದೆ. ಚೆನ್ನಾಗಿದೆ. ಅದು ನಿನಗೂ ಗೊತ್ತಿದೆ. ಚೆನ್ನಾಗಿರೋದು ಮುಖ್ಯ ಅಲ್ಲ. ನೀನು ನಿನ್ನ ಭಾಷೆಯಲ್ಲಿ ಬರೀಬೇಕು. ಆರ್ಥರ್ ಕ್ವಿಲ್ಲರ್ ಅಂತ ಒಬ್ಬ ಹುಚ್ಚ ಇದ್ದಾನೆ. ಅವನು ಜಗತ್ತಿನ ಅತ್ಯುತ್ತಮ ಇಂಗ್ಲಿಷ್ ಪದ್ಯಗಳನ್ನೆಲ್ಲ ಸಂಗ್ರಹ ಮಾಡಿದ್ದಾನೆ. ಅದನ್ನೆಲ್ಲ ಮಾಡಿದ ನಂತರ ಅವನೊಂದು ಪುಸ್ತಕ ಬರೆದ. ಚೆನ್ನಾಗಿರೋ ಪದ್ಯಗಳನ್ನು ಬರೆಯುವಾಗ, ಚೆನ್ನಾಗಿರೋ ಬರಹ ಬರೆಯುವಾಗ ಹುಷಾರಾಗಿರಬೇಕು. ನಿಮಗಿಷ್ಟವಾಗಿರೋದು ಓದುಗರಿಗೂ ಇಷ್ಟವಾಗಬೇಕಾಗಿಲ್ಲ. ಕೇಂಬ್ರಿಜ್ ಯೂನಿವರ್ಸಿಟೀಲಿ ಅವನು ಒಂದು ಸಲ ಭಾಷಣ ಮಾಡ್ತಾ ಹೇಳಿದ ‘Whenever you feel an impulse to perpetrate a piece of exceptionally fine writing, obey it—whole-heartedly—and delete it before sending your manuscript to press. Murder your darlings.’ ಅಂದ್ರೆ ಬರೆಯುವಾಗ ಚೆಂದ ಚೆಂದದ ಪದಗಳು, ಅಭಿವ್ಯಕ್ತಿಗಳು ಬರುತ್ತವೆ. ಪ್ರಕೃತಿಯ ಸೊಬಗನ್ನು ವರ್ಣಿಸೋಣ ಅನ್ನಿಸುತ್ತೆ. ಬರೆಯುವಾಗ ಅದನ್ನು ತಡೆಯೋದಕ್ಕೆ ಹೋಗಬೇಡಿ. ಬರೆದುಬಿಡಿ. ಆದರೆ ಪ್ರಿಂಟಿಗೆ ಹೋಗುವಾಗ ನೀವು ಮೆಚ್ಚಿ ಬರೆದ ಸಾಲುಗಳನ್ನು ನಿರ್ದಾಕ್ಷಿಣ್ಯಾಗಿ ಅಳಿಸಿಹಾಕಿ, ಕಿಲ್ ಯುವರ್ ಡಾರ್ಲಿಂಗ್ಸ್.
ವೈಯನ್ಕೆ ಅಷ್ಟು ಹೇಳಿದ್ದೆ ತಡ, ನಾನು ಬರೆದಿಟ್ಟಿದ್ದ ಅರವತ್ತೂ ಪುಸ್ತಕಗಳನ್ನೂ ನನ್ನ ಅಣ್ಣನ ಮನೆಗೆ ಸಾಗಿಸಿದೆ. ಅಲ್ಲಿದ್ದ ನನ್ನ ಇತರ ಪುಸ್ತಕಗಳ ನಡುವೆ ಇವೂ ಜಾಗ ಪಡೆದವು. I killed my darlings! ನಾವೇ ಮೆಚ್ಚೋದನ್ನು ನಾವು ಬರೆಯಬಾರದು ಅಂತ ತಿಳಿಸಿಕೊಟ್ಟ ವೈಯನ್ಕೆಗೆ ನಮಸ್ಕಾರ.

Tuesday, February 9, 2010
ಅಶ್ರಫ್, ಕುಂಟಿನಿ, ಮುಸ್ತಫಾ, ಮಹೇಂದ್ರ, ಕಿಶೋರ್ ಮತ್ತು ಉಪ್ಪಿನಂಗಡಿ ಎಂಬ ಪುಣ್ಯಭೂಮಿ
ಜೀವಂತವಾಗಿದ್ದಾರಾ?
ಹೂಂ.
ಕರ್ನಾಟಕದವರಾ? ಹೊರಗಿನವರಾ?
ಕರ್ನಾಟಕದವರು.
ಕಲೆ, ಧಾರ್ಮಿಕ, ಸಾಹಿತ್ಯ, ರಾಜಕೀಯ, ಸಿನಿಮಾ, ಕ್ರೀಡೆ...
ಸಾಹಿತ್ಯ.
ಪ್ರಶಸ್ತಿ ಬಂದಿದ್ಯಾ...
ಹೂಂ.
ನಮ್ಮ ದೇಶದ ಪ್ರಶಸ್ತಿಯಾ, ವಿದೇಶಿ ಪ್ರಶಸ್ತಿಯಾ?
ವಿದೇಶಿ..
ಅಡಿಗ, ಅರವಿಂದ ಅಡಿಗ.
ಎಲ್ಲರೂ ಹೋ’ ಎಂದು ಸಂಭ್ರಮಿಸಿದರು. ಕವಿಗಳು ಬೆರಗಾಗಿ ಕೂತರು.ಮತ್ಯಾರೋ ಕೈ ಕುಲುಕಿದರು. ಐದೇ ಪ್ರಶ್ನೆಗಳಲ್ಲಿ ಉತ್ತರ ಸಿಕ್ಕಿತು ಅಂದರು. ಇದು ನಮ್ಮೂರ ಹುಡುಗರ ಹೊಸ ಆಟ. ಅದಕ್ಕೆ ಅವರಿಟ್ಟ ಹೆಸರು ಅಶ್ವಮೇಧ’. ಆಟದ ನಿಯಮ ಇಷ್ಟೇ. ಒಂದು ಪುಟ್ಟ ಚೀಟಿಯಲ್ಲಿ ಒಬ್ಬ ಖ್ಯಾತನಾಮರ ಹೆಸರು ಬರೆದಿಟ್ಟುಕೊಳ್ಳಿ. ಅವರ ಬಗ್ಗೆ ಆಥ ಪ್ರಶ್ನೆಗಳನ್ನು ಕೇಳುತ್ತಾ ಹೋಗುತ್ತಾನೆ. ನೀವು ಇಪ್ಪತ್ತೊಂದು ಪ್ರಶ್ನೆಗಳಿಗೆ ಉತ್ತರ ಕೊಡುವ ಮೊದಲೇ ನೀವು ಬರೆದಿಟ್ಟುಕೊಂಡ ವ್ಯಕ್ತಿ ಯಾರೆಂದು ಆತ ಹೇಳುತ್ತಾನೆ. ಹಾಗೆ ಹೇಳುವವನ ಹೆಸರು ಮುಸ್ತಫಾ.
ಮೇಲ್ನೋಟಕ್ಕೆ ಇದೊಂದು ಅತ್ಯಂತ ಸರಳವಾದ ಆಟದಂತೆ ಕಾಣಿಸುತ್ತದೆ. ಆದರೆ ಒಂದು ಮಟ್ಟದ ಜನರಲ್ ನಾಲೆಜ್ ಇಲ್ಲದೇ ಹೋದರೆ, ನಿತ್ಯವೂ ಪೇಪರ್ ಓದದೇ ಇದ್ದರೆ, ಚರಿತ್ರೆಯಿಂದ ಹಿಡಿದು, ಇತ್ತೀಚಿನ ಆಗುಹೋಗುಗಳ ತನಕ ಎಲ್ಲವನ್ನೂ ತಿಳಿದುಕೊಂಡಿರದೇ ಇದ್ದರೆ ಕೇವಲ ಕೆಲವೇ ಕೆಲವು ಸೂಚನೆಗಳನ್ನು ಮುಂದಿಟ್ಟುಕೊಂಡು ಹೇಳುವುದು ಕಷ್ಟ. ಎಂಜಿಆರ್ ಪತ್ನಿ ಜಾನಕಿ ರಾಮಚಂದ್ರನ್, ದಕ್ಷಿಣ ಕನ್ನಡದ ವಿಟ್ಲ ಎಂಬ ಊರಿನ ಹವ್ಯಕ ಹೆಂಗಸು ಎಂಬ ಸಣ್ಣ ವಿವರಗಳೂ ಅಲ್ಲಿ ಮುಖ್ಯ.
ಇದನ್ನು ನೋಡುತ್ತಿದ್ದರೆ ಆಶ್ಚರ್ಯವಾಯಿತು. ಪ್ರಶ್ನೆಗಳನ್ನು ಕೇಳುತ್ತಿದ್ದ ಹಾಗೇ, ಕೆ ವಿ ತಿರುಮಲೇಶ್, ಯಶವಂತ ಚಿತ್ತಾಲ, ಭೀಮಸೇನ ಜೋಷಿ, ಅಷ್ಟೇನೂ ಖ್ಯಾತರಲ್ಲದ ಡಿ ಎ ಶಂಕರ್- ಹೀಗೆ ಎಲ್ಲರ ಕುರಿತು ಮಾಹಿತಿ ಇಟ್ಟುಕೊಂಡ ಮುಸ್ತಫಾ ಮತ್ತು ಗೆಳೆಯರ ಗುಂಪು ತಮ್ಮಷ್ಟಕ್ಕೇ ತಾವು ಓದುತ್ತಾ, ತಿಳಿದುಕೊಳ್ಳುತ್ತಾ, ಬೆರಗುಗೊಳ್ಳುತ್ತಾ, ಸಂಭ್ರಮಪಡುತ್ತಾ ಇರುವುದನ್ನು ನೋಡಿ ಡುಂಡಿರಾಜ್, ಸುಬ್ರಾಯ ಚೊಕ್ಕಾಡಿ, ಲಕ್ಷ್ಮಣರಾವ್ ಕೂಡ ಅಚ್ಚರಿಯಿಂದ ನೋಡತೊಡಗಿದರು. ಲಕ್ಷ್ಮಣರಾವ್ ಅವರ ಮೂವತ್ತೋ ನಲವತ್ತೋ ಕವಿತೆಗಳನ್ನು ಥಟ್ಟನೆ ಹೇಳಬಲ್ಲ ಆರೆಂಟು ಹುಡುಗರು ಅಲ್ಲಿದ್ದರು. ಎಷ್ಟೋ ವರ್ಷಗಳ ಹಿಂದೆ ಸಂತೋಷ’ ಪತ್ರಿಕೆಯಲ್ಲಿ ದೆಹಲಿಯ ಬಗ್ಗೆ ಚೊಕ್ಕಾಡಿ ಬರೆದ ಕವಿತೆಯನ್ನು ಮತ್ಯಾರೋ ನೆನಪಿಸಿದರು. ಡುಂಡಿರಾಜ್ ಎಂದೋ ಬರೆದಿದ್ದ, ಸದ್ಯಕ್ಕೆ ಯಾರೂ ನೆನಪಿಸಿಕೊಳ್ಳದ ಓಡುವವರು’ ನಾಟಕದ ಸಾಲುಗಳನ್ನು ಹೇಳಿದರು. ಹೀಗೆ ಇಡೀ ರಾತ್ರಿ ಉಲ್ಲಾಸದಿಂದ ಸರಿಯುತ್ತಿತ್ತು.
ಇದು ಉಪ್ಪಿನಂಗಡಿಯ ಕತೆ. ಅಲ್ಲಿ ಎದುರಾಗುವ ಅಶ್ರಫ್, ಮಹೇಂದ್ರ, ಶಾಹುಲ್ ಹಮೀದ್, ಕಿಶೋರ್ ಅಧಿಕಾರಿ, ಮುಸ್ತಫಾ ಮತ್ತು ಇವರೆಲ್ಲರ ಗುರುವಿನಂತಿರುವ ಗೋಪಾಲಕೃಷ್ಣ ಕುಂಟಿನಿ ಮುಂತಾದ ಗೆಳೆಯರ ಬಳಗವೊಂದು ತಣ್ಣಗೆ ತಮಗೆ ಬೇಕಾದ್ದನ್ನು ಓದಿಕೊಂಡು, ನೋಡಿಕೊಂಡು, ಮಾಡಿಕೊಂಡು ತಮ್ಮ ಆರೋಗ್ಯವನ್ನು ಅಭಿರುಚಿಯನ್ನು ಕಾಪಾಡಿಕೊಳ್ಳಲು ಹೆಣಗುತ್ತಿದೆ. ನಾನು ನೋಡಿದ ಎಲ್ಲ ಪುಟ್ಟ ಊರುಗಳಲ್ಲೂ ಇಂಥದ್ದೊಂದು ಗುಂಪಿದೆ. ಅವರು ತಮಗಿಷ್ಟ ಬಂದಿದ್ದನ್ನು ಓದುತ್ತಾ, ಪತ್ರಿಕೆಯಲ್ಲಿ ಬಂದ ಪುಸ್ತಕ ತರಿಸಿಕೊಂಡು ಓದಿ ಚರ್ಚಿಸುತ್ತಾ, ಬೆಂಗಳೂರಲ್ಲಿ ಮಾತ್ರ ಒಂದೋ ಎರಡೋ ಪ್ರದರ್ಶನ ಕಾಣುವ ಕಲಾತ್ಮಕ ಚಿತ್ರಗಳ ಡೀವೀಡಿ ತರಿಸಿಕೊಂಡು ಸಿನಿಮಾ ನೋಡುತ್ತಾ, ತಮ್ಮನ್ನು ಮುಖ್ಯವಾಹಿನಿಯಿಂದ ಹೊರಗಿಟ್ಟದ್ದರ ಬಗ್ಗೆ ಬೇಸರಪಡುತ್ತಾ, ಆ ಮಿತಿಯಲ್ಲೇ ಜೀವನೋತ್ಸಾಹ ಕಂಡುಕೊಳ್ಳುತ್ತಿರುತ್ತಾರೆ. ಅಂಥವರಿಗೂ ತನಗೂ ಸಂಬಂಧವೇ ಇಲ್ಲ ಎಂಬಂತೆ ಬೆಂಗಳೂರು ತಲೆಕೊಡವಿಕೊಂಡು ಇನ್ನೆಲ್ಲೋ ನೋಡುತ್ತಿದೆ.
*****
ಇವತ್ತಿನ ಚೈತನ್ಯದ ಚಿಲುಮೆಗಳು ಗ್ರಾಮೀಣ ಕರ್ನಾಟಕದಲ್ಲಿವೆ ಅನ್ನುವುದಂತೂ ಸತ್ಯ. ಬೆಂಗಳೂರಿನ ಮಟ್ಟಿಗೆ ಇವತ್ತು ದುಡಿಮೆ ಎನ್ನುವುದು ಮೂಲಮಂತ್ರ. ದುಡಿಮೆ ಒಂದು ಮೌಲ್ಯ ಮಾತ್ರವೇ ಆಗಿದ್ದ ದಿನಗಳು ಕಣ್ಮರೆಯಾಗಿ, ದುಡಿಮೆಗೆ ಇವತ್ತು ಅದಕ್ಕಿಂತ ಹೆಚ್ಚಿನ ಮಹತ್ವ ಪ್ರಾಪ್ತವಾಗಿದೆ. ಕಾಯಕವೇ ಕೈಲಾಸ ಎನ್ನುವುದು ಸುಳ್ಳಾಗುತ್ತಿದೆ. ದುಡಿಮೆಯ ಜೊತೆಗೇ ಬೆಸೆದುಕೊಂಡಿದ್ದ ಸೌಖ್ಯ ಮಾಯವಾಗಿದೆ. ನಮ್ಮಲ್ಲಿ ಬಹುತೇಕ ಮಂದಿ, ನಾವು ಮಾಡಬೇಕಾದದ್ದನ್ನು ಸಂತೋಷದಿಂದ ಮಾಡುತ್ತಿಲ್ಲ. ಅದರ ಬದಲು, ಅಲ್ಲೊಂದು ಬಗೆಯ ಅನಿವಾರ್ಯ ಕರ್ಮದ ಒತ್ತಡ, ಸೂತಕದ ಛಾಯೆ ಕಾಣಿಸುತ್ತಿದೆ. ಹಾಡುತ್ತಾ ಗೆಯ್ಮೆ ಮಾಡುತ್ತಿದ್ದ, ನಾಟಿ ಮಾಡುತ್ತಾ, ಬತ್ತ ಕುಟ್ಟುತ್ತಾ, ರಾಗಿ ಬೀಸುತ್ತಾ ಆ ಕೆಲಸದ ಸಂತೋಷವನ್ನು ಅನುಭವಿಸುತ್ತಿದ್ದ ದಿನಗಳು ಇವತ್ತಿಲ್ಲ. ದಿನಕ್ಕೆ ಲಕ್ಷಾಂತರ ರುಪಾಯಿ ವ್ಯಾಪಾರ ಮಾಡುವ ಹೊಟೆಲೊಂದರ ಅಡುಗೆ ಭಟ್ಟರೊಬ್ಬರು ಹೇಳುತ್ತಿದ್ದರು; ಮೊದಲೆಲ್ಲ ನಮ್ಮ ಹೊಟೆಲಿಗೆ ನಾನು ಇಷ್ಟಪಡೋ ವ್ಯಕ್ತಿಗಳು ಬರುತ್ತಿದ್ದರು. ಸಾಹಿತಿಗಳು, ಸಂಗೀತಗಾರರು, ರಾಜಕಾರಣಿಗಳು, ಕ್ರೀಡಾಪಟುಗಳು ಬಂದು ನಾನು ಮಾಡಿದ ದೋಸೆ ತಿಂದು ಸಂತೋಷಪಡುತ್ತಿದ್ದರು. ಆಗೆಲ್ಲ ನನ್ನ ಬಗ್ಗೆ ಒಂಥರ ಖುಷಿಯಾಗುತ್ತಿತ್ತು. ಸಾರ್ಥಕತೆ ಮೂಡುತ್ತಿತ್ತು. ಇವತ್ತು ಹಾಗಿಲ್ಲ. ಆಗ ದಿನಕ್ಕೆ ನೂರಿನ್ನೂರು ದೋಸೆ ಮಾಡುತ್ತಿದ್ದೆ. ಈಗ ಎಂಟು ನೂರು ದೋಸೆ ಮಾಡುತ್ತೇನೆ. ಬರೀ ದೋಸೆ ಮಾಡುವುದಷ್ಟೇ ಜೀವನ ಎಂಬಂತಾಗಿದೆ.
ಪತ್ರಿಕೋದ್ಯಮದಲ್ಲೂ ಅದೇ ಆಗಿದೆ. ನಾವು ಸಿನಿಮಾ ಪತ್ರಿಕೋದ್ಯಮ ಆರಂಭಿಸಿದ ದಿನಗಳಲ್ಲಿ ಅಲ್ಲೊಂದು ಸಂಭ್ರಮ ಇರುತ್ತಿತ್ತು. ಸಿನಿಮಾ ನಟರು, ನಿರ್ದೇಶಕರು, ಸಂಗೀತ ನಿರ್ದೇಶಕರು ಸುಮ್ಮನೆ’ ಹರಟುವಷ್ಟು ವ್ಯವಧಾನ ಇಟ್ಟುಕೊಂಡಿದ್ದರು. ವಿಷ್ಣುವರ್ಧನ್ ಜೊತೆ ಕುಳಿತರೆ, ರಾಜಕೀಯ, ಕ್ರಿಕೆಟ್, ಸಂಗೀತ, ಮತ್ಯಾವುದೋ ಇಟೆಲಿಯ ಸಿನಿಮಾದ ಬಗ್ಗೆ ಮಾತಾಗುತ್ತಿತ್ತು. ಪರಸ್ಪರರನ್ನು ಗೇಲಿ ಮಾಡಿಕೊಳ್ಳುತ್ತಾ ಅಲೆಲ್ಲ ನಗು ಹರಡುತ್ತಿತ್ತು. ಇವತ್ತು ಪತ್ರಕರ್ತರಿಗೂ ಅಷ್ಟು ಪುರುಸೊತ್ತಿಲ್ಲ. ಸಿನಿಮಾನಟರಂತೂ ಸೆಕೆಂಡುಗಳ ಲೆಕ್ಕದಲ್ಲಿ ಬದುಕುತ್ತಿದ್ದಾರೆ. ಪತ್ರಕರ್ತ ತಾನು ಕೇಳಿಸಿಕೊಂಡಿದ್ದನ್ನೋ ಶೂಟ್ ಮಾಡಿದ್ದನ್ನೋ ತಕ್ಷಣ ಜನರಿಗೆ ತಲುಪಿಸಬೇಕು ಎಂದು ಓಡುತ್ತಿರುತ್ತಾನೆ. ನಟನಿಗೋಸ್ಕರ ಮುಂದಿನ ಚಿತ್ರದ ಕತೆ ಹೇಳುವವರು ಕಾಯುತ್ತಿರುತ್ತಾರೆ.
ಇಂಥದ್ದರ ಮಧ್ಯೆ ಪ್ರಕಾಶ್ ರೈ ಬೇರೆಯೇ ಆಗಿ ನಿಲ್ಲುತ್ತಾರೆ. ಮೊನ್ನೆ ಊರಿಗೆ ಹೋಗುತ್ತಾ ಅವರ ನಾನೂ ನನ್ನ ಕನಸು’ ಶೂಟಿಂಗ್ ನಡೆಯುತ್ತಿದ್ದ ಯಜಮಾನ್ ಎಸ್ಟೇಟ್‌ಗೆ ಹೋದರೆ ಅಲ್ಲಿ ಪ್ರಕಾಶ್ ರೈ ಎಂದಿನ ಉಲ್ಲಾಸದಲ್ಲಿ ಕೂತಿದ್ದರು. ಎರಡು ಹಾಡು ನೋಡೋಣ ಎಂದರು. ಹಾಡು ಮುಗಿಯುತ್ತಿದ್ದಂತೆ ಇತ್ತೀಚೆಗೆ ಓದಿದ ಪುಸ್ತಕಗಳ ಬಗ್ಗೆ ಮಾತಾಡಿದರು. ಹಳೆಯ ಗೆಳೆಯರಾದ ಶೆಣೈ, ಮರಕಿಣಿ ಹೇಗಿದ್ದಾರೆ ಎಂದು ವಿಚಾರಿಸಿಕೊಂಡರು. ಕರ್ತವ್ಯದಲ್ಲಿ ಕಳೆದು
ಹೋಗುತ್ತಿದ್ದೀರಿ. ಸುಮ್ಮನೆ ಎಲ್ಲರೂ ಹೊರಟು ಬನ್ನಿ, ಖುಷಿಯಾಗಿ ಒಂದೆರಡು ದಿನ ಇದ್ದು ಹೋಗಿ ಎಂದರು. ಇವತ್ತು ಖುಷಿಯಾಗಿ ಒಂದೆರಡು ದಿನ ಸುಮ್ಮನೆ ಇದ್ದುಹೋಗಿ ಎನ್ನುವವರು ಸಿಕ್ಕಿದ್ದೇ ಒಂದು ಪವಾಡ ಎಂದು ನಾವೊಂದಷ್ಟು ಮಂದಿ ಮಾತಾಡಿಕೊಂಡೆವು.
ಉಲ್ಲಾಸ ತುಂಬುವ ಸಂಗತಿಗಳು ತುಂಬಾ ಕಡಿಮೆ. ಅವುಗಳನ್ನು ನಾವು ಸವಿಯದೇ ಹೋದರೆ, ಆ ರಸಬಿಂದುಗಳೂ ಬತ್ತಿಹೋಗುತ್ತವೆ. ಅನ್ನಿಸಿದ್ದೇನನ್ನೋ ಬರೆದಾಗ, ಅದನ್ನು ಆಪ್ತರ ಜೊತೆ ಹಂಚಿಕೊಳ್ಳುವುದು, ಥ್ರೀ ಈಡಿಯಟ್ಸ್ ಸಿನಿಮಾದ ದೃಶ್ಯವೊಂದನ್ನು ನೆನೆದು ಹಳೆಯ ದಿನಗಳಿಗೆ ಜಾರುವುದು, ನಾಲ್ಕಾರು ಮಂದಿ ತಿಂಗಳಿಗೊಮ್ಮೆ ಕಾವೇರಿ ಫಿಷಿಂಗ್ ಕ್ಯಾಂಪಿಗೆ ಹೋಗಿ ಗಾಳ ಹಾಕುತ್ತಾ ಕೂರುವುದು, ಪಿವಿಆರ್ ಚಿತ್ರಮಂದಿರದ ಮೆಟ್ಟಲಲ್ಲಿ ಕೂತು ಪಾಪ್‌ಕಾರ್ನ್ ತಿನ್ನುತ್ತಾ ಆ ಗದ್ದಲವನ್ನು ಸವಿಯುವುದು.. ಇವೆಲ್ಲ ಇವತ್ತಿಗೂ ಜಗತ್ತಿನಲ್ಲಿ ನಡೆಯುತ್ತಲೇ ಇದೆ. ಮೊನ್ನೆ ಮೊನ್ನೆ ಒಂದಷ್ಟು ಮಿತ್ರರು ಕೊಡಗಿನ ಪುಷ್ಪಗಿರಿಗೆ ಹೋಗಿ ಇಪ್ಪತ್ತೋ ಮೂವತ್ತೋ ಕಿಲೋಮೀಟರ್ ನಡೆದಾಡಿ, ಸೂರ್ಯಾಸ್ತ ನೋಡಿ ಬಂದರು. ನಾವೊಂದಷ್ಟು ಮಂದಿ ಡ್ರೈವರ್ ಮೇಲೆ ರೇಗುತ್ತಾ, ಇನ್ನೊಂದು ದಾರಿಯಲ್ಲಿ ಬಂದಿದ್ದರೆ ಅರ್ಧಗಂಟೆ ಮುಂಚೆ ತಲುಪಬಹುದು ಎಂದು ಗೊಣಗಿಕೊಳ್ಳುತ್ತಾ, ಶೂಟಿಂಗು ಮುಗಿದಿದ್ದೇ ತಡ ಮತ್ತೊಂದು ಊರಿಗೆ ಹೋಗುವ ತರಾತುರಿಯಲ್ಲಿ ಧಾವಂತ ಮಾಡಿಕೊಳ್ಳುತ್ತಿದ್ದೆವು.
ಪಯಣಿಸಿದ ಹಾದಿ, ಹೊರಟ ಜಾಗ, ತಲುಪಬೇಕಾದ ಊರು, ಅಲ್ಲಿನ ತಂಗಾಳಿ, ಸೊರಗಿದ ನದಿ, ಮುಂಜಾವದ ಮಂಜು, ಹಳೆಯ ಗುಡಿ, ಕತ್ತಲ ಸುರಂಗ, ನೀರು ಜಿನುಗಿಸುವ ಗುಹೆ- ಎಲ್ಲವನ್ನೂ ಕರ್ತವ್ಯ ನಿಷ್ಠರಂತೆ ನೋಡುತ್ತಿದ್ದೆವು.
ವಾಪಸ್ಸು ಬರುವ ದಾರಿಯಲ್ಲಿ ಕೌದಿ ಹೊದ್ದುಕೊಂಡು ಬೆಂಕಿ ಕಾಯಿಸಿಕೊಳ್ಳುತ್ತಾ ಕುಳಿತಿದ್ದ ಅರುವತ್ತು ದಾಟಿದಂತಿದ್ದ ಮುದುಕನೊಬ್ಬನ ಕಣ್ಣುಗಳು, ಬೆಂಕಿಬೆಳಕಿಗೆ ಪ್ರಜ್ವಲಿಸುತ್ತಿದ್ದವು. ಆ ಕಾಡಿನ ಮಧ್ಯೆ ಕೂತುಕೊಂಡು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತಿದ್ದೇನೆ ಎಂಬ ಕಲ್ಪನೆಯೇ ಇಲ್ಲದೇ ಕಾಲಾಂತರದಲ್ಲಿ ಲೀನನಾದ ಅವನಂತೆ ಬದುಕಬೇಕು ಎಂದು ಆಸೆಯಾಯಿತು.
ನಡುರಾತ್ರಿ ಸಾಗರದ ಹೊಟೆಲ್ಲಿಗೆ ಕಾಲಿಟ್ಟರೆ, ನಿದ್ದೆಗಣ್ಣಿನ ಹುಡುಗನೊಬ್ಬ ರಿಜಿಸ್ಟರ್ ಮುಂದಿಟ್ಟು ತುಂಬಿ’ ಅಂದ. ಅದರಲ್ಲಿ ಎಲ್ಲಿಂದ ಬರುತ್ತಿದ್ದೀರಿ, ಎಲ್ಲಿಗೆ ಹೋಗುತ್ತೀರಿ, ಎಷ್ಟು ದಿನ ಇರುತ್ತೀರಿ ಎಂಬ ಪ್ರಶ್ನೆಗಳಿದ್ದವು. ಆ ಅಪರಾತ್ರಿಯಲ್ಲಿ ಅವು ನನಗೆ ಬದುಕಿನ ಬಹುಮುಖ್ಯ ಪ್ರಶ್ನೆಗಳಾಗಿ ಕಾಣಿಸಿದವು.

Tuesday, February 2, 2010
ಎಂದೋ ಕೇಳಿದ ಒಂದು ಹಾಡಿನ ನೆನಪಲ್ಲಿ...
ನಂಗೆ ಟಿ ಕೆ ರಾಮರಾವ್ ಇಷ್ಟ, ಎನ್ ಟಿ ರಾಮರಾವ್ ಸಿನಿಮಾ ಇಷ್ಟ, ಜೋಸೈಮನ್ ಇಷ್ಟ, ಜಿಂದೆ ನಂಜುಂಡಸ್ವಾಮಿ ಎಂದರೆ ಪ್ರಾಣ, ಮುಸ್ಸಂಜೆಯ ಕಥಾಪ್ರಸಂಗ ಮತ್ತೆ ಮತ್ತೆ ಓದಬೇಕೆನ್ನಿಸುತ್ತೆ, ಪರಸಂಗದ ಗೆಂಡೆತಿಮ್ಮನ ಬೀದಿ ಕಣ್ಮುಂದೆ ಸುಳಿದರೆ ಸಂತೋಷವಾಗುತ್ತದೆ. ಭುಜಂಗಯ್ಯನ ದಶಾವತಾರಗಳು ಎಂಬ ಟೈಟಲ್ಲೂ ಮೆಚ್ಚುಗೆ. ನಮ್ಮೂರಿನಲ್ಲಿದ್ದ ಪುಟ್ಟ ಹೊಟೆಲಿನಲ್ಲಿ ಸಿಗುತ್ತಿದ್ದ ಕೇಟಿ ಮತ್ತು ಮೊಸರವಲಕ್ಕಿ ಇಷ್ಟ.
ಹಾಗಂತ ಇವತ್ತಿಗೂ ನಾನು ಅಂದುಕೊಂಡಿದ್ದೇನೆ. ಅದು ನಿಜಕ್ಕೂ ನನಗಿಷ್ಟ ಎಂದು ನಾನು ಮೊನ್ನೆ ಮೊನ್ನೆಯವರೆಗೂ ನಂಬಿದ್ದೆ. ಅದೇ ಹುಮ್ಮಸ್ಸಿನಲ್ಲಿ ಎನ್ ಟಿ ರಾಮರಾವ್ ಸಿನಿಮಾ ನೋಡಲು ಯತ್ನಿಸಿದೆ. ಐದು ನಿಮಿಷ ನೋಡುವಷ್ಟರಲ್ಲಿ ಯಾಕೋ ಹಿಂಸೆಯಾಗತೊಡಗಿತು. ಮತ್ತೊಂದು ದಿನ ಟಿ ಕೆ ರಾಮರಾವ್ ಕಾದಂಬರಿ ಓದಲು ಕುಳಿತೆ. ಮೂರು ಪುಟ ಮುಗಿಸುವ ಹೊತ್ತಿಗೆ ಸಾಕಾಗಿಹೋಯಿತು.ಜಿಂದೆ ನಂಜುಂಡಸ್ವಾಮಿ ಕಾದಂಬರಿಯನ್ನು ಕೈಗೆತ್ತಿಕೊಳ್ಳಲಾಗಲೇ ಇಲ್ಲ. ಭುಜಂಗಯ್ಯನ ದಶಾವತಾರಗಳು ಯಾಕೋ ಹಿಂದಿನ ಹುಮ್ಮಸ್ಸು ತುಂಬಲಿಲ್ಲ. ನಮ್ಮೂರಿನ ಪುಟ್ಟ ಶೆಣೈ ಹೋಟೆಲಿನ ಅವಲಕ್ಕಿ ಮೊಸರು ಸ್ವಾದ ಕಳಕೊಂಡಿದೆ ಅನ್ನಿಸತೊಡಗಿತು.
ಆಮೇಲೆ ಯೋಚಿಸಿದೆ; ನಿಜಕ್ಕೂ ಕೆಟ್ಟಿರುವುದು ನನ್ನ ಬಾಯಿರುಚಿಯೋ, ಶೆಣೈ ಹೊಟೆಲ್ಲಿನ ಮೊಸರವಲಕ್ಕಿಯ ರುಚಿಯೋ?
ಹಿಂದೆಂದೋ ಸುಳಿದಾಡಿದ, ಜೀವಿಸಿದ ಜಾಗಗಳಿಗೆ ಮತ್ತೆ ಮತ್ತೆ ಹೋಗಬೇಕು ಅನ್ನಿಸುವುದು ನಮ್ಮ ಮನಸ್ಸಿನ ಅದಮ್ಯ ಆಶೆಗಳಲ್ಲಿ ಒಂದು. ಸಾಹಿತ್ಯದಲ್ಲಿ ಅದನ್ನು ಪ್ರತ್ಯಭಿಜ್ಞಾನ ಅನ್ನುತ್ತಾರಾ? ನನಗೆ ಗೊತ್ತಿಲ್ಲ, ಪ್ರತ್ಯಬಿಜ್ಞಾನ ಅಂದರೆ ಗೊತ್ತಿದ್ದದ್ದನ್ನು ಮತ್ತೆ ತಿಳಿದುಕೊಳ್ಳುವುದು. ಹಾಗೆ ನಮಗೆ ಗೊತ್ತಿರುವುದು, ನಮಗೆ ಪ್ರಿಯವಾಗಿರುವುದು ಕ್ರಮೇಣ ನಮ್ಮ ಮನಸ್ಸಿನಲ್ಲಿ ಶಾಶ್ವತವಾದ ಸ್ಥಾನವೊಂದನ್ನು ಪಡೆದುಕೊಳ್ಳುತ್ತದೆ. ಆ ನಲ್ದಾಣದಲ್ಲಿ ಮತ್ತೆ ಮತ್ತೆ ಹೋಗಬೇಕು ಎಂದು ಮನಸ್ಸು ಆಶಿಸುತ್ತದೆ. ಹಾಗೆ ಹೋದಾಗ ಅಲ್ಲಿ ನಮಗೆ ಸಿಗುವ ಸ್ವಾಗತ, ಸಂತೋಷ ಮತ್ತು ಖುಷಿಯ ಹೇಗಿರುತ್ತದೆ. ನಾವು ನಿಜಕ್ಕೂ ಅದನ್ನೆಲ್ಲ ಸವಿಯುತ್ತೇವಾ?
ಬಹುಶಃ ಇಲ್ಲ. ನಮ್ಮ ಅನುಭವದ ಒಂದು ಭಾಗವಾಗಿರುವ ಸಂಗತಿಗಳೆಲ್ಲ ಕೇವಲ ಮನಸ್ಸಿನಲ್ಲಿದ್ದಾಗಷ್ಟೇ ಸಂತೋಷಕೊಡುತ್ತವೆ. ನಾವು ಬದಲಾಗಿರುತ್ತೇವೆ. ನಮ್ಮ ವಯಸ್ಸು ಮತ್ತು ಅನುಭವ ನಮ್ಮನ್ನು ಮಾಗಿಸಿ ಮತ್ತೆಲ್ಲೋ ತಂದು ನಿಲ್ಲಿಸಿರುತ್ತವೆ. ವರ್ತಮಾನದ ಗಳಿಗೆಗಳನ್ನು ನಮ್ಮ ನೋಟವನ್ನು ಬದಲಾಯಿಸಿರುತ್ತವೆ. ಈ ಕ್ಷಣವನ್ನು ನಿರಾಕರಿಸಲು ಹೊರಡುವ ನಾವು, ಹಿಂದೆ ಎಂದೋ ಸವಿದದ್ದು ಸೊಗಸಾಗಿತ್ತು ಎಂದುಕೊಳ್ಳುತ್ತಿರುತ್ತೇವೆ. ಅದನ್ನೆ ಮತ್ತೊಮ್ಮೆ ಸವಿಯುವುದಕ್ಕೆ ಮನಸ್ಸು ಹಾತೊರೆಯುತ್ತದೆ. ಆದರೆ ಆ ಹಾತೊರೆಯುವಿಕೆಗೆ ಸ್ಥಾನ ಇರುವುದು ಕೇವಲ ಮನಸ್ಸಿನಲ್ಲಿ ಮಾತ್ರ.
ಬದಲಾಗಿರುವುದು ಶೆಣೈ ಹೊಟೆಲ್ಲಿನ ಅವಲಕ್ಕಿಯ ರುಚಿಯಲ್ಲ. ನಮ್ಮ ನಾಲಗೆ ರುಚಿ. ರುಚಿಕೆಡಿಸಿಕೊಂಡು ಕೂತ ನಮಗೆ ಎಂದೋ ತಿಂದ ಅವಲಕ್ಕಿಯೇ ಸೊಗಸಾಗಿರಬಹುದು ಅನ್ನಿಸಿರುತ್ತದೆ. ಅದು ಕೂಡ ಕೇವಲ ಮನೋವ್ಯಾಪಾರ. ತುಂಬಾ ಕಾಡಿದ ಅವಳ ಕಣ್ಣೋಟ, ಮನಸ್ಸಲ್ಲಿ ನಾವು ಗುನುಗುವ ಹಳೆಯ ಹಾಡು, ನಾವು ಸುತ್ತಾಡಿದ ತಾಣ, ನಮ್ಮ ಹಳೆಯ ಸ್ಕೂಲುಗಳೆಲ್ಲ ಎಲ್ಲೀ ತನಕ ನಮ್ಮ ನೆನಪುಗಳಲ್ಲಿ ಮಾತ್ರ ಎದುರಾಗುತ್ತದೆಯೋ ಅಲ್ಲೀ ತನಕ ಸೊಗಸಾಗಿರುತ್ತದೆ. ಅದನ್ನು ನಾವು ಮತ್ತೆ ಕಂಡಾಗ ಅದು ಅಷ್ಟೊಂದು ಖುಷಿ ಕೊಡುವುದಿಲ್ಲ. ಅದು ಮನಸ್ಸಿಗಿರುವ ಶಕ್ತಿ, ಮಿತಿ ಮತ್ತು ನಮ್ಮ ಅತ್ಯಂತ ದೊಡ್ಡ ಯಾತನೆ.
ಅದನ್ನೇ ಮುಂದಿಟ್ಟುಕೊಂಡು ನಾನೇನನ್ನು ಮೆಚ್ಚುತ್ತೇನೆ ಎಂದು ನೋಡುತ್ತಾ ಕುಳಿತೆ. ಸದ್ಯಕ್ಕೆ ನಾನು ಮೆಚ್ಚುವ ಕತೆ
ಹೇಗಿರಬೇಕು, ನಾನು ಮೆಚ್ಚುವ ಹಾಡು ಯಾರದ್ದು, ಇವತ್ತಿಗೂ ಕೆ ಎಸ್ ನರಸಿಂಹಸ್ವಾಮಿಯ ಹಾಡನ್ನೇ ನಾನೇಕೆ ಮೆಚ್ಚುತ್ತಿದ್ದೇನೆ, ನನ್ನ ತರುಣ ಮಿತ್ರರಿಗೆ ಯಾಕೆ ಕೆ ಎಸ್‌ನರಸಿಂಹಸ್ವಾಮಿ ಇಷ್ಟವಾಗುವುದಿಲ್ಲ. ಇಷ್ಟವಾದರೂ ಯಾಕೆ ಕೆಎಸ್‌ನ ಅವರ ಸಹಜ ಆಯ್ಕೆಯಲ್ಲ. ರಾಜ್‌ಕುಮಾರ್ ನಟಿಸಿದ ’ಮಯೂರ’, ಶಂಕರ್ ಗುರು ಸಿನಿಮಾಗಳು ನನ್ನನ್ನು ಆವರಿಸಿದಷ್ಟು ಆಪ್ತವಾಗಿ ಅವರನ್ನೇಕೆ ಆವರಿಸಿಕೊಂಡಿಲ್ಲ ಎಂದೆಲ್ಲ ಯೋಚಿಸಿದೆ. ನಾನು ಅದ್ಬುತ ಎಂದು ವರ್ಣಿಸಿದ ಶಂಕರ್‌ಗುರು ಸಿನಿಮಾ ನೋಡುತ್ತಾ ನನ್ನ ಯುವ ಮಿತ್ರನೊಬ್ಬ ಆಕಳಿಸತೊಡಗಿದ.
ಆದರೆ, ಅವನಿಗೆ ಕುವೆಂಪು ಕಾದಂಬರಿ ಮಲೆಗಳಲ್ಲಿ ಮದುಮಗಳು’ ಮೆಚ್ಚುಗೆಯಾಯಿತು, ರಾಶೋಮನ್ ಸಿನಿಮಾ ಇಷ್ಟವಾಯಿತು. ಕ್ಲಾಸಿಕ್ ಮತ್ತು ಜನಪ್ರಿಯತೆಗೆ ಇರುವ ವ್ಯತ್ಯಾಸ ಇದೇ ಇರಬಹುದಾ ಎಂಬ ಗುಮಾನಿ ನನ್ನಲ್ಲಿ ಮೊಳೆಯಲು ಆರಂಭಿಸಿದ್ದೇ ಆಗ.
ಜನಪ್ರಿಯ ಸಂಗತಿಯೊಂದು ಆಯಾ ಕಾಲದಲ್ಲಿ, ಆಯಾ ದೇಶದಲ್ಲಿ ಎಲ್ಲರಿಗೂ ಮೆಚ್ಚುಗೆಯಾಗಿರುತ್ತದೆ. ಫ್ಯಾಷನ್ನಿನಂತೆ ಅದು ನಮ್ಮನ್ನು ಮುದಗೊಳಿಸಿರುತ್ತದೆ. ಆಗ ನಮ್ಮನ್ನು ಸಂತೋಷಗೊಳಿಸಿದ ಆ ಕೃತಿ ಕೊನೆಯವರೆಗೂ ನಮ್ಮ ಮನಸ್ಸಿನ ಅಂಗಳದಲ್ಲಿ ಹೂ ಬಿಟ್ಟ ಸುಂದರ ವೃಕ್ಷವಾಗಿಯೇ ಉಳಿದಿರುತ್ತದೆ. ಹತ್ತಾರು ವರ್ಷಗಳ ನಂತರವೂ ನಾವು ನಮ್ಮ ಮನಸ್ಸಿನಲ್ಲಿ ಹಿಂದಕ್ಕೆ ಹೋಗಿ ಆ ಮಾಧುರ್ಯವನ್ನು ಸವೆಯಬಲ್ಲವರಾಗಿರುತ್ತೇವೆ. ಆದರೆ, ನಮಗಿಂತ ಕಿರಿಯರಾದವರ ಪಾಲಿಗೆ ಅಂಥ ಮಾಧುರ್ಯವನ್ನು ನೀಡುವ ಸಂಗತಿ ಮತ್ತೇನೋ ಆಗಿರುತ್ತದೆ. ಪ್ರತಿಯೊಬ್ಬನೂ ತನ್ನ ಪರಿಸರ ಮತ್ತು ಸಂಭ್ರಮಕ್ಕೆ ಒಪ್ಪುವಂಥ ಒಂದು ಖುಷಿಯ ಸೆಲೆಯನ್ನು ಕಂಡುಕೊಂಡಿರುತ್ತಾನೆ.
ಇದು ನಮ್ಮ ವರ್ತಮಾನದ ಅಭಿರುಚಿಯನ್ನೂ ನಿರ್ಧಾರ ಮಾಡುತ್ತದೆ ಅಂದುಕೊಂಡಿದ್ದೇನೆ. ಹದಿನೆಂಟನೇ ವಯಸ್ಸಿಗೆ ಟಾಲ್‌ಸ್ಟಾಯ್ ಇಷ್ಟವಾಗುವುದಿಲ್ಲ, ಕಾನೂರು ಹೆಗ್ಗಡಿತಿ ಅಷ್ಟಾಗಿ ಪಥ್ಯವಾಗುವುದಿಲ್ಲ. ಕುಮಾರವ್ಯಾಸನನ್ನು ಓದಬೇಕು ಅನ್ನಿಸುವುದಿಲ್ಲ. ಆದರೆ, ಮತ್ತೊಂದು ಹಂತ ತಲುಪುತ್ತಿದ್ದಂತೆ ಎಲ್ಲವೂ ಬದಲಾಗಿರುತ್ತದೆ ಎಂದು ನಮಗೇ ಅನ್ನಿಸತೊಡಗುತ್ತದೆ.
ಸುಬ್ರಾಯ ಚೊಕ್ಕಾಡಿ ಬರೆದ ಎಂಥಾ ದಿನಗಳವು, ಮರೆಯಾಗಿ ಹೋದವು, ಮಿಂಚಂಥ ದಿನಗಳವು ಇನ್ನೆಂದೂ ಬಾರವು..ಎನ್ನುವ ಕವಿತೆಯನ್ನು ಓದಿದಾಗ ಅನ್ನಿಸುವುದು ಅದೇ ಆದರೆ, ಆ ಮಿಂಚಂಥಾ ದಿನಗಳ ಮಿಂಚು ನಮ್ಮ ತರುಣ ಮಿತ್ರರನ್ನೂ ಸ್ಪರ್ಶಿಸುತ್ತದೆಯಾ ಎನ್ನುವುದಷ್ಟೇ ಪ್ರಶ್ನೆ. ಅದು ಎಂದಿಗೂ ಅವರನ್ನು ಮುಟ್ಟಲಾರದು ಎಂಬ ಸತ್ಯದಲ್ಲೇ ಸಾತತ್ಯವಿದೆ, ಬೆಳವಣಿಗೆಯಿದೆ. ಹೊಸತನವಿದೆ ಮತ್ತು ಯೌವನವಿದೆ.
*******
ಈ ವಾರ ನಿಜಕ್ಕೂ ನಾನು ಬರೆಯಲು ಹೊರಟದ್ದು ಯೇಟ್ಸ್ ಕವಿತೆಗಳ ಕುರಿತು. ಯು ಆರ್ ಅನಂತಮೂರ್ತಿಯವರ ಉಜ್ವಲ ಅನುವಾದದಲ್ಲಿ ಅವು ಹೊಸ ಹೊಳಪು ಪಡಕೊಂಡಿವೆ. ಅದರ ಪೈಕಿ ವೃದ್ದಾಪ್ಯಕ್ಕೊಂದು ಪ್ರಾರ್ಥನೆ ಕವಿತೆ, ವೃದ್ದಾಪ್ಯದ ಕುರಿತು ಹೊಸ ಹೊಳಹೊಂದನ್ನು ನೀಡುವಂತಿದೆ. ನನ್ನನ್ನು ಪ್ರಬುದ್ದನಾದ ಚಿಂತನೆಗಳು ತುಂಬಿದ ಗಾಢವಾದ ವಿಚಾರಧಾರೆಗಳಿರುವ ಮುದುಕನನ್ನಾಗಿ ಮಾಡಬೇಡ. ಹುಂಬತನ ಮತ್ತು ವ್ಯಾಮೋಹ ಇನ್ನೂ ಹಾಗೇ ಉಳಿದಿರುವ ಮುದುಕನಾಗಿ ಉಳಿಸು ಎಂದು ಯೇಟ್ಸ್ ಕೇಳಿಕೊಳ್ಳುತ್ತಾನೆ.
ನನಗೆ ಅಂಥ ಮುದುಕರು ಇಷ್ಟ, ಅದೇ ಕಾರಣಕ್ಕೆ ಖುಷ್‌ವಂತ್ ಸಿಂಗ್ ಇಷ್ಟ. ಎಪ್ಪತ್ತು ದಾಟುತ್ತಿದ್ದರೂ ಉಲ್ಲಾಸದಿಂದ ಓಡಾಡುವ, ನಮ್ಮ ಓರಗೆಯವರೇ ಅನ್ನಿಸುವ, ಯಾವುದೋ ಜಗತ್ತಿನಲ್ಲಿದ್ದಾರೆ ಅನ್ನಿಸದ, ನಮ್ಮಂತೆಯೇ ಯೋಚಿಸುವ, ಅವರ ಕಾಲದ ಬಗ್ಗೆ ಮತಾಡಿ ಬೋರು ಹೊಡೆಸದ ತುಂಟ ವೃದ್ಧರ ಪಟ್ಟಿಯಲ್ಲಿ ಎ ಎಸ್ ಮೂರ್ತಿ, ಸುಬ್ರಾಯ ಚೊಕ್ಕಾಡಿ ಮುಂತಾದವರಿದ್ದಾರೆ. ಅನಂತಮೂರ್ತಿಯವರನ್ನು ನೋಡುತ್ತಿದ್ದರೆ, ಅವರಿಗೆ ಅಷ್ಟು ವಯಸ್ಸಾಗಿದೆ
ಎಂದು ಅನ್ನಿಸುವುದೇ ಇಲ್ಲ. ಕೆಲವರು ನಮ್ಮ ಕಣ್ಣಮುಂದೆ, ನಮ್ಮ ಕಲ್ಪನೆಯಲ್ಲಿ ಹರೆಯದವರಾಗಿಯೇ ಇರುತ್ತಾರೆ. ಬಿ ಆರ್ ಲಕ್ಷ್ಮಣರಾವ್ ಅವರಿಗೆ ಅರವತ್ತಮೂರು ವಯಸ್ಸು ಎಂದು ಯಾರಾದರೂ ಹೇಳಿದರೆ, ಅದನ್ನು ಒಪ್ಪಿಕೊಳ್ಳಲು ಮನಸ್ಸು ನಿರಾಕರಿಸುತ್ತದೆ. ನಮಗಿನ್ನೂ ಅವರು ಜಾಲಿಬಾರಿನಲ್ಲಿ ಕೂತ ಪೋಲಿ ಗೆಳೆಯರಲ್ಲೊಬ್ಬರಾಗಿಯೇ ಕಾಣಿಸುತ್ತಾರೆ. ಮಹಡಿಯಲ್ಲಿ ನಿಂತ ಸುಂದರಿಯ ಮಿಂಚುವ ಮೀನ ಖಂಡಗಳನ್ನು ನೋಡಿ ಚಕಿತವಾಗುವ ಕಣ್ಣುಗಳಷ್ಟೇ ನಮ್ಮ ಪ್ರಜ್ಞೆಯಲ್ಲಿ ದಾಖಲಾಗಿರುತ್ತದೆ.
ವಯಸ್ಸು ಮತ್ತು ಅನುಭವ ಹೀಗೆ ನಮ್ಮನ್ನು ಮಾಗಿಸುತ್ತಾ ಹೋದ ಹಾಗೇ, ನಮ್ಮ ಸ್ಮೃತಿಯಲ್ಲಿ ಯೌವನದ ಕಂಪು, ಹೊಳಪು, ಉಲ್ಲಾಸ, ತೀವ್ರತೆ ಮತ್ತು ಬಿರುಸನ್ನು ಹಾಗೇ ಉಳಿಸಿರುತ್ತದೆ. ಅದೇ ನಮ್ಮನ್ನು ಜೀವಂತವಾಗಿ ಇಡುವ ಶಕ್ತಿ ಎಂದು ನಾನು ನಂಬಿದ್ದೇನೆ.
ಇಲ್ಲದೇ ಹೋದರೆ, ನಾವು ಹುತ್ತಗಟ್ಟಿದ, ಹೊರದಾರಿಗಳಿಲ್ಲದ ಕೋಟೆಯಲ್ಲಿ ಬಂದಿಗಳಾಗಿ ಉಳಿದೇ ಬಿಡುತ್ತೇವೇನೋ ?
ಇದೂ ಒಂದು ಭ್ರಮೆಯೇ ಇರಬಹುದು. ಬದುಕನ್ನು ಪ್ರೀತಿಸುವ ರೀತಿ ಇರಬಹುದು. ಅಥವಾ ಬದುಕನ್ನು ನಾನು ತೀವ್ರವಾಗಿ ಪ್ರೀತಿಸುತ್ತಿದ್ದೇನೆ ಎಂದು ನಂಬಲು ನಾನು ಕಂಡುಕೊಂಡ ಒಂದು ಮಾರ್ಗವೂ ಇರಬಹುದು.

Subscribe to:
Posts (Atom)