ಎಪ್ಪತ್ತು ಕತೆಗಳನ್ನು ಬರೆದಾದ ನಂತರ ಒಂದು ದಿನ ವೈಯನ್ಕೆಗೆ ಹೇಳಿದ್ದೆ. ಇನ್ನು ನಾನು
ಬರೆಯುವುದಿಲ್ಲ, ಅವರು ಹೇಳಿದರು : ಬರೆಯುವುದನ್ನು ನಿಲ್ಲಿಸಬೇಡ, ಪ್ರಕಟಿಸುವುದನ್ನು ನಿಲ್ಲಿಸು.
ಆವತ್ತು ಡೈರಿ ಬರೆಯಲು ಆರಂಭಿಸಿದೆ. ದಿನಕ್ಕೆ ಹತ್ತು ಪುಟದಂತೆ ಬರೆಯುತ್ತಾ ಹೋದೆ. ತಿಂಗಳಲ್ಲಿ 20
ದಿನವಂತೂ ಬರೆದೇ ಬರೆಯುತ್ತಿದ್ದೆ. ಪ್ರತಿತಿಂಗಳೂ 200 ಪುಟದ ಪುಸ್ತಕದ ತುಂಬ ನಾನು ನೋಡಿದ
ಸಿನಿಮಾ, ಓದಿದ ಪುಸ್ತಕ, ಆಗಷ್ಟೇ ಹುಟ್ಟಿದ ಕತೆ, ಎಲ್ಲೋ ಓದಿದ ಕತೆಯಿಂದ ಗ್ರಹಿಸಿದ್ದು,
ನ್ಯೂಯಾರ್ಕ್ ಟೈಮ್ಸಲ್ಲಿ ಬಂದು ಲೇಖನದ ಅನುವಾದ- ಹೀಗೆ ಏನಾದರೊಂದು ಬರೆಯುತ್ತಿದ್ದೆ. ಬರೆಯದೇ ಊಟ
ಮಾಡುವುದಿಲ್ಲ ಎಂಬುದನ್ನು ಶ್ರದ್ಧೆಯಿಂದ ಪಾಲಿಸುತ್ತಿದ್ದೆ. ನಾಲ್ಕು ವರ್ಷ ಹಾಗೆ ಬರೆದಿಟ್ಟದ್ದು
ಸುಮಾರು 60 ಪುಸ್ತಕಗಳಲ್ಲಿ ತುಂಬಿಹೋಗಿದೆ.
ಅವನ್ನೆಲ್ಲ ಎತ್ತಿ ಅಟ್ಟಕ್ಕೆ ಹಾಕುವಾಗ ಕಣ್ಣೀರು ಬಂತು. ಪ್ರಕಟಿಸುವ ಆಸೆಯಾಯಿತು. ಎಷ್ಟಾದರೂ ನಾನೇ ಬರೆದದ್ದು.
ಯಾರಾದರೂ ಪ್ರಕಾಶಕರು ಕೇಳಿದರೆ ಥಟ್ಟನೆ ಇದನ್ನು ಪ್ರಕಟಿಸಿ ಅಂತ ಕೊಟ್ಟುಬಿಟ್ಟರೆ? ಏನು ಮಾಡಲಿ ಅಂತ ವೈಯನ್ಕೆಗೆ ಕೇಳಿದೆ.
ಕಿಲ್ಯುವರ್ ಬೇಬೀಸ್ ಅಂದರು. ಮರದ ಹಾಗೆ ದಿನವೂ ಹೂವು ಅರಳಿಸುತ್ತಿರಬೇಕು. ಅವನ್ನು ಕಾಪಿಟ್ಟುಕೊಳ್ಳಲು
ಹೋಗಬಾರದು. ಯೋಜನಗಂಧಿಯ ಹಾಗೆ ಹೆತ್ತ ಮಕ್ಕಳನ್ನೆಲ್ಲ ನೀರಿಗೆ ಎಸೆಯಬೇಕು. ಲೇಖಕನಿಗೂ ಆ
ನಿಷ್ಠುರವಾದ ನಿಲುವು ಇರಬೇಕು. ಪ್ರಕಟಿಸಬೇಕಾದ ಪುಸ್ತಕಗಳು ಯಾವುದು, ಯಾವುದು ಪ್ರಕಟಣೆಗೆ
ಅರ್ಹವಲ್ಲ ಎಂಬುದು ಗೊತ್ತಿರಬೇಕು. ಎಷ್ಟೋ ಸಲ ಪ್ರಕಟಣೆಗೆ ಅರ್ಹವಾಗಿದ್ದರೂ ಪ್ರಿಂಟು ಮಾಡಲಿಕ್ಕೆ
ಹೋಗಬಾರದು. ಪ್ರಕಟಿಸುವ ಆಮಿಷವೇ ಲೇಖಕನಿಗೆ ಶತ್ರು. ಅಂಥ ಆಮಿಷ ಇಲ್ಲದವರೆಂದರೆ ಕಿ ರಂ ನಾಗರಾಜ
ಮತ್ತು ಬಿವಿ ಕಾರಂತ ಅಂದಿದ್ದರು ವೈಯನ್ಕೆ.
ಅದಾಗಿ ಎಷ್ಟೋ ದಿನದ ನಂತರ ಕಿರಂ ಸಿಕ್ಕಾಗ ವೈಯನ್ಕೆ
ಹೇಳಿದ್ದನ್ನು ಅವರಿಗೆ ಹೇಳಿದೆ. ಅವರು ಎಂದಿನ ಉಡಾಫೆಯಲ್ಲಿ ನಕ್ಕು, ಅಯ್ಯೋ ಯಾವನ್ರೀ ಬರೀತಾನೆ
ಅಂದರು. ಬರೆದು ಏನು ಮಾಡೋದಿದೆ ಹೇಳಿ. ಅಡಿಗರು ಹೇಳಿದ್ದು ಗೊತ್ತಲ್ಲ ಅಂತ ಒಂದು ಪ್ರಸಂಗ
ನೆನಪಿಸಿಕೊಂಡರು: ಸಂದರ್ಭ ಅಡಿಗರ ಹುಟ್ಟುಹಬ್ಬ. ನಡೆದದ್ದು ಜಯನಗರದ ಪ್ರಿಸಂ, ದಿ ಬುಕ್
ಶಾಪ್ನಲ್ಲಿ. “ನಾನೂ, ಅಡಿಗರು ನಡೀತಾ ಹೋಗುತ್ತಿದ್ವಿ. ನೆಟ್ಟಕಲ್ಲಪ್ಪ ಸರ್ಕಲ್ ಹತ್ತಿರ ಒಬ್ಬ
ಹಳ್ಳಿಯ ಹುಂಬ ರಸ್ತೆ ದಾಟುತ್ತಿದ್ದ. ಅಡಿಗರು ನನ್ನನ್ನೊಂದು ಕ್ಷಣ ತಡೆದು ನಿಲ್ಲಿಸಿ, ಅವನನ್ನು
ತೋರಿಸಿ ಹೇಳಿದರು. “ನೋಡಯ್ಯಾ, ನೀನು ಆ ರಸ್ತೆದಾಟುವ ಹಳ್ಳಿಯವನನ್ನು ಹೇಗೆ ನೋಡ್ತೀಯೋ, ನನ್ನನ್ನು
ಕೂಡ ಹಾಗೇ ನೋಡಬೇಕು. ನಾನು ಬೇರೆಯಲ್ಲ. ಅಲ್ಲಿ ರಸ್ತೆ ದಾಟುವ ಹಳ್ಳಿಗ ಬೇರೆಯಲ್ಲ.” ನಾವೆಲ್ಲ,
ಅಡಿಗರ ಥಿಂಕಿಂಗ್ ಬಗ್ಗೆ ಮೆಚ್ಚುಗೆ ಪಡುತ್ತಿರಬೇಕಾದರೆ ಕಿ.ರಂ. ಮುಂದುವರೆಸಿದರು. “...ಮತ್ತೆ
ನೀನೂ ಕೂಡ ಬೇರೆಯಲ್ಲ!”
ಕಿರಂ ಸಂಯಮದ ಗುಟ್ಟೇನು ಅಂತ ನನಗೆ ಕೊನೆಗೂ ಗೊತ್ತೇ ಆಗಲಿಲ್ಲ. ನೀವೇ
ಬರೆಯಿರಿ, ನಾವು ಬರೀತೀವಿ, ನೀವು ಡಿಕ್ಟೇಟ್ ಮಾಡಿ, ನೀವು ಮಾತಾಡಿದ್ದನ್ನೆಲ್ಲ ರೆಕಾರ್ಡ್
ಮಾಡಿಕೊಂಡು ಪುಸ್ತಕ ಮಾಡೋಣ ಅಂತ ನಾನೂ ಉದಯ ಮರಕಿಣಿಯೂ ಅವರಿಗೆ ನೂರಾರು ಸಲ ಹೇಳಿದ್ದೆವು. ಒಂದು
ಸಲ ನೆಟ್ಟಕಲ್ಲಪ್ಪ ಸರ್ಕಲಿನ ಬಾರಲ್ಲಿ ಕೂತಾಗ ಗುಟ್ಟಾಗಿ ಕಿರಂ ಮಾತಾಡಿದ್ದನ್ನು ರೆಕಾರ್ಡು ಮಾಡಲು
ನನ್ನ ಹಳೆಯ ಟೇಪ್ ರೆಕಾರ್ಡು ಒಯ್ದು ಆನ್ ಮಾಡಿ ಇಟ್ಟಿದ್ದೆ. ಪಾರ್ಟಿ ಮುಗಿಸಿ ಮನೆಗೆ ಬಂದ
ರೆಕಾರ್ಡು ಹಾಕಿದರೆ ಮೆತ್ತಗೆ ಮಾತಾಡುವ ಕಿರಂ ದನಿ ದಾಖಲಾಗಿರಲೇ ಇಲ್ಲ. ನಮ್ಮ ಪಕ್ಕದ ಟೇಬಲಲ್ಲಿ
ಕೂತಿದ್ದವನು ಕೆಟ್ಟ ಮಾತಲ್ಲಿ ಯಾರಿಗೋ ಬೈಯುತ್ತಿದ್ದದ್ದು, ಸಪ್ಲೈಯರ್ ಏನ್ ಕೊಡ್ಲಿ, ಚಿಕನ್
ಸುಕ್ಕಾ, ಮಟನ್ ಕೈಮ, ಪಿಷ್ ಫಿಂಗರ್ ಇದೆ ಅಂದಿದ್ದೆಲ್ಲ ಸ್ಪಷ್ಟವಾಗಿ ಕೇಳಿಸುತ್ತಿತ್ತು. ಅದನ್ನು
ಕಿರಂಗೆ ಹೇಳಿದಾಗ ಮನಸಾರೆ ನಕ್ಕು, ಅದೇ ಅತ್ಯುತ್ತಮ ಸಾಹಿತ್ಯ ಅಂದಿದ್ದರು.
ವೈಯನ್ಕೆ 1999ರ ಅಕ್ಟೋಬರ್ 16ರಂದು ಕಾಲವಾದರು. ಅವರು ಅಮೆರಿಕಾಕ್ಕೆ ಹೋಗುವ ತಿಂಗಳ ಮುಂಚೆ ಅವರಿಗೆ ನನ್ನ ಹೊಸ
ಪುಸ್ತಕದ ಹಸ್ತಪ್ರತಿ ತೋರಿಸಿದೆ. ಅವರು ಅದನ್ನು ತಮ್ಮ ಎಂದಿನ ಶರವೇಗದಲ್ಲಿ ಕಣ್ಣಾಡಿಸಿ ಓದಿದರು.
ಗುಡ್ ಗುಡ್... ಅಂದರು. ರಾತ್ರಿ ಗಾಲ್ಫ್ ಕ್ಲಬ್ಬಲ್ಲಿ ನಾನೂ ಉದಯ್ ಮರಕಿಣಿ ಕೂತಿದ್ದಾಗ ಮತ್ತೆ
ಪುಸ್ತಕದ ಬಗ್ಗೆ ಮಾತಾಡಿದರು.ಆ ಪುಸ್ತಕ ಪ್ರಿಂಟ್ ಮಾಡ್ಲೇಬೇಕಾ ನೀನು ಅಂತ ಕೇಳಿದ್ದರು.
ಹಾಗೇನಿಲ್ಲ ಸರ್. ಚೆನ್ನಾಗಿದ್ದರೆ ಮಾಡ್ತೀನಿ ಅಂದಿದ್ದೆ. ಚೆನ್ನಾಗಿದೆ. ಅದು ನಿನಗೂ ಗೊತ್ತಿದೆ.
ಚೆನ್ನಾಗಿರೋದು ಮುಖ್ಯ ಅಲ್ಲ. ನೀನು ನಿನ್ನ ಭಾಷೆಯಲ್ಲಿ ಬರೀಬೇಕು. ಆರ್ಥರ್ ಕ್ವಿಲ್ಲರ್ ಅಂತ ಒಬ್ಬ
ಹುಚ್ಚ ಇದ್ದಾನೆ. ಅವನು ಜಗತ್ತಿನ ಅತ್ಯುತ್ತಮ ಇಂಗ್ಲಿಷ್ ಪದ್ಯಗಳನ್ನೆಲ್ಲ ಸಂಗ್ರಹ ಮಾಡಿದ್ದಾನೆ.
ಅದನ್ನೆಲ್ಲ ಮಾಡಿದ ನಂತರ ಅವನೊಂದು ಪುಸ್ತಕ ಬರೆದ. ಚೆನ್ನಾಗಿರೋ ಪದ್ಯಗಳನ್ನು ಬರೆಯುವಾಗ,
ಚೆನ್ನಾಗಿರೋ ಬರಹ ಬರೆಯುವಾಗ ಹುಷಾರಾಗಿರಬೇಕು. ನಿಮಗಿಷ್ಟವಾಗಿರೋದು ಓದುಗರಿಗೂ
ಇಷ್ಟವಾಗಬೇಕಾಗಿಲ್ಲ. ಕೇಂಬ್ರಿಜ್ ಯೂನಿವರ್ಸಿಟೀಲಿ ಅವನು ಒಂದು ಸಲ ಭಾಷಣ ಮಾಡ್ತಾ ಹೇಳಿದ
‘Whenever you feel an impulse to perpetrate a piece of exceptionally fine
writing, obey it—whole-heartedly—and delete it before sending your manuscript to
press. Murder your darlings.’ ಅಂದ್ರೆ ಬರೆಯುವಾಗ ಚೆಂದ ಚೆಂದದ ಪದಗಳು, ಅಭಿವ್ಯಕ್ತಿಗಳು
ಬರುತ್ತವೆ. ಪ್ರಕೃತಿಯ ಸೊಬಗನ್ನು ವರ್ಣಿಸೋಣ ಅನ್ನಿಸುತ್ತೆ. ಬರೆಯುವಾಗ ಅದನ್ನು ತಡೆಯೋದಕ್ಕೆ
ಹೋಗಬೇಡಿ. ಬರೆದುಬಿಡಿ. ಆದರೆ ಪ್ರಿಂಟಿಗೆ ಹೋಗುವಾಗ ನೀವು ಮೆಚ್ಚಿ ಬರೆದ ಸಾಲುಗಳನ್ನು
ನಿರ್ದಾಕ್ಷಿಣ್ಯಾಗಿ ಅಳಿಸಿಹಾಕಿ, ಕಿಲ್ ಯುವರ್ ಡಾರ್ಲಿಂಗ್ಸ್.
ವೈಯನ್ಕೆ ಅಷ್ಟು ಹೇಳಿದ್ದೆ ತಡ, ನಾನು ಬರೆದಿಟ್ಟಿದ್ದ ಅರವತ್ತೂ ಪುಸ್ತಕಗಳನ್ನೂ ನನ್ನ ಅಣ್ಣನ ಮನೆಗೆ ಸಾಗಿಸಿದೆ. ಅಲ್ಲಿದ್ದ ನನ್ನ
ಇತರ ಪುಸ್ತಕಗಳ ನಡುವೆ ಇವೂ ಜಾಗ ಪಡೆದವು. I killed my darlings! ನಾವೇ ಮೆಚ್ಚೋದನ್ನು ನಾವು
ಬರೆಯಬಾರದು ಅಂತ ತಿಳಿಸಿಕೊಟ್ಟ ವೈಯನ್ಕೆಗೆ ನಮಸ್ಕಾರ.
Monday, February 22, 2010
Tuesday, February 9, 2010
ಅಶ್ರಫ್, ಕುಂಟಿನಿ, ಮುಸ್ತಫಾ, ಮಹೇಂದ್ರ, ಕಿಶೋರ್ ಮತ್ತು ಉಪ್ಪಿನಂಗಡಿ ಎಂಬ ಪುಣ್ಯಭೂಮಿ
ಜೀವಂತವಾಗಿದ್ದಾರಾ?
ಹೂಂ.
ಕರ್ನಾಟಕದವರಾ? ಹೊರಗಿನವರಾ?
ಕರ್ನಾಟಕದವರು.
ಕಲೆ, ಧಾರ್ಮಿಕ, ಸಾಹಿತ್ಯ, ರಾಜಕೀಯ, ಸಿನಿಮಾ, ಕ್ರೀಡೆ...
ಸಾಹಿತ್ಯ.
ಪ್ರಶಸ್ತಿ ಬಂದಿದ್ಯಾ...
ಹೂಂ.
ನಮ್ಮ ದೇಶದ ಪ್ರಶಸ್ತಿಯಾ, ವಿದೇಶಿ ಪ್ರಶಸ್ತಿಯಾ?
ವಿದೇಶಿ..
ಅಡಿಗ, ಅರವಿಂದ ಅಡಿಗ.
ಎಲ್ಲರೂ ಹೋ’ ಎಂದು ಸಂಭ್ರಮಿಸಿದರು. ಕವಿಗಳು ಬೆರಗಾಗಿ ಕೂತರು.ಮತ್ಯಾರೋ ಕೈ ಕುಲುಕಿದರು. ಐದೇ ಪ್ರಶ್ನೆಗಳಲ್ಲಿ ಉತ್ತರ ಸಿಕ್ಕಿತು ಅಂದರು. ಇದು ನಮ್ಮೂರ ಹುಡುಗರ ಹೊಸ ಆಟ. ಅದಕ್ಕೆ ಅವರಿಟ್ಟ ಹೆಸರು ಅಶ್ವಮೇಧ’. ಆಟದ ನಿಯಮ ಇಷ್ಟೇ. ಒಂದು ಪುಟ್ಟ ಚೀಟಿಯಲ್ಲಿ ಒಬ್ಬ ಖ್ಯಾತನಾಮರ ಹೆಸರು ಬರೆದಿಟ್ಟುಕೊಳ್ಳಿ. ಅವರ ಬಗ್ಗೆ ಆಥ ಪ್ರಶ್ನೆಗಳನ್ನು ಕೇಳುತ್ತಾ ಹೋಗುತ್ತಾನೆ. ನೀವು ಇಪ್ಪತ್ತೊಂದು ಪ್ರಶ್ನೆಗಳಿಗೆ ಉತ್ತರ ಕೊಡುವ ಮೊದಲೇ ನೀವು ಬರೆದಿಟ್ಟುಕೊಂಡ ವ್ಯಕ್ತಿ ಯಾರೆಂದು ಆತ ಹೇಳುತ್ತಾನೆ. ಹಾಗೆ ಹೇಳುವವನ ಹೆಸರು ಮುಸ್ತಫಾ.
ಮೇಲ್ನೋಟಕ್ಕೆ ಇದೊಂದು ಅತ್ಯಂತ ಸರಳವಾದ ಆಟದಂತೆ ಕಾಣಿಸುತ್ತದೆ. ಆದರೆ ಒಂದು ಮಟ್ಟದ ಜನರಲ್ ನಾಲೆಜ್ ಇಲ್ಲದೇ ಹೋದರೆ, ನಿತ್ಯವೂ ಪೇಪರ್ ಓದದೇ ಇದ್ದರೆ, ಚರಿತ್ರೆಯಿಂದ ಹಿಡಿದು, ಇತ್ತೀಚಿನ ಆಗುಹೋಗುಗಳ ತನಕ ಎಲ್ಲವನ್ನೂ ತಿಳಿದುಕೊಂಡಿರದೇ ಇದ್ದರೆ ಕೇವಲ ಕೆಲವೇ ಕೆಲವು ಸೂಚನೆಗಳನ್ನು ಮುಂದಿಟ್ಟುಕೊಂಡು ಹೇಳುವುದು ಕಷ್ಟ. ಎಂಜಿಆರ್ ಪತ್ನಿ ಜಾನಕಿ ರಾಮಚಂದ್ರನ್, ದಕ್ಷಿಣ ಕನ್ನಡದ ವಿಟ್ಲ ಎಂಬ ಊರಿನ ಹವ್ಯಕ ಹೆಂಗಸು ಎಂಬ ಸಣ್ಣ ವಿವರಗಳೂ ಅಲ್ಲಿ ಮುಖ್ಯ.
ಇದನ್ನು ನೋಡುತ್ತಿದ್ದರೆ ಆಶ್ಚರ್ಯವಾಯಿತು. ಪ್ರಶ್ನೆಗಳನ್ನು ಕೇಳುತ್ತಿದ್ದ ಹಾಗೇ, ಕೆ ವಿ ತಿರುಮಲೇಶ್, ಯಶವಂತ ಚಿತ್ತಾಲ, ಭೀಮಸೇನ ಜೋಷಿ, ಅಷ್ಟೇನೂ ಖ್ಯಾತರಲ್ಲದ ಡಿ ಎ ಶಂಕರ್- ಹೀಗೆ ಎಲ್ಲರ ಕುರಿತು ಮಾಹಿತಿ ಇಟ್ಟುಕೊಂಡ ಮುಸ್ತಫಾ ಮತ್ತು ಗೆಳೆಯರ ಗುಂಪು ತಮ್ಮಷ್ಟಕ್ಕೇ ತಾವು ಓದುತ್ತಾ, ತಿಳಿದುಕೊಳ್ಳುತ್ತಾ, ಬೆರಗುಗೊಳ್ಳುತ್ತಾ, ಸಂಭ್ರಮಪಡುತ್ತಾ ಇರುವುದನ್ನು ನೋಡಿ ಡುಂಡಿರಾಜ್, ಸುಬ್ರಾಯ ಚೊಕ್ಕಾಡಿ, ಲಕ್ಷ್ಮಣರಾವ್ ಕೂಡ ಅಚ್ಚರಿಯಿಂದ ನೋಡತೊಡಗಿದರು. ಲಕ್ಷ್ಮಣರಾವ್ ಅವರ ಮೂವತ್ತೋ ನಲವತ್ತೋ ಕವಿತೆಗಳನ್ನು ಥಟ್ಟನೆ ಹೇಳಬಲ್ಲ ಆರೆಂಟು ಹುಡುಗರು ಅಲ್ಲಿದ್ದರು. ಎಷ್ಟೋ ವರ್ಷಗಳ ಹಿಂದೆ ಸಂತೋಷ’ ಪತ್ರಿಕೆಯಲ್ಲಿ ದೆಹಲಿಯ ಬಗ್ಗೆ ಚೊಕ್ಕಾಡಿ ಬರೆದ ಕವಿತೆಯನ್ನು ಮತ್ಯಾರೋ ನೆನಪಿಸಿದರು. ಡುಂಡಿರಾಜ್ ಎಂದೋ ಬರೆದಿದ್ದ, ಸದ್ಯಕ್ಕೆ ಯಾರೂ ನೆನಪಿಸಿಕೊಳ್ಳದ ಓಡುವವರು’ ನಾಟಕದ ಸಾಲುಗಳನ್ನು ಹೇಳಿದರು. ಹೀಗೆ ಇಡೀ ರಾತ್ರಿ ಉಲ್ಲಾಸದಿಂದ ಸರಿಯುತ್ತಿತ್ತು.
ಇದು ಉಪ್ಪಿನಂಗಡಿಯ ಕತೆ. ಅಲ್ಲಿ ಎದುರಾಗುವ ಅಶ್ರಫ್, ಮಹೇಂದ್ರ, ಶಾಹುಲ್ ಹಮೀದ್, ಕಿಶೋರ್ ಅಧಿಕಾರಿ, ಮುಸ್ತಫಾ ಮತ್ತು ಇವರೆಲ್ಲರ ಗುರುವಿನಂತಿರುವ ಗೋಪಾಲಕೃಷ್ಣ ಕುಂಟಿನಿ ಮುಂತಾದ ಗೆಳೆಯರ ಬಳಗವೊಂದು ತಣ್ಣಗೆ ತಮಗೆ ಬೇಕಾದ್ದನ್ನು ಓದಿಕೊಂಡು, ನೋಡಿಕೊಂಡು, ಮಾಡಿಕೊಂಡು ತಮ್ಮ ಆರೋಗ್ಯವನ್ನು ಅಭಿರುಚಿಯನ್ನು ಕಾಪಾಡಿಕೊಳ್ಳಲು ಹೆಣಗುತ್ತಿದೆ. ನಾನು ನೋಡಿದ ಎಲ್ಲ ಪುಟ್ಟ ಊರುಗಳಲ್ಲೂ ಇಂಥದ್ದೊಂದು ಗುಂಪಿದೆ. ಅವರು ತಮಗಿಷ್ಟ ಬಂದಿದ್ದನ್ನು ಓದುತ್ತಾ, ಪತ್ರಿಕೆಯಲ್ಲಿ ಬಂದ ಪುಸ್ತಕ ತರಿಸಿಕೊಂಡು ಓದಿ ಚರ್ಚಿಸುತ್ತಾ, ಬೆಂಗಳೂರಲ್ಲಿ ಮಾತ್ರ ಒಂದೋ ಎರಡೋ ಪ್ರದರ್ಶನ ಕಾಣುವ ಕಲಾತ್ಮಕ ಚಿತ್ರಗಳ ಡೀವೀಡಿ ತರಿಸಿಕೊಂಡು ಸಿನಿಮಾ ನೋಡುತ್ತಾ, ತಮ್ಮನ್ನು ಮುಖ್ಯವಾಹಿನಿಯಿಂದ ಹೊರಗಿಟ್ಟದ್ದರ ಬಗ್ಗೆ ಬೇಸರಪಡುತ್ತಾ, ಆ ಮಿತಿಯಲ್ಲೇ ಜೀವನೋತ್ಸಾಹ ಕಂಡುಕೊಳ್ಳುತ್ತಿರುತ್ತಾರೆ. ಅಂಥವರಿಗೂ ತನಗೂ ಸಂಬಂಧವೇ ಇಲ್ಲ ಎಂಬಂತೆ ಬೆಂಗಳೂರು ತಲೆಕೊಡವಿಕೊಂಡು ಇನ್ನೆಲ್ಲೋ ನೋಡುತ್ತಿದೆ.
*****
ಇವತ್ತಿನ ಚೈತನ್ಯದ ಚಿಲುಮೆಗಳು ಗ್ರಾಮೀಣ ಕರ್ನಾಟಕದಲ್ಲಿವೆ ಅನ್ನುವುದಂತೂ ಸತ್ಯ. ಬೆಂಗಳೂರಿನ ಮಟ್ಟಿಗೆ ಇವತ್ತು ದುಡಿಮೆ ಎನ್ನುವುದು ಮೂಲಮಂತ್ರ. ದುಡಿಮೆ ಒಂದು ಮೌಲ್ಯ ಮಾತ್ರವೇ ಆಗಿದ್ದ ದಿನಗಳು ಕಣ್ಮರೆಯಾಗಿ, ದುಡಿಮೆಗೆ ಇವತ್ತು ಅದಕ್ಕಿಂತ ಹೆಚ್ಚಿನ ಮಹತ್ವ ಪ್ರಾಪ್ತವಾಗಿದೆ. ಕಾಯಕವೇ ಕೈಲಾಸ ಎನ್ನುವುದು ಸುಳ್ಳಾಗುತ್ತಿದೆ. ದುಡಿಮೆಯ ಜೊತೆಗೇ ಬೆಸೆದುಕೊಂಡಿದ್ದ ಸೌಖ್ಯ ಮಾಯವಾಗಿದೆ. ನಮ್ಮಲ್ಲಿ ಬಹುತೇಕ ಮಂದಿ, ನಾವು ಮಾಡಬೇಕಾದದ್ದನ್ನು ಸಂತೋಷದಿಂದ ಮಾಡುತ್ತಿಲ್ಲ. ಅದರ ಬದಲು, ಅಲ್ಲೊಂದು ಬಗೆಯ ಅನಿವಾರ್ಯ ಕರ್ಮದ ಒತ್ತಡ, ಸೂತಕದ ಛಾಯೆ ಕಾಣಿಸುತ್ತಿದೆ. ಹಾಡುತ್ತಾ ಗೆಯ್ಮೆ ಮಾಡುತ್ತಿದ್ದ, ನಾಟಿ ಮಾಡುತ್ತಾ, ಬತ್ತ ಕುಟ್ಟುತ್ತಾ, ರಾಗಿ ಬೀಸುತ್ತಾ ಆ ಕೆಲಸದ ಸಂತೋಷವನ್ನು ಅನುಭವಿಸುತ್ತಿದ್ದ ದಿನಗಳು ಇವತ್ತಿಲ್ಲ. ದಿನಕ್ಕೆ ಲಕ್ಷಾಂತರ ರುಪಾಯಿ ವ್ಯಾಪಾರ ಮಾಡುವ ಹೊಟೆಲೊಂದರ ಅಡುಗೆ ಭಟ್ಟರೊಬ್ಬರು ಹೇಳುತ್ತಿದ್ದರು; ಮೊದಲೆಲ್ಲ ನಮ್ಮ ಹೊಟೆಲಿಗೆ ನಾನು ಇಷ್ಟಪಡೋ ವ್ಯಕ್ತಿಗಳು ಬರುತ್ತಿದ್ದರು. ಸಾಹಿತಿಗಳು, ಸಂಗೀತಗಾರರು, ರಾಜಕಾರಣಿಗಳು, ಕ್ರೀಡಾಪಟುಗಳು ಬಂದು ನಾನು ಮಾಡಿದ ದೋಸೆ ತಿಂದು ಸಂತೋಷಪಡುತ್ತಿದ್ದರು. ಆಗೆಲ್ಲ ನನ್ನ ಬಗ್ಗೆ ಒಂಥರ ಖುಷಿಯಾಗುತ್ತಿತ್ತು. ಸಾರ್ಥಕತೆ ಮೂಡುತ್ತಿತ್ತು. ಇವತ್ತು ಹಾಗಿಲ್ಲ. ಆಗ ದಿನಕ್ಕೆ ನೂರಿನ್ನೂರು ದೋಸೆ ಮಾಡುತ್ತಿದ್ದೆ. ಈಗ ಎಂಟು ನೂರು ದೋಸೆ ಮಾಡುತ್ತೇನೆ. ಬರೀ ದೋಸೆ ಮಾಡುವುದಷ್ಟೇ ಜೀವನ ಎಂಬಂತಾಗಿದೆ.
ಪತ್ರಿಕೋದ್ಯಮದಲ್ಲೂ ಅದೇ ಆಗಿದೆ. ನಾವು ಸಿನಿಮಾ ಪತ್ರಿಕೋದ್ಯಮ ಆರಂಭಿಸಿದ ದಿನಗಳಲ್ಲಿ ಅಲ್ಲೊಂದು ಸಂಭ್ರಮ ಇರುತ್ತಿತ್ತು. ಸಿನಿಮಾ ನಟರು, ನಿರ್ದೇಶಕರು, ಸಂಗೀತ ನಿರ್ದೇಶಕರು ಸುಮ್ಮನೆ’ ಹರಟುವಷ್ಟು ವ್ಯವಧಾನ ಇಟ್ಟುಕೊಂಡಿದ್ದರು. ವಿಷ್ಣುವರ್ಧನ್ ಜೊತೆ ಕುಳಿತರೆ, ರಾಜಕೀಯ, ಕ್ರಿಕೆಟ್, ಸಂಗೀತ, ಮತ್ಯಾವುದೋ ಇಟೆಲಿಯ ಸಿನಿಮಾದ ಬಗ್ಗೆ ಮಾತಾಗುತ್ತಿತ್ತು. ಪರಸ್ಪರರನ್ನು ಗೇಲಿ ಮಾಡಿಕೊಳ್ಳುತ್ತಾ ಅಲೆಲ್ಲ ನಗು ಹರಡುತ್ತಿತ್ತು. ಇವತ್ತು ಪತ್ರಕರ್ತರಿಗೂ ಅಷ್ಟು ಪುರುಸೊತ್ತಿಲ್ಲ. ಸಿನಿಮಾನಟರಂತೂ ಸೆಕೆಂಡುಗಳ ಲೆಕ್ಕದಲ್ಲಿ ಬದುಕುತ್ತಿದ್ದಾರೆ. ಪತ್ರಕರ್ತ ತಾನು ಕೇಳಿಸಿಕೊಂಡಿದ್ದನ್ನೋ ಶೂಟ್ ಮಾಡಿದ್ದನ್ನೋ ತಕ್ಷಣ ಜನರಿಗೆ ತಲುಪಿಸಬೇಕು ಎಂದು ಓಡುತ್ತಿರುತ್ತಾನೆ. ನಟನಿಗೋಸ್ಕರ ಮುಂದಿನ ಚಿತ್ರದ ಕತೆ ಹೇಳುವವರು ಕಾಯುತ್ತಿರುತ್ತಾರೆ.
ಇಂಥದ್ದರ ಮಧ್ಯೆ ಪ್ರಕಾಶ್ ರೈ ಬೇರೆಯೇ ಆಗಿ ನಿಲ್ಲುತ್ತಾರೆ. ಮೊನ್ನೆ ಊರಿಗೆ ಹೋಗುತ್ತಾ ಅವರ ನಾನೂ ನನ್ನ ಕನಸು’ ಶೂಟಿಂಗ್ ನಡೆಯುತ್ತಿದ್ದ ಯಜಮಾನ್ ಎಸ್ಟೇಟ್‌ಗೆ ಹೋದರೆ ಅಲ್ಲಿ ಪ್ರಕಾಶ್ ರೈ ಎಂದಿನ ಉಲ್ಲಾಸದಲ್ಲಿ ಕೂತಿದ್ದರು. ಎರಡು ಹಾಡು ನೋಡೋಣ ಎಂದರು. ಹಾಡು ಮುಗಿಯುತ್ತಿದ್ದಂತೆ ಇತ್ತೀಚೆಗೆ ಓದಿದ ಪುಸ್ತಕಗಳ ಬಗ್ಗೆ ಮಾತಾಡಿದರು. ಹಳೆಯ ಗೆಳೆಯರಾದ ಶೆಣೈ, ಮರಕಿಣಿ ಹೇಗಿದ್ದಾರೆ ಎಂದು ವಿಚಾರಿಸಿಕೊಂಡರು. ಕರ್ತವ್ಯದಲ್ಲಿ ಕಳೆದು
ಹೋಗುತ್ತಿದ್ದೀರಿ. ಸುಮ್ಮನೆ ಎಲ್ಲರೂ ಹೊರಟು ಬನ್ನಿ, ಖುಷಿಯಾಗಿ ಒಂದೆರಡು ದಿನ ಇದ್ದು ಹೋಗಿ ಎಂದರು. ಇವತ್ತು ಖುಷಿಯಾಗಿ ಒಂದೆರಡು ದಿನ ಸುಮ್ಮನೆ ಇದ್ದುಹೋಗಿ ಎನ್ನುವವರು ಸಿಕ್ಕಿದ್ದೇ ಒಂದು ಪವಾಡ ಎಂದು ನಾವೊಂದಷ್ಟು ಮಂದಿ ಮಾತಾಡಿಕೊಂಡೆವು.
ಉಲ್ಲಾಸ ತುಂಬುವ ಸಂಗತಿಗಳು ತುಂಬಾ ಕಡಿಮೆ. ಅವುಗಳನ್ನು ನಾವು ಸವಿಯದೇ ಹೋದರೆ, ಆ ರಸಬಿಂದುಗಳೂ ಬತ್ತಿಹೋಗುತ್ತವೆ. ಅನ್ನಿಸಿದ್ದೇನನ್ನೋ ಬರೆದಾಗ, ಅದನ್ನು ಆಪ್ತರ ಜೊತೆ ಹಂಚಿಕೊಳ್ಳುವುದು, ಥ್ರೀ ಈಡಿಯಟ್ಸ್ ಸಿನಿಮಾದ ದೃಶ್ಯವೊಂದನ್ನು ನೆನೆದು ಹಳೆಯ ದಿನಗಳಿಗೆ ಜಾರುವುದು, ನಾಲ್ಕಾರು ಮಂದಿ ತಿಂಗಳಿಗೊಮ್ಮೆ ಕಾವೇರಿ ಫಿಷಿಂಗ್ ಕ್ಯಾಂಪಿಗೆ ಹೋಗಿ ಗಾಳ ಹಾಕುತ್ತಾ ಕೂರುವುದು, ಪಿವಿಆರ್ ಚಿತ್ರಮಂದಿರದ ಮೆಟ್ಟಲಲ್ಲಿ ಕೂತು ಪಾಪ್‌ಕಾರ್ನ್ ತಿನ್ನುತ್ತಾ ಆ ಗದ್ದಲವನ್ನು ಸವಿಯುವುದು.. ಇವೆಲ್ಲ ಇವತ್ತಿಗೂ ಜಗತ್ತಿನಲ್ಲಿ ನಡೆಯುತ್ತಲೇ ಇದೆ. ಮೊನ್ನೆ ಮೊನ್ನೆ ಒಂದಷ್ಟು ಮಿತ್ರರು ಕೊಡಗಿನ ಪುಷ್ಪಗಿರಿಗೆ ಹೋಗಿ ಇಪ್ಪತ್ತೋ ಮೂವತ್ತೋ ಕಿಲೋಮೀಟರ್ ನಡೆದಾಡಿ, ಸೂರ್ಯಾಸ್ತ ನೋಡಿ ಬಂದರು. ನಾವೊಂದಷ್ಟು ಮಂದಿ ಡ್ರೈವರ್ ಮೇಲೆ ರೇಗುತ್ತಾ, ಇನ್ನೊಂದು ದಾರಿಯಲ್ಲಿ ಬಂದಿದ್ದರೆ ಅರ್ಧಗಂಟೆ ಮುಂಚೆ ತಲುಪಬಹುದು ಎಂದು ಗೊಣಗಿಕೊಳ್ಳುತ್ತಾ, ಶೂಟಿಂಗು ಮುಗಿದಿದ್ದೇ ತಡ ಮತ್ತೊಂದು ಊರಿಗೆ ಹೋಗುವ ತರಾತುರಿಯಲ್ಲಿ ಧಾವಂತ ಮಾಡಿಕೊಳ್ಳುತ್ತಿದ್ದೆವು.
ಪಯಣಿಸಿದ ಹಾದಿ, ಹೊರಟ ಜಾಗ, ತಲುಪಬೇಕಾದ ಊರು, ಅಲ್ಲಿನ ತಂಗಾಳಿ, ಸೊರಗಿದ ನದಿ, ಮುಂಜಾವದ ಮಂಜು, ಹಳೆಯ ಗುಡಿ, ಕತ್ತಲ ಸುರಂಗ, ನೀರು ಜಿನುಗಿಸುವ ಗುಹೆ- ಎಲ್ಲವನ್ನೂ ಕರ್ತವ್ಯ ನಿಷ್ಠರಂತೆ ನೋಡುತ್ತಿದ್ದೆವು.
ವಾಪಸ್ಸು ಬರುವ ದಾರಿಯಲ್ಲಿ ಕೌದಿ ಹೊದ್ದುಕೊಂಡು ಬೆಂಕಿ ಕಾಯಿಸಿಕೊಳ್ಳುತ್ತಾ ಕುಳಿತಿದ್ದ ಅರುವತ್ತು ದಾಟಿದಂತಿದ್ದ ಮುದುಕನೊಬ್ಬನ ಕಣ್ಣುಗಳು, ಬೆಂಕಿಬೆಳಕಿಗೆ ಪ್ರಜ್ವಲಿಸುತ್ತಿದ್ದವು. ಆ ಕಾಡಿನ ಮಧ್ಯೆ ಕೂತುಕೊಂಡು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತಿದ್ದೇನೆ ಎಂಬ ಕಲ್ಪನೆಯೇ ಇಲ್ಲದೇ ಕಾಲಾಂತರದಲ್ಲಿ ಲೀನನಾದ ಅವನಂತೆ ಬದುಕಬೇಕು ಎಂದು ಆಸೆಯಾಯಿತು.
ನಡುರಾತ್ರಿ ಸಾಗರದ ಹೊಟೆಲ್ಲಿಗೆ ಕಾಲಿಟ್ಟರೆ, ನಿದ್ದೆಗಣ್ಣಿನ ಹುಡುಗನೊಬ್ಬ ರಿಜಿಸ್ಟರ್ ಮುಂದಿಟ್ಟು ತುಂಬಿ’ ಅಂದ. ಅದರಲ್ಲಿ ಎಲ್ಲಿಂದ ಬರುತ್ತಿದ್ದೀರಿ, ಎಲ್ಲಿಗೆ ಹೋಗುತ್ತೀರಿ, ಎಷ್ಟು ದಿನ ಇರುತ್ತೀರಿ ಎಂಬ ಪ್ರಶ್ನೆಗಳಿದ್ದವು. ಆ ಅಪರಾತ್ರಿಯಲ್ಲಿ ಅವು ನನಗೆ ಬದುಕಿನ ಬಹುಮುಖ್ಯ ಪ್ರಶ್ನೆಗಳಾಗಿ ಕಾಣಿಸಿದವು.

Tuesday, February 2, 2010
ಎಂದೋ ಕೇಳಿದ ಒಂದು ಹಾಡಿನ ನೆನಪಲ್ಲಿ...
ನಂಗೆ ಟಿ ಕೆ ರಾಮರಾವ್ ಇಷ್ಟ, ಎನ್ ಟಿ ರಾಮರಾವ್ ಸಿನಿಮಾ ಇಷ್ಟ, ಜೋಸೈಮನ್ ಇಷ್ಟ, ಜಿಂದೆ ನಂಜುಂಡಸ್ವಾಮಿ ಎಂದರೆ ಪ್ರಾಣ, ಮುಸ್ಸಂಜೆಯ ಕಥಾಪ್ರಸಂಗ ಮತ್ತೆ ಮತ್ತೆ ಓದಬೇಕೆನ್ನಿಸುತ್ತೆ, ಪರಸಂಗದ ಗೆಂಡೆತಿಮ್ಮನ ಬೀದಿ ಕಣ್ಮುಂದೆ ಸುಳಿದರೆ ಸಂತೋಷವಾಗುತ್ತದೆ. ಭುಜಂಗಯ್ಯನ ದಶಾವತಾರಗಳು ಎಂಬ ಟೈಟಲ್ಲೂ ಮೆಚ್ಚುಗೆ. ನಮ್ಮೂರಿನಲ್ಲಿದ್ದ ಪುಟ್ಟ ಹೊಟೆಲಿನಲ್ಲಿ ಸಿಗುತ್ತಿದ್ದ ಕೇಟಿ ಮತ್ತು ಮೊಸರವಲಕ್ಕಿ ಇಷ್ಟ.
ಹಾಗಂತ ಇವತ್ತಿಗೂ ನಾನು ಅಂದುಕೊಂಡಿದ್ದೇನೆ. ಅದು ನಿಜಕ್ಕೂ ನನಗಿಷ್ಟ ಎಂದು ನಾನು ಮೊನ್ನೆ ಮೊನ್ನೆಯವರೆಗೂ ನಂಬಿದ್ದೆ. ಅದೇ ಹುಮ್ಮಸ್ಸಿನಲ್ಲಿ ಎನ್ ಟಿ ರಾಮರಾವ್ ಸಿನಿಮಾ ನೋಡಲು ಯತ್ನಿಸಿದೆ. ಐದು ನಿಮಿಷ ನೋಡುವಷ್ಟರಲ್ಲಿ ಯಾಕೋ ಹಿಂಸೆಯಾಗತೊಡಗಿತು. ಮತ್ತೊಂದು ದಿನ ಟಿ ಕೆ ರಾಮರಾವ್ ಕಾದಂಬರಿ ಓದಲು ಕುಳಿತೆ. ಮೂರು ಪುಟ ಮುಗಿಸುವ ಹೊತ್ತಿಗೆ ಸಾಕಾಗಿಹೋಯಿತು.ಜಿಂದೆ ನಂಜುಂಡಸ್ವಾಮಿ ಕಾದಂಬರಿಯನ್ನು ಕೈಗೆತ್ತಿಕೊಳ್ಳಲಾಗಲೇ ಇಲ್ಲ. ಭುಜಂಗಯ್ಯನ ದಶಾವತಾರಗಳು ಯಾಕೋ ಹಿಂದಿನ ಹುಮ್ಮಸ್ಸು ತುಂಬಲಿಲ್ಲ. ನಮ್ಮೂರಿನ ಪುಟ್ಟ ಶೆಣೈ ಹೋಟೆಲಿನ ಅವಲಕ್ಕಿ ಮೊಸರು ಸ್ವಾದ ಕಳಕೊಂಡಿದೆ ಅನ್ನಿಸತೊಡಗಿತು.
ಆಮೇಲೆ ಯೋಚಿಸಿದೆ; ನಿಜಕ್ಕೂ ಕೆಟ್ಟಿರುವುದು ನನ್ನ ಬಾಯಿರುಚಿಯೋ, ಶೆಣೈ ಹೊಟೆಲ್ಲಿನ ಮೊಸರವಲಕ್ಕಿಯ ರುಚಿಯೋ?
ಹಿಂದೆಂದೋ ಸುಳಿದಾಡಿದ, ಜೀವಿಸಿದ ಜಾಗಗಳಿಗೆ ಮತ್ತೆ ಮತ್ತೆ ಹೋಗಬೇಕು ಅನ್ನಿಸುವುದು ನಮ್ಮ ಮನಸ್ಸಿನ ಅದಮ್ಯ ಆಶೆಗಳಲ್ಲಿ ಒಂದು. ಸಾಹಿತ್ಯದಲ್ಲಿ ಅದನ್ನು ಪ್ರತ್ಯಭಿಜ್ಞಾನ ಅನ್ನುತ್ತಾರಾ? ನನಗೆ ಗೊತ್ತಿಲ್ಲ, ಪ್ರತ್ಯಬಿಜ್ಞಾನ ಅಂದರೆ ಗೊತ್ತಿದ್ದದ್ದನ್ನು ಮತ್ತೆ ತಿಳಿದುಕೊಳ್ಳುವುದು. ಹಾಗೆ ನಮಗೆ ಗೊತ್ತಿರುವುದು, ನಮಗೆ ಪ್ರಿಯವಾಗಿರುವುದು ಕ್ರಮೇಣ ನಮ್ಮ ಮನಸ್ಸಿನಲ್ಲಿ ಶಾಶ್ವತವಾದ ಸ್ಥಾನವೊಂದನ್ನು ಪಡೆದುಕೊಳ್ಳುತ್ತದೆ. ಆ ನಲ್ದಾಣದಲ್ಲಿ ಮತ್ತೆ ಮತ್ತೆ ಹೋಗಬೇಕು ಎಂದು ಮನಸ್ಸು ಆಶಿಸುತ್ತದೆ. ಹಾಗೆ ಹೋದಾಗ ಅಲ್ಲಿ ನಮಗೆ ಸಿಗುವ ಸ್ವಾಗತ, ಸಂತೋಷ ಮತ್ತು ಖುಷಿಯ ಹೇಗಿರುತ್ತದೆ. ನಾವು ನಿಜಕ್ಕೂ ಅದನ್ನೆಲ್ಲ ಸವಿಯುತ್ತೇವಾ?
ಬಹುಶಃ ಇಲ್ಲ. ನಮ್ಮ ಅನುಭವದ ಒಂದು ಭಾಗವಾಗಿರುವ ಸಂಗತಿಗಳೆಲ್ಲ ಕೇವಲ ಮನಸ್ಸಿನಲ್ಲಿದ್ದಾಗಷ್ಟೇ ಸಂತೋಷಕೊಡುತ್ತವೆ. ನಾವು ಬದಲಾಗಿರುತ್ತೇವೆ. ನಮ್ಮ ವಯಸ್ಸು ಮತ್ತು ಅನುಭವ ನಮ್ಮನ್ನು ಮಾಗಿಸಿ ಮತ್ತೆಲ್ಲೋ ತಂದು ನಿಲ್ಲಿಸಿರುತ್ತವೆ. ವರ್ತಮಾನದ ಗಳಿಗೆಗಳನ್ನು ನಮ್ಮ ನೋಟವನ್ನು ಬದಲಾಯಿಸಿರುತ್ತವೆ. ಈ ಕ್ಷಣವನ್ನು ನಿರಾಕರಿಸಲು ಹೊರಡುವ ನಾವು, ಹಿಂದೆ ಎಂದೋ ಸವಿದದ್ದು ಸೊಗಸಾಗಿತ್ತು ಎಂದುಕೊಳ್ಳುತ್ತಿರುತ್ತೇವೆ. ಅದನ್ನೆ ಮತ್ತೊಮ್ಮೆ ಸವಿಯುವುದಕ್ಕೆ ಮನಸ್ಸು ಹಾತೊರೆಯುತ್ತದೆ. ಆದರೆ ಆ ಹಾತೊರೆಯುವಿಕೆಗೆ ಸ್ಥಾನ ಇರುವುದು ಕೇವಲ ಮನಸ್ಸಿನಲ್ಲಿ ಮಾತ್ರ.
ಬದಲಾಗಿರುವುದು ಶೆಣೈ ಹೊಟೆಲ್ಲಿನ ಅವಲಕ್ಕಿಯ ರುಚಿಯಲ್ಲ. ನಮ್ಮ ನಾಲಗೆ ರುಚಿ. ರುಚಿಕೆಡಿಸಿಕೊಂಡು ಕೂತ ನಮಗೆ ಎಂದೋ ತಿಂದ ಅವಲಕ್ಕಿಯೇ ಸೊಗಸಾಗಿರಬಹುದು ಅನ್ನಿಸಿರುತ್ತದೆ. ಅದು ಕೂಡ ಕೇವಲ ಮನೋವ್ಯಾಪಾರ. ತುಂಬಾ ಕಾಡಿದ ಅವಳ ಕಣ್ಣೋಟ, ಮನಸ್ಸಲ್ಲಿ ನಾವು ಗುನುಗುವ ಹಳೆಯ ಹಾಡು, ನಾವು ಸುತ್ತಾಡಿದ ತಾಣ, ನಮ್ಮ ಹಳೆಯ ಸ್ಕೂಲುಗಳೆಲ್ಲ ಎಲ್ಲೀ ತನಕ ನಮ್ಮ ನೆನಪುಗಳಲ್ಲಿ ಮಾತ್ರ ಎದುರಾಗುತ್ತದೆಯೋ ಅಲ್ಲೀ ತನಕ ಸೊಗಸಾಗಿರುತ್ತದೆ. ಅದನ್ನು ನಾವು ಮತ್ತೆ ಕಂಡಾಗ ಅದು ಅಷ್ಟೊಂದು ಖುಷಿ ಕೊಡುವುದಿಲ್ಲ. ಅದು ಮನಸ್ಸಿಗಿರುವ ಶಕ್ತಿ, ಮಿತಿ ಮತ್ತು ನಮ್ಮ ಅತ್ಯಂತ ದೊಡ್ಡ ಯಾತನೆ.
ಅದನ್ನೇ ಮುಂದಿಟ್ಟುಕೊಂಡು ನಾನೇನನ್ನು ಮೆಚ್ಚುತ್ತೇನೆ ಎಂದು ನೋಡುತ್ತಾ ಕುಳಿತೆ. ಸದ್ಯಕ್ಕೆ ನಾನು ಮೆಚ್ಚುವ ಕತೆ
ಹೇಗಿರಬೇಕು, ನಾನು ಮೆಚ್ಚುವ ಹಾಡು ಯಾರದ್ದು, ಇವತ್ತಿಗೂ ಕೆ ಎಸ್ ನರಸಿಂಹಸ್ವಾಮಿಯ ಹಾಡನ್ನೇ ನಾನೇಕೆ ಮೆಚ್ಚುತ್ತಿದ್ದೇನೆ, ನನ್ನ ತರುಣ ಮಿತ್ರರಿಗೆ ಯಾಕೆ ಕೆ ಎಸ್‌ನರಸಿಂಹಸ್ವಾಮಿ ಇಷ್ಟವಾಗುವುದಿಲ್ಲ. ಇಷ್ಟವಾದರೂ ಯಾಕೆ ಕೆಎಸ್‌ನ ಅವರ ಸಹಜ ಆಯ್ಕೆಯಲ್ಲ. ರಾಜ್‌ಕುಮಾರ್ ನಟಿಸಿದ ’ಮಯೂರ’, ಶಂಕರ್ ಗುರು ಸಿನಿಮಾಗಳು ನನ್ನನ್ನು ಆವರಿಸಿದಷ್ಟು ಆಪ್ತವಾಗಿ ಅವರನ್ನೇಕೆ ಆವರಿಸಿಕೊಂಡಿಲ್ಲ ಎಂದೆಲ್ಲ ಯೋಚಿಸಿದೆ. ನಾನು ಅದ್ಬುತ ಎಂದು ವರ್ಣಿಸಿದ ಶಂಕರ್‌ಗುರು ಸಿನಿಮಾ ನೋಡುತ್ತಾ ನನ್ನ ಯುವ ಮಿತ್ರನೊಬ್ಬ ಆಕಳಿಸತೊಡಗಿದ.
ಆದರೆ, ಅವನಿಗೆ ಕುವೆಂಪು ಕಾದಂಬರಿ ಮಲೆಗಳಲ್ಲಿ ಮದುಮಗಳು’ ಮೆಚ್ಚುಗೆಯಾಯಿತು, ರಾಶೋಮನ್ ಸಿನಿಮಾ ಇಷ್ಟವಾಯಿತು. ಕ್ಲಾಸಿಕ್ ಮತ್ತು ಜನಪ್ರಿಯತೆಗೆ ಇರುವ ವ್ಯತ್ಯಾಸ ಇದೇ ಇರಬಹುದಾ ಎಂಬ ಗುಮಾನಿ ನನ್ನಲ್ಲಿ ಮೊಳೆಯಲು ಆರಂಭಿಸಿದ್ದೇ ಆಗ.
ಜನಪ್ರಿಯ ಸಂಗತಿಯೊಂದು ಆಯಾ ಕಾಲದಲ್ಲಿ, ಆಯಾ ದೇಶದಲ್ಲಿ ಎಲ್ಲರಿಗೂ ಮೆಚ್ಚುಗೆಯಾಗಿರುತ್ತದೆ. ಫ್ಯಾಷನ್ನಿನಂತೆ ಅದು ನಮ್ಮನ್ನು ಮುದಗೊಳಿಸಿರುತ್ತದೆ. ಆಗ ನಮ್ಮನ್ನು ಸಂತೋಷಗೊಳಿಸಿದ ಆ ಕೃತಿ ಕೊನೆಯವರೆಗೂ ನಮ್ಮ ಮನಸ್ಸಿನ ಅಂಗಳದಲ್ಲಿ ಹೂ ಬಿಟ್ಟ ಸುಂದರ ವೃಕ್ಷವಾಗಿಯೇ ಉಳಿದಿರುತ್ತದೆ. ಹತ್ತಾರು ವರ್ಷಗಳ ನಂತರವೂ ನಾವು ನಮ್ಮ ಮನಸ್ಸಿನಲ್ಲಿ ಹಿಂದಕ್ಕೆ ಹೋಗಿ ಆ ಮಾಧುರ್ಯವನ್ನು ಸವೆಯಬಲ್ಲವರಾಗಿರುತ್ತೇವೆ. ಆದರೆ, ನಮಗಿಂತ ಕಿರಿಯರಾದವರ ಪಾಲಿಗೆ ಅಂಥ ಮಾಧುರ್ಯವನ್ನು ನೀಡುವ ಸಂಗತಿ ಮತ್ತೇನೋ ಆಗಿರುತ್ತದೆ. ಪ್ರತಿಯೊಬ್ಬನೂ ತನ್ನ ಪರಿಸರ ಮತ್ತು ಸಂಭ್ರಮಕ್ಕೆ ಒಪ್ಪುವಂಥ ಒಂದು ಖುಷಿಯ ಸೆಲೆಯನ್ನು ಕಂಡುಕೊಂಡಿರುತ್ತಾನೆ.
ಇದು ನಮ್ಮ ವರ್ತಮಾನದ ಅಭಿರುಚಿಯನ್ನೂ ನಿರ್ಧಾರ ಮಾಡುತ್ತದೆ ಅಂದುಕೊಂಡಿದ್ದೇನೆ. ಹದಿನೆಂಟನೇ ವಯಸ್ಸಿಗೆ ಟಾಲ್‌ಸ್ಟಾಯ್ ಇಷ್ಟವಾಗುವುದಿಲ್ಲ, ಕಾನೂರು ಹೆಗ್ಗಡಿತಿ ಅಷ್ಟಾಗಿ ಪಥ್ಯವಾಗುವುದಿಲ್ಲ. ಕುಮಾರವ್ಯಾಸನನ್ನು ಓದಬೇಕು ಅನ್ನಿಸುವುದಿಲ್ಲ. ಆದರೆ, ಮತ್ತೊಂದು ಹಂತ ತಲುಪುತ್ತಿದ್ದಂತೆ ಎಲ್ಲವೂ ಬದಲಾಗಿರುತ್ತದೆ ಎಂದು ನಮಗೇ ಅನ್ನಿಸತೊಡಗುತ್ತದೆ.
ಸುಬ್ರಾಯ ಚೊಕ್ಕಾಡಿ ಬರೆದ ಎಂಥಾ ದಿನಗಳವು, ಮರೆಯಾಗಿ ಹೋದವು, ಮಿಂಚಂಥ ದಿನಗಳವು ಇನ್ನೆಂದೂ ಬಾರವು..ಎನ್ನುವ ಕವಿತೆಯನ್ನು ಓದಿದಾಗ ಅನ್ನಿಸುವುದು ಅದೇ ಆದರೆ, ಆ ಮಿಂಚಂಥಾ ದಿನಗಳ ಮಿಂಚು ನಮ್ಮ ತರುಣ ಮಿತ್ರರನ್ನೂ ಸ್ಪರ್ಶಿಸುತ್ತದೆಯಾ ಎನ್ನುವುದಷ್ಟೇ ಪ್ರಶ್ನೆ. ಅದು ಎಂದಿಗೂ ಅವರನ್ನು ಮುಟ್ಟಲಾರದು ಎಂಬ ಸತ್ಯದಲ್ಲೇ ಸಾತತ್ಯವಿದೆ, ಬೆಳವಣಿಗೆಯಿದೆ. ಹೊಸತನವಿದೆ ಮತ್ತು ಯೌವನವಿದೆ.
*******
ಈ ವಾರ ನಿಜಕ್ಕೂ ನಾನು ಬರೆಯಲು ಹೊರಟದ್ದು ಯೇಟ್ಸ್ ಕವಿತೆಗಳ ಕುರಿತು. ಯು ಆರ್ ಅನಂತಮೂರ್ತಿಯವರ ಉಜ್ವಲ ಅನುವಾದದಲ್ಲಿ ಅವು ಹೊಸ ಹೊಳಪು ಪಡಕೊಂಡಿವೆ. ಅದರ ಪೈಕಿ ವೃದ್ದಾಪ್ಯಕ್ಕೊಂದು ಪ್ರಾರ್ಥನೆ ಕವಿತೆ, ವೃದ್ದಾಪ್ಯದ ಕುರಿತು ಹೊಸ ಹೊಳಹೊಂದನ್ನು ನೀಡುವಂತಿದೆ. ನನ್ನನ್ನು ಪ್ರಬುದ್ದನಾದ ಚಿಂತನೆಗಳು ತುಂಬಿದ ಗಾಢವಾದ ವಿಚಾರಧಾರೆಗಳಿರುವ ಮುದುಕನನ್ನಾಗಿ ಮಾಡಬೇಡ. ಹುಂಬತನ ಮತ್ತು ವ್ಯಾಮೋಹ ಇನ್ನೂ ಹಾಗೇ ಉಳಿದಿರುವ ಮುದುಕನಾಗಿ ಉಳಿಸು ಎಂದು ಯೇಟ್ಸ್ ಕೇಳಿಕೊಳ್ಳುತ್ತಾನೆ.
ನನಗೆ ಅಂಥ ಮುದುಕರು ಇಷ್ಟ, ಅದೇ ಕಾರಣಕ್ಕೆ ಖುಷ್‌ವಂತ್ ಸಿಂಗ್ ಇಷ್ಟ. ಎಪ್ಪತ್ತು ದಾಟುತ್ತಿದ್ದರೂ ಉಲ್ಲಾಸದಿಂದ ಓಡಾಡುವ, ನಮ್ಮ ಓರಗೆಯವರೇ ಅನ್ನಿಸುವ, ಯಾವುದೋ ಜಗತ್ತಿನಲ್ಲಿದ್ದಾರೆ ಅನ್ನಿಸದ, ನಮ್ಮಂತೆಯೇ ಯೋಚಿಸುವ, ಅವರ ಕಾಲದ ಬಗ್ಗೆ ಮತಾಡಿ ಬೋರು ಹೊಡೆಸದ ತುಂಟ ವೃದ್ಧರ ಪಟ್ಟಿಯಲ್ಲಿ ಎ ಎಸ್ ಮೂರ್ತಿ, ಸುಬ್ರಾಯ ಚೊಕ್ಕಾಡಿ ಮುಂತಾದವರಿದ್ದಾರೆ. ಅನಂತಮೂರ್ತಿಯವರನ್ನು ನೋಡುತ್ತಿದ್ದರೆ, ಅವರಿಗೆ ಅಷ್ಟು ವಯಸ್ಸಾಗಿದೆ
ಎಂದು ಅನ್ನಿಸುವುದೇ ಇಲ್ಲ. ಕೆಲವರು ನಮ್ಮ ಕಣ್ಣಮುಂದೆ, ನಮ್ಮ ಕಲ್ಪನೆಯಲ್ಲಿ ಹರೆಯದವರಾಗಿಯೇ ಇರುತ್ತಾರೆ. ಬಿ ಆರ್ ಲಕ್ಷ್ಮಣರಾವ್ ಅವರಿಗೆ ಅರವತ್ತಮೂರು ವಯಸ್ಸು ಎಂದು ಯಾರಾದರೂ ಹೇಳಿದರೆ, ಅದನ್ನು ಒಪ್ಪಿಕೊಳ್ಳಲು ಮನಸ್ಸು ನಿರಾಕರಿಸುತ್ತದೆ. ನಮಗಿನ್ನೂ ಅವರು ಜಾಲಿಬಾರಿನಲ್ಲಿ ಕೂತ ಪೋಲಿ ಗೆಳೆಯರಲ್ಲೊಬ್ಬರಾಗಿಯೇ ಕಾಣಿಸುತ್ತಾರೆ. ಮಹಡಿಯಲ್ಲಿ ನಿಂತ ಸುಂದರಿಯ ಮಿಂಚುವ ಮೀನ ಖಂಡಗಳನ್ನು ನೋಡಿ ಚಕಿತವಾಗುವ ಕಣ್ಣುಗಳಷ್ಟೇ ನಮ್ಮ ಪ್ರಜ್ಞೆಯಲ್ಲಿ ದಾಖಲಾಗಿರುತ್ತದೆ.
ವಯಸ್ಸು ಮತ್ತು ಅನುಭವ ಹೀಗೆ ನಮ್ಮನ್ನು ಮಾಗಿಸುತ್ತಾ ಹೋದ ಹಾಗೇ, ನಮ್ಮ ಸ್ಮೃತಿಯಲ್ಲಿ ಯೌವನದ ಕಂಪು, ಹೊಳಪು, ಉಲ್ಲಾಸ, ತೀವ್ರತೆ ಮತ್ತು ಬಿರುಸನ್ನು ಹಾಗೇ ಉಳಿಸಿರುತ್ತದೆ. ಅದೇ ನಮ್ಮನ್ನು ಜೀವಂತವಾಗಿ ಇಡುವ ಶಕ್ತಿ ಎಂದು ನಾನು ನಂಬಿದ್ದೇನೆ.
ಇಲ್ಲದೇ ಹೋದರೆ, ನಾವು ಹುತ್ತಗಟ್ಟಿದ, ಹೊರದಾರಿಗಳಿಲ್ಲದ ಕೋಟೆಯಲ್ಲಿ ಬಂದಿಗಳಾಗಿ ಉಳಿದೇ ಬಿಡುತ್ತೇವೇನೋ ?
ಇದೂ ಒಂದು ಭ್ರಮೆಯೇ ಇರಬಹುದು. ಬದುಕನ್ನು ಪ್ರೀತಿಸುವ ರೀತಿ ಇರಬಹುದು. ಅಥವಾ ಬದುಕನ್ನು ನಾನು ತೀವ್ರವಾಗಿ ಪ್ರೀತಿಸುತ್ತಿದ್ದೇನೆ ಎಂದು ನಂಬಲು ನಾನು ಕಂಡುಕೊಂಡ ಒಂದು ಮಾರ್ಗವೂ ಇರಬಹುದು.

Sunday, January 17, 2010
ನಾನೂ ಅವನು ಮತ್ತು ಹೇಳದೇ ಉಳಿದ ಕತೆ
ಚಳಿಗಾಲ ಕೊನೆಯಾಗುತ್ತಾ ಬರುತ್ತಿರುವ ಒಂದು ಮುಸ್ಸಂಜೆಯಲ್ಲಿ ನಾನೂ ಅವನೂ ಕತೆ ಹೇಗೆ ಹುಟ್ಟುತ್ತದೆ ಎಂದು ಮಾತಾಡುತ್ತಾ ಕೂತೆವು. ವಿಧಾತ್ರಿಯ ನಿಟ್ಟುಸಿರಿಗೆ ಮೋಹನನ ಪ್ರೀತಿ ಆವಿಯಾಗಿ ಹೋಯಿತು’ ಎಂಬ ಒಂದೇ ಒಂದು ಸಾಲು ಬರೆದು ನಾನು ಸುಮ್ಮನೆ ಕೂತಿದ್ದೆ. ಮುಂದಿನ ಸಾಲುಗಳಿಗಾಗಿ ಮನಸ್ಸು ತಡಕಾಡುತ್ತಿತ್ತು.
ಇನ್ನು ಸ್ವಲ್ಪ ಹೊತ್ತಿಗೆಲ್ಲ ಕತ್ತಲಾಗುತ್ತದೆ. ಕತ್ತಲಲ್ಲಿ ಏನೂ ಹೊಳೆಯುವುದಿಲ್ಲ. ಅದಕ್ಕೂ ಮುಂಚೆ ಬರೆದು ಮುಗಿಸಿಬಿಡು ಅಂತ ಅವನು ಹೇಳಿದ. ಅವನೂ ಕೂಡ ಬರೆಯುವುದಕ್ಕೆ ಹೊಂಚು ಹಾಕುತ್ತಿದ್ದಾನೆ ಎಂದು ನನಗೆ ಅನ್ನಿಸುತ್ತಿತ್ತು. ನನಗೆ ಬರೆಯುವುದರಲ್ಲಿ ಆಸಕ್ತಿಯಿಲ್ಲ. ನೋಡುವುದು, ಓದುವುದು, ಅನುಭವಿಸುವುದು ಮಾತ್ರ ಖುಷಿ ಕೊಡುವ ಸಂಗತಿ. ಬರೆಯುವುದು ಹಿಂಸೆ’ ಅಂತ ಅವನು ಘೋಷಿಸಿಬಿಟ್ಟಿದ್ದ. ಅದಕ್ಕೋಸ್ಕರವೇ ಇರಬೇಕು, ಬೇಗ ಕತೆ ಬರೆದು ಮುಗಿಸು, ನಾನು ಓದಬೇಕು ಎಂದು ಒಂದೇ ಸಮ ಪೀಡಿಸುತ್ತಿದ್ದ.
ಅವನಿಗೆ ಯಾವ ಕತೆ ಇಷ್ಟವಾಗಬಹುದು ಎಂದು ನಾನು ಯೋಚಿಸುತ್ತಾ ಕೂತೆ. ಸುಂದರವಾದ ಒಂದು ಪ್ರೇಮಕತೆಯನ್ನು ಕಟ್ಟಿಕೊಡುವುದು ನನಗೇನೂ ಕಷ್ಟದ ಕೆಲಸ ಆಗಿರಲಿಲ್ಲ. ನಾನು ನೂರಾರು ಪ್ರೇಮಕತೆಗಳನ್ನು ಬರೆದಿದ್ದೆ, ನೂರಾರು ಪ್ರೇಮಪ್ರಸಂಗಗಳನ್ನು ನೋಡಿದ್ದೆ. ಅವನೂ ಅವಳೂ ಮಾತಾಡುತ್ತಾ ಕೂತಿದ್ದನ್ನು ನೋಡಿದರೆ ಸಾಕು, ನನ್ನೊಳಗೆ ಮುಂದಿನದೆಲ್ಲ ಸೃಷ್ಟಿಯಾಗುತ್ತಿತ್ತು. ಅವನು ನೇಕಾರರ ಹುಡುಗನಾಗುತ್ತಿದ್ದ, ಅವಳು ಲಿಂಗಾಯತರ ಹುಡುಗಿಯಾಗುತ್ತಿದ್ದಳು. ಇಬ್ಬರ ಮದುವೆಗೂ ಜಾತಿ ಅಡ್ಡಿ ಬರುತ್ತಿತ್ತು. ಕೊನೆಗೆ ನೇಕಾರರ ಹುಡುಗನ ಸಾವಿನಲ್ಲಿ ಆ ಪ್ರೇಮ ಕೊನೆಯಾಗುತ್ತಿತ್ತು. ಹೀಗೆ ತುಂಬ ವರ್ಷ ಬರೆದ ನಂತರ ನಾನು ಮತ್ತೊಂದು ಆಯಾಮದ ಬಗ್ಗೆ ಚಿಂತಿಸಿ ಎಲ್ಲರನ್ನೂ ಬೆಚ್ಚಿಬೀಳಿಸಿದ್ದೆ. ಈ ಬಾರಿ ಹುಡುಗಿಯೂ ಹುಡುಗನೂ ಒಂದೇ ಜಾತಿಗೆ ಸೇರಿದವರಾಗಿದ್ದರು. ಎಲ್ಲವೂ ಸರಿಹೋಗುತ್ತದೆ ಎನ್ನುವ ಹೊತ್ತಿಗೆ ಅವಳ ಕಣ್ಣಿಗೆ ಮತ್ತೊಬ್ಬ ಹುಡುಗ ಕಾಣಿಸಿಕೊಳ್ಳುತ್ತಿದ್ದ. ಅವಳ ಪ್ರೇಮ ಆ ಹೊಸ ಹುಡುಗನತ್ತ ಹರಿಯುತ್ತಿತ್ತು. ತಾನು ಪ್ರೀತಿಸಿದವನನ್ನು ಮದುವೆಯಾದರೂ ಹೊಸ ಹುಡುಗನತ್ತ ವಾಲುವ ಅವಳ ಮನಸ್ಸು, ಹಂಬಲ ಮತ್ತು ವಾಂಛೆಗಳನ್ನು ನಾನು ದಾಖಲಿಸಿದ್ದೆ. ಅದನ್ನು ನನಗೆ ಗೊತ್ತಿರುವ ಹುಡುಗರು ಅಸಹನೆಯಿಂದ ನಿರಾಕರಿಸಿದ್ದರು. ಹೆಣ್ಮಕ್ಕಳು ನಿಜವಾಗಿಸಲು ಯತ್ನಿಸಿದ್ದರು.
ಈ ಕತೆಗಳನ್ನೆಲ್ಲ ಅವನು ಓದಿದ್ದಾನೆ ಎಂಬ ಅರಿವು ನನಗೂ ಇತ್ತು. ನನ್ನೆದುರು ಕೂತ ಅವನಿಗೆ ಹೊಸ ಶೈಲಿಯ ಕತೆಗಳನ್ನು ನಾನು ಹೇಳಬೇಕಾಗಿತ್ತು. ಒಂದು ವೇಳೆ ಅಂಥ ಕತೆಗಳನ್ನು ಹೇಳದೇ ಹೋದರೆ ನನ್ನನ್ನು ಅವನು ನಿರಾಕರಿಸುತ್ತಾನೆ ಎಂಬ ಭಯವೂ ನನ್ನನ್ನು ಕಾಡುತ್ತಿತ್ತು. ಆ ಕಲ್ಪನೆಯೇ ನನ್ನನ್ನು ಸಾಕಷ್ಟು ಬಾರಿ ಕಂಗೆಡಿಸಿದೆ. ಓದುಗನ ಕಣ್ಣಲ್ಲಿ ಅಪ್ರಸ್ತುತನಾಗುವ ಬರಹಗಾರನ ಆಯಸ್ಸು ಮುಗಿದಂತೆಯೇ ಎಂದು ನಾನು ನಂಬಿದ್ದೆ.
ಸೂರ್ಯಕಿರಣಗಳೇ ಬೀಳದ ಧ್ರುವಪ್ರದೇಶದಲ್ಲಿ ಆಕಸ್ಮಿಕವಾಗಿ ಭೇಟಿಯಾದ ಇಬ್ಬರು ತರುಣರ ಕತೆ ಹೇಳುತ್ತೇನೆ ಎಂದೆ. ಅವನಿಗೆ ಅದು ಇಷ್ಟವಾಗಲಿಲ್ಲ. ನನ್ನ ಪರಿಸರಕ್ಕೂ ಆ ಕತೆಗಳಿಗೂ ಸಂಬಂಧವಿಲ್ಲ. ಯಾರದೋ ಕತೆ ಕಟ್ಟಿಕೊಂಡು ನಾನೇನು ಮಾಡಲಿ. ನನಗೆ ಹತ್ತಿರವೆನ್ನಿಸುವ ಕತೆಗಳನ್ನು ಕೊಡು’ ಎಂದು ಅವನು ಕಟ್ಟುನಿಟ್ಟಾಗಿ ಹೇಳಿದ. ಅವನ ದನಿಯಲ್ಲಿ ಎದ್ದು ಕಾಣುತ್ತಿದ್ದ ಒರಟುತನ, ನಿರ್ದಾಕ್ಷಿಣ್ಯ ಒಂದು ಕ್ಷಣ ನನ್ನನ್ನು ಸಿಟ್ಟಿಗೆಬ್ಬಿಸಿತು. ಸುಮ್ನೆ ಕೇಳಿಸ್ಕೋ, ನಾನು ಹೇಳಿದ್ದೇ ಕತೆ. ನಿನಗೆ ಬೇಕಾದ ಕತೆಗಳನ್ನು ಹೇಳುವುದಕ್ಕೆ ನಾನಿಲ್ಲ’ ಎಂದು ಬೈದು ಅವನನ್ನು ಓಡಿಸಿಬಿಡಬೇಕು ಅನ್ನಿಸಿತು. ಆದರೆ ಒಬ್ಬ ಓದುಗನನ್ನು ಕಳೆದುಕೊಳ್ಳುವುದು ಅಷ್ಟು ಖುಷಿಯ ಸಂಗತಿಯೇನೂ ಆಗಿರಲಿಲ್ಲ. ಮತ್ತೊಬ್ಬ ಹೊಸ ಓದುಗನನ್ನು ಹುಡುಕುವ ವ್ಯವಧಾನ ನನ್ನ ಕತೆಗಳಿಗಿವೆ ಎಂಬ ನಂಬಿಕೆಯೂ ನನಗಿರಲಿಲ್ಲ.
ಬೇಗ ಕತೆ ಹೇಳು, ಇಲ್ಲದೇ ಹೋದರೆ ನಾನು ಹೊರಟು ಹೋಗುತ್ತೇನೆ’ ಎಂಬಂತೆ ಅವನು ನನ್ನ ಮುಖ ನೋಡಿದ. ಮುಸ್ಸಂಜೆಯೊಳಗೆ ಇರುಳು ಬೆರೆಯುತ್ತಿತ್ತು. ಕತ್ತಲು ಬೆಳೆಯುತ್ತಿತ್ತು.ದೂರದಲ್ಲಿ ಯಾರೋ ಕೊಳಲೂದುತ್ತಿರುವ ಸದ್ದು ಕೇಳಿಸಿತು. ಅದರಾಚೆಗೆ ಹೆಸರು ಗೊತ್ತಿಲ್ಲದ ಬೆಟ್ಟ. ಆ ಬೆಟ್ಟದ ತಪ್ಪಲಲ್ಲಿ ಸೋಲಿಗರ ಹುಡುಗರು ರಾಗವಾಗಿ ಏನನ್ನೋ ಹಾಡುತ್ತಿದ್ದರು.
ನಾಗರಿಕತೆಯ ಕತೆ ಹೇಳಲಾ?’
ಅವನು ತಲೆಯಾಡಿಸಿದ. ಅಂಥ ಕತೆಗಳನ್ನು ನಾನೂ ತುಂಬ ಓದಿದ್ದೇನೆ. ಹಳೇ ಕಾಲದ ಕತೆಗಳವು. ಚರಿತ್ರೆ ನಿನಗೇನು ಗೊತ್ತಿದೆ? ಯಾರೋ ಬರೆದಿಟ್ಟ ಇತಿಹಾಸದ ವಿವರಗಳನ್ನು ಎತ್ತಿಕೊಂಡು ಅದನ್ನೊಂದಷ್ಟು ತಿರುಚಿ ಕತೆ ಹೇಳಲು ಆರಂಭಿಸುತ್ತಿ. ಅದು ಚರಿತ್ರೆಯೂ ಅಲ್ಲ, ಕಲ್ಪನೆಯೂ ಅಲ್ಲದ ಸ್ಥಿತಿಯಲ್ಲಿರುತ್ತೆ. ಅಂಥ ಹಾಳುಮೂಳು ಸಂಗತಿಗಳಲ್ಲಿ ನನಗೆ ಕಿಂಚಿತ್ತೂ ಆಸಕ್ತಿಯಿಲ್ಲ’ ಎಂದು ಅವನು ದೊಡ್ಡದಾಗಿ ಆಕಳಿಸಿದ.
ಅವನನ್ನು ಸಂತೋಷಪಡಿಸಲು ಇನ್ನೇನು ಹೇಳಬಹುದು ಎಂದು ಯೋಚಿಸಿದೆ. ಜನಾಂಗೀಯ ಕದನ, ಮೇಲು ಕೀಳಿನ, ಕಲ್ಯಾಣದ ಕ್ರಾಂತಿ, ಅರಮನೆಯಲ್ಲಿ ದಾಸಿಯರು ಲೈಂಗಿಕ ಶೋಷಣೆಗೆ ಒಳಗಾದದ್ದು, ಜಮೀನ್ದಾರರು ಬಡವರನ್ನು ಹುರಿದು ಮುಕ್ಕಿದ್ದು, ಪುರೋಹಿತರು ಮಂತ್ರಬಲದಿಂದ ಮುಕ್ಕೋಟಿ ಶೂದ್ರರನ್ನು ಮುಷ್ಟಿಯಲ್ಲಿಟ್ಟುಕೊಂಡದ್ದು, ಮದುವೆ ಮನೆಯಿಂದಲೇ ಪದ್ಮಿನಿಯನ್ನು ಪೃಥ್ವೀರಾಜ ಹಾರಿಸಿಕೊಂಡು ಹೋದದ್ದು, ತಾಳೀಕೋಟೆಯ ಯುದ್ಧದಲ್ಲಿ ವಿಜಯನಗರದ ಕೊನೆಯ ಅರಸ ಪ್ರಾಣಕಳಕೊಂಡದ್ದು.. ಹೀಗೆ ಕಣ್ಮುಂದೆ ಕತೆಗಳು ಸಾಲುಸಾಲಾಗಿ ಹರಿದುಹೋದವು. ಅವುಗಳಲ್ಲಿ ಅವನಿಗೆ ಆಸಕ್ತಿ ಇರಲಾರದು ಅನ್ನಿಸಿತು.
ಅವನ ನಿರೀಕ್ಷೆ ನನ್ನನ್ನು ಕಂಗೆಡಿಸುತ್ತಿತ್ತು. ನಾನು ಕುತೂಹಲ ಹುಟ್ಟಿಸುವ ಏನನ್ನೋ ಹೇಳಲಿದ್ದೇನೆ ಎಂಬಂತೆ ಅವನು ಕಾಯುತ್ತಾ ಕೂತಿದ್ದ. ಅವನ ನಿರೀಕ್ಷೆಗೆ ಸಮನಾದದ್ದನ್ನು ನಾನು ಹೇಳದೇ ಹೋದರೆ ಅವನು ಎದ್ದು ಹೋಗುತ್ತಾನೆ ಮತ್ತು ಎಂದಿಗೂ ಮರಳಿ ನನ್ನ ಬಳಿ ಬರುವುದಿಲ್ಲ ಎಂಬ ಆತಂಕದಲ್ಲಿ ನಾನು ಕೂತಿದ್ದೆ. ನನ್ನ ನೆನಪುಗಳನ್ನು ಬಗೆಯುತ್ತಿದ್ದೆ. ಅವನನ್ನು ಹಿಡಿದಿಡಬಹುದಾದ ಕತೆಯೊಂದನ್ನು ಹುಡುಕುತ್ತಿದ್ದೆ.
ದೇವರ ಕತೆಗಳನ್ನು ಹೇಳುತ್ತೇನೆ ಎಂದು ಅವನ ಮುಖ ನೋಡಿದೆ. ಸಾಕಾಗಿ ಹೋಗಿದೆ. ದೇವರ ಕತೆಗಳೂ ಗೊತ್ತು, ವ್ಯಥೆಗಳೂ ಗೊತ್ತು. ನೂರಾರು ವರ್ಷಗಳಿಂದ ಅದನ್ನೇ ಕೇಳಿಕೊಂಡು ಬಂದಿದ್ದೇನೆ. ದೇವರು, ದೆವ್ವ, ಭೂತ, ಪ್ರೇತ, ಪಿಶಾಚಿಗಳೆಲ್ಲವೂ ಬೋರು ಹೊಡೆಸುತ್ತವೆ. ನಿನಗೆ ಗೊತ್ತಿಲ್ಲದ್ದರ ಬಗ್ಗೆ ಹೇಳಬೇಡ’ ಎಂದು ಅಸಹನೆಯಿಂದ ಹೇಳತೊಡಗಿದ. ನನಗೂ ಸಿಟ್ಟು ಬಂತು.
ಗೊತ್ತಿಲ್ಲದ್ದರ ಬಗ್ಗೆ ಹೇಳಿದರೇ ಅದು ಕತೆ. ಗೊತ್ತಿದ್ದದ್ದನ್ನು ಹೇಳಿದರೆ ಅದು ವರದಿ. ವರದಿ ಒಪ್ಪಿಸುವುದರಲ್ಲಿ ನನಗೆ ಆಸಕ್ತಿಯಿಲ್ಲ’ ಎಂದು ನಾನೂ ಗೊಣಗಿದೆ. ಇಂಥ ಸುಳ್ಳುಗಳನ್ನು ಹೇಳಿಕೊಂಡು ಬಹಳ ಕಾಲದಿಂದ ಬಚಾವಾಗುತ್ತಿದ್ದೀರಿ. ಕತೆ ಹೇಳುವುದಕ್ಕೆ ಧ್ಯಾನಸ್ಥ ಸ್ಥಿತಿ ಬೇಕು, ಕತೆ ಒಳಗೆ ಹರಳುಗಟ್ಟಬೇಕು. ಒಂದು ಅನುಭವ ಕತೆಯ ರೂಪ ತಾಳುವುದಕ್ಕೆ ಕಾದು ಕೂರಬೇಕು. ಅದು ಸುಲಭದಲ್ಲಿ ಸಿದ್ಧಿಸುವ ಸ್ಥಿತಿಯಲ್ಲ’ ಎಂದು ಏನೇನೋ ಸುಳ್ಳುಗಳನ್ನು ಹೇಳುತ್ತಿದ್ದೀರಿ. ಎಲ್ಲವೂ ಬರೀ ಬೊಗಳೆ. ನಿಮಗೆ ಕತೆ ಹೇಳುವುದಕ್ಕೆ ಬರೋದಿಲ್ಲ, ಅಷ್ಟೇ ಸತ್ಯ’ ಎಂದು ಎಲ್ಲರ ಮೇಲೂ ಸಿಟ್ಟು ಕಾರಿಕೊಂಡ. ನಾನು ಅದನ್ನು ನಿರಾಕರಿಸುವ ಹಾಗಿರಲಿಲ್ಲ.
ಕತ್ತಲು ಮತ್ತಷ್ಟು ದಟ್ಟವಾಯಿತು. ಅವನು ಮತ್ತೊಮ್ಮೆ ಆಕಳಿಸಿದ. ಇನ್ನೇನು ಸ್ವಲ್ಪ ಹೊತ್ತಿಗೆಲ್ಲ ಅವನು ನಿದ್ದೆ ಹೋಗುತ್ತಾನೆ. ನನಗೂ ನಿದ್ದೆ ಬರುತ್ತದೆ. ನಾನು ಏಳುವ ಹೊತ್ತಿಗೆ ಅವನು ಎದ್ದು ಹೊರಟು ಹೋಗಿರುತ್ತಾನೆ. ಅವನು ಕಣ್ಮುಚ್ಚುವ ಮುಂಚೆ ಕತೆ ಹೇಳಬೇಕು. ಕತೆ ಹೇಳಿ ಅವನನ್ನು ಉಳಿಸಿಕೊಳ್ಳಬೇಕು ಎಂದು ನಾನು ಯೋಚಿಸುತ್ತಿದ್ದೆ.
ಯಾಕೋ ಅವನ ನಿರೀಕ್ಷೆ ಅತಿಯಾಯಿತು ಅನ್ನಿಸತೊಡಗಿತು. ನಾನೇಕೆ ಇಷ್ಟೊಂದು ಕಷ್ಟಪಟ್ಟುಕೊಂಡು ಅವನಿಗೆ ಕತೆ ಹೇಳಬೇಕು. ಅವನಿಗೆ ಕತೆ ಹೇಳುತ್ತೇನೆ ಅಂತೇನೂ ನಾನು ಮಾತು ಕೊಟ್ಟಿಲ್ಲವಲ್ಲ. ಅಷ್ಟಕ್ಕೂ ಕತೆ ಬೇಕಾಗಿರುವುದು ಅವನಿಗೆ. ಕತೆ ಹೇಳದೇ ನಾನು ಬದುಕಿರಬಲ್ಲೆ, ಕತೆ ಕೇಳದೇ ಅವನು ಬದುಕಿರೋದಕ್ಕೆ ಸಾಧ್ಯವಾ? ಯಾರಿಗೆ ಅದು ಜೀವನ್ಮರಣದ ಪ್ರಶ್ನೆ. ಯಾರ ತುರ್ತು ದೊಡ್ಡದು. ನನ್ನದೋ ಅವನದೋ?
ಹಾಗೆಲ್ಲ ಯೋಚಿಸುತ್ತಾ ಸಿಟ್ಟು ಉಕ್ಕತೊಡಗಿತು. ನಾನು ಇದೇ ಕತೆಯನ್ನು ಹೇಳೋದು. ಹೀಗೇ ಹೇಳೋದು. ಬೇಕಿದ್ದರೆ ಕೇಳಿಸಿಕೋ ಇಲ್ಲದೇ ಹೋದರೆ ಎದ್ದು ಹೋಗು ಎಂದು ಹೇಳಬೇಕು ಅನ್ನಿಸಿತು. ಅಷ್ಟೊಂದು ಸಿಟ್ಟು ಒಳ್ಳೆಯದಲ್ಲ ಎಂದು ವಿವೇಕ ಹೇಳಿತು. ಕತೆ ಹೇಳುವವನಿಗೆ ವಿವೇಕ ಇರಬೇಕಾ ಎಂದು ಮತ್ತೊಮ್ಮೆ ಅನ್ನಿಸಿತು. ವಿವೇಕವಂತ ಲೋಕಕ್ಕೆ ಇಷ್ಟವಾಗುವ ಸಂಗತಿಗಳನ್ನು ಹೇಳುತ್ತಾನೆ. ಜ್ಞಾನಿ ಪರಲೋಕ ಆಪ್ತವಾಗುವಂಥ ಸಂಗತಿಗಳನ್ನು ಹೇಳುತ್ತಾನೆ. ಅವರೆಲ್ಲರೂ ಸ್ವೀಕರಿಸಿದ ನಂತರ ಕೊಡಲು ಹೊರಟವರು. ಆದರೆ ನಾನು ಹಾಗಲ್ಲ, ನಾನು ಕತೆ ಹೇಳುವವನು. ಅಲ್ಲಿ ವಿವೇಕಕ್ಕಿಂತ ಕಲ್ಪನೆ ಹೆಚ್ಚಿಗಿರಬೇಕು. ಈ ಲೋಕದ, ಆ ಲೋಕದ ಕತೆಗಳನ್ನು ಹೇಳುವುದು ನನ್ನ ಕೆಲಸ ಅಲ್ಲ. ನಾನು ಮತ್ತೊಂದು ಲೋಕವನ್ನು ಸೃಷ್ಟಿಸಬೇಕು. ಆ ಲೋಕದಲ್ಲಿ ನಾನೂ ಅವನೂ ಇಬ್ಬರೇ ಇರಬೇಕು. ಉಳಿದವರೆಲ್ಲ ಹೊಸಬರಾಗಿ ಕಾಣಿಸಬೇಕು. ಅವನು ಕಂಡು ಮಾತಾಡಿದ ಜನರೂ ಅವನಿಗೆ ಅಪರಿಚಿತವಾಗಿ ಕಾಣಬೇಕು.
ಉತ್ತರ ದಿಕ್ಕಿನಿಂದ ಮಂಜುಗಡ್ಡೆಯ ಮೇಲೆ ಹಾದು ಬಂದ ಗಾಳಿ ನಮ್ಮಿಬ್ಬರನ್ನೂ ಸವರಿಕೊಂಡು ಹೋಯಿತು. ನಾನು ತತ್ತರಿಸಿಹೋದೆ. ಅವನು ಏನೂ ಆಗಿಲ್ಲವೆಂಬಂತೆ ಕೂತಿದ್ದ. ಅವನ ಇಡೀ ಭಂಗಿ ಒಂದೊಳ್ಳೇ ಕತೆ ಹೇಳು’ ಎಂದು ಬೇಡಿಕೊಳ್ಳುವಂತಿತ್ತು. ಅದು ಕೇವಲ ಬೇಡಿಕೆಯಲ್ಲ, ಆದೇಶ, ಆಜ್ಞೆ, ಕಟ್ಟಪ್ಪಣೆ ಎಂಬಂತೆ ನನಗೆ ಭಾಸವಾಯಿತು.
ನನ್ನ ದರ್ಪ, ಕತೆ ಹೇಳಬಲ್ಲೆ ಎಂಬ ಅಹಂಕಾರ, ಅವನನ್ನು ಮೆಚ್ಚಿಸುವುದು ಸುಲಭ ಎಂಬ ಉಡಾಫೆ ಎಲ್ಲವೂ ಆ ಕ್ಷಣ ಕರಗಿಹೋಯಿತು. ಅವನನ್ನು ಕತೆ ಹೇಳಿ ಮೆಚ್ಚಿಸಬೇಕು ಎಂಬ ಆಸೆ ಕೂಡ ಭಗ್ನವಾಯಿತು. ನೀನ್ಯಾರೋ ನನಗೆ ಗೊತ್ತಿಲ್ಲ ಎಂಬಂತೆ ನಾನೂ ಸ್ವಲ್ಪ ಹೊತ್ತು ಕೂತಿದ್ದೆ. ಆಕಾಶದಲ್ಲಿ ಚಂದ್ರನಿರಲಿಲ್ಲ. ನಕ್ಷತ್ರಗಳ ಬೆಳಕಲ್ಲಿ ಆಕಾಶ ಝಗಮಗಿಸುತ್ತಿತ್ತು.
ನನ್ನ ಮುಂದೆ ಅವನಿದ್ದಾನೆ ಅನ್ನುವುದನ್ನೆ ಮರೆತು ನಾನು ಕತೆ ಹೇಳಲು ಆರಂಭಿಸಿದೆ. ಅದು ನನ್ನ ಕತೆ ಅನ್ನುವ ಅರಿವೂ ನನಗಿರಲಿಲ್ಲ. ನನ್ನ ಅವಮಾನದ ಕ್ಷಣಗಳು, ಸಂಭ್ರಮದ ಗಳಿಗೆಗಳು, ಪ್ರೇಮಿದ ಪಿಸುಮಾತುಗಳು, ವಿರಹದ ತಲ್ಲಣಗಳು, ನೋಯಿಸಿದ ಘಟನೆಗಳು, ವಂಚನೆಯ ಪ್ರಕರಣಗಳು, ಸುಳ್ಳಿನ ಕಂತೆಗಳು ಒಂದೊಂದಾಗಿ ಅನಾವರಣಗೊಳ್ಳುತ್ತಾ ಬಂದವು. ನಾನು ನಾನಾಗಿಬಿಟ್ಟಿದ್ದೆ ಹಾಗೂ ಅದನ್ನು ಮರೆತೂ ಬಿಟ್ಟಿದ್ದೆ.
ತನ್ಮಯನಾಗಿ ಕತೆ ಹೇಳುತ್ತಾ ಕುಳಿತವನು, ಅಚಾನಕ್ ಮುಂದೆ ಕಣ್ಣು ಹಾಯಿಸಿದರೆ ಅವನು ತನ್ನ ಇಡೀ ಬಳಗವನ್ನೇ ಕರೆದುಕೊಂಡು ಬಂದಿದ್ದ. ಅವನನ್ನೇ ಹೋಲುವ ಸಾವಿರ ಸಾವಿರ ಮಂದಿ ಕಣ್ಣುಹಾಯಿಸಿದಷ್ಟು ಉದ್ದಕ್ಕೂ ಕೂತು ಕತೆ ಕೇಳಿಸಿಕೊಳ್ಳುತ್ತಿದ್ದರು.
ನಾನು ಭಯವಾಗಿ ಕಣ್ಮುಚ್ಚಿಕೊಂಡೆ. ಕತೆ ಮುಂದುವರಿಸಿದೆ.

Saturday, January 16, 2010
ಚಂದ್ರ
ನೋಡ
ನೋಡುತ್ತಿದ್ದಂತೆ ಇರುಳಾಗಿದೆ.
ಚಂದ್ರ ಸಪ್ಪೆಮೋರೆ
ಹಾಕಿಕೊಂಡು ಕಾಣಿಸಿಕೊಂಡ.
ಅವನ ಸುಳಿವೇ ಇಲ್ಲ.
ಸೌಗಂಧಿಕಾದ ಪರಿಮಳ
ತಣ್ಣನೆಯ ಗಾಳಿ, ಪಟಪಟಿಸುವ ರೆಕ್ಕೆ,
ಮಿಟುಕಿಸದೇ ದಿಟ್ಟಿಸುವ ಕಣ್ಣು
ಅವನು ಬರದ ಹಾದಿ.
ಬೆಳದಿಂಗಳೂ ಕಂಬನಿಯನ್ನು
ಒಣಗಿಸುತ್ತದೆ ಎಂದು
ದೇವರಾಣೆಗೂ ಗೊತ್ತಿರಲಿಲ್ಲ.
ನೋಡುತ್ತಿದ್ದಂತೆ ಇರುಳಾಗಿದೆ.
ಚಂದ್ರ ಸಪ್ಪೆಮೋರೆ
ಹಾಕಿಕೊಂಡು ಕಾಣಿಸಿಕೊಂಡ.
ಅವನ ಸುಳಿವೇ ಇಲ್ಲ.
ಸೌಗಂಧಿಕಾದ ಪರಿಮಳ
ತಣ್ಣನೆಯ ಗಾಳಿ, ಪಟಪಟಿಸುವ ರೆಕ್ಕೆ,
ಮಿಟುಕಿಸದೇ ದಿಟ್ಟಿಸುವ ಕಣ್ಣು
ಅವನು ಬರದ ಹಾದಿ.
ಬೆಳದಿಂಗಳೂ ಕಂಬನಿಯನ್ನು
ಒಣಗಿಸುತ್ತದೆ ಎಂದು
ದೇವರಾಣೆಗೂ ಗೊತ್ತಿರಲಿಲ್ಲ.
Sunday, January 10, 2010
ಅಹಂಕಾರ ಮಮಕಾರದ ನಡುವೆ ವಿಷ್ಣು ಏಕಾಂಗಿ
ನಮ್ಮಪ್ಪ ರಾಜ್‌ಕುಮಾರ್ ವಿರೋಧಿಯಾಗಿದ್ದವರು. ಸುಮಾರು ವರ್ಷ ಮದ್ರಾಸಿನಲ್ಲಿದ್ದ ಕಾರಣಕ್ಕೋ ಏನೋ ಅಪ್ಪಟ ಎಂಜಿಆರ್ ಅಭಿಮಾನಿ ಬೇರೆ. ನಮ್ಮೂರಿನಲ್ಲಿ ಎಂಜಿಆರ್ ಸಿನಿಮಾಗಳು ಬಿಡುಗಡೆ ಆಗುತ್ತಿರಲಿಲ್ಲ. ಮಂಗಳೂರಿಗೆ ಹೋಗಿಯಾದರೂ ಅಪ್ಪ ಎಂಜಿಆರ್ ಸಿನಿಮಾ ನೋಡಿ ಬರಬೇಕು. ನಮಗೋ ತಮಿಳು ಅರ್ಥವೇ ಆಗುತ್ತಿರಲಿಲ್ಲ. ಅಪ್ಪ ಮಾತ್ರ ನಾಡೋಡಿ ಮನ್ನನ್, ಎಂಗ ವೀಟ್ಟು ಪಿಳ್ಳೈ, ಅಡಿಮೈ ಪೆಣ್ ಎಂದು ಯಾವ್ಯಾವುದೋ ಸಿನಿಮಾದ ಹೆಸರು ಹೇಳುತ್ತಿದ್ದರು. ಅಡಿಮೈ ಪೆಣ್ ಮಾತ್ರ ಆಗ ನನಗೆ ಯಾವುದೋ ಅಶ್ಲೀಲ ಚಿತ್ರದ ಟೈಟಲ್ಲು ಅನ್ನಿಸಿಬಿಟ್ಟಿತ್ತು. ಆ ಟೈಟಲ್ಲನ್ನು ನಾನು ಕನ್ನಡದಲ್ಲಿ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದೂ ಅದು ಅಶ್ಲೀಲ ಅನ್ನಿಸುವುದಕ್ಕೆ ಕಾರಣವಿರಬಹುದು. ಹೀಗೆ ಎಂಜಿಆರ್ ಸಿನಿಮಾಗಳನ್ನು ನೋಡುತ್ತಿದ್ದ ಕಾರಣಕ್ಕೇ ಅವರಿಗೆ ರಾಜ್‌ಕುಮಾರ್ ಹೆಸರು ಕೇಳಿದರೆ ಕೆಂಡಕೋಪ. ಹೀಗಾಗಿ ನಮ್ಮನ್ನು ಅವರು ವಿಷ್ಣುವರ್ಧನ್ ಮತ್ತು ಶ್ರೀನಾಥ್ ಸಿನಿಮಾಗಳಿಗೆ ಮಾತ್ರ ಕರೆದೊಯ್ಯುತ್ತಿದ್ದರು. ಹೀಗಾಗಿ ನಾವು ಗೆಳೆಯರ ಜೊತೆ ಸಿನಿಮಾ ನೋಡುವುದಕ್ಕೆ ಶುರು ಮಾಡುವ ತನಕ ರಾಜ್‌ಕುಮಾರ್ ಸಿನಿಮಾಗಳನ್ನೂ ನೋಡಿರಲಿಲ್ಲ.
ಹೀಗಾಗಿ ಬಾಲ್ಯದಿಂದಲೇ ನಮಗೆ ವಿಷ್ಣುವರ್ಧನ್ ಅಂದರೆ ಅಚ್ಚುಮೆಚ್ಚು. ಬಂಧನ ಸಿನಿಮಾ ಬಿಡುಗಡೆಯಾಗುವ ಮೊದಲೇ ನನ್ನ ಗೆಳೆಯ ಸುಬ್ರಾಯ ನೂರೊಂದು ನೆನಪು, ಎದೆಯಾಳದಿಂದ’ ಚಿತ್ರದ ಹಾಡನ್ನು ಎಲ್ಲೋ ಕೇಳಿಕೊಂಡು ಬಂದು ಅದನ್ನು ಪರಮ ವಿಷಾದದಲ್ಲಿ ಹಾಡುತ್ತಿದ್ದ. ಆ ಸಿನಿಮಾ ಗೆಲ್ಲೋದಿಲ್ಲ ಎಂದೂ ವಿಷ್ಣುವರ್ಧನ್ ಕೊನೆಯಲ್ಲಿ ಸಾಯುವ ದೃಶ್ಯವಿದೆಯೆಂದೂ ಹೇಳುತ್ತಿದ್ದ. ನಾವೆಲ್ಲ ಸೇರಿ ಆ ಚಿತ್ರದ ನಿರ್ದೇಶಕರಿಗೆ ಪತ್ರ ಬರೆದು ವಿಷ್ಣುವರ್ಧನ್ ಸಾಯಕೂಡದು ಎಂದು ಹೇಳಬೇಕು ಎಂದೂ ನಿರ್ಧಾರ ಮಾಡಿದ್ದೆವು. ನಮ್ಮ ಅಸಂಖ್ಯಾತ ನಿರ್ಧಾರಗಳಂತೆ ಅದೂ ಕಾರ್ಯರೂಪಕ್ಕೆ ಬರಲಿಲ್ಲ. ಬಂಧನ’ ಗೆಲುವು ಕಂಡಿತು.
ಅದಕ್ಕೂ ಆರೇಳು ವರ್ಷ ಮುಂಚೆ ನಾವು ಉಪ್ಪಿನಂಗಡಿಯಲ್ಲೊಂದು ವಿಷ್ಣು ಅಭಿಮಾನಿ ಸಂಘ ಆರಂಭಿಸಿದ್ದೆವು. ಆ ಸಂಘದಲ್ಲಿದ್ದ ಸದಸ್ಯರು ಏಳು ಮಂದಿ ಎಂದು ನನಗೆ ನೆನಪು. ಅವರ ಪೈಕಿ ಸುಬ್ರಾಯ ಸಂಘದ ಅಧ್ಯಕ್ಷ. ಆಗ ಕೈಲಿ ದುಡ್ಡಿದ್ದದ್ದು ಅವನ ಬಳಿಯೇ. ಬರೆಯಲು ಗೊತ್ತಿದ್ದ ನಾನು ಕಾರ್ಯದರ್ಶಿ. ಉಳಿದವರು ಸಾಮಾನ್ಯ ಸದಸ್ಯರು. ನಾವೆಲ್ಲರೂ ದಕ್ಷಿಣ ಕನ್ನಡದಲ್ಲಿ ಎಲ್ಲೇ ವಿಷ್ಣುವರ್ಧನ್ ಸಿನಿಮಾ ಬಿಡುಗಡೆಯಾದರೂ ತಪ್ಪದೇ ಹೋಗಿ ನೋಡುತ್ತಿದ್ದೆವು. ಒಂದೇ ಗುರಿ’ ಸಿನಿಮಾ ಬಿಡುಗಡೆ ಆದಾಗ ನಾವೆಲ್ಲ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಯಾಂಪಿನಲ್ಲಿದ್ದೆವು. ನಮ್ಮ ಮೇಷ್ಟ್ರು ನಮ್ಮನ್ನು ಕ್ಯಾಂಪಿನಿಂದ ಹೊರಗೆ ಹೋಗುವುದಕ್ಕೆ ಬಿಡುತ್ತಿರಲಿಲ್ಲ. ರಾತ್ರಿ ಹತ್ತು ಗಂಟೆಗೆ ತಾವೇ ಸ್ವತಃ ಪ್ರತಿಯೊಂದು ರೂಮಿಗೂ ಬಂದು ಹಾಜರಾತಿ ತೆಗೆದುಕೊಳ್ಳುತ್ತಿದ್ದರು. ಆ ರಾತ್ರಿ ಒಂಬತ್ತು ಗಂಟೆಗೆ ಅವರ ರೂಮಿಗೆ ಹೊರಗಿನಿಂದ ಬೀಗ ಜಡಿದು, ನಾವೊಂದಷ್ಟು ಮಂದಿ ಸಿನಿಮಾ ನೋಡೋದಕ್ಕೆ ಹೊರಟು ಹೋಗಿದ್ದೆವು. ನಡು ರಾತ್ರಿ ನಾವು ಮರಳುವ ಹೊತ್ತಿಗೆ ಆ ವಿಚಾರ ಎಲ್ಲರಿಗೂ ಗೊತ್ತಾಗಿತ್ತು. ನಮಗೆ ಸರಿಯಾಗಿ ಪೂಜೆ ಆಗುತ್ತದೆ ಎಂದುಕೊಂಡು ಉಳಿದ ಹುಡುಗರೆಲ್ಲ ಖುಷಿಯಾಗಿದ್ದರು. ನಾವು ಸಿನಿಮಾ ನೋಡಿದ ಹುಮ್ಮಸ್ಸಿನಲ್ಲಿ ಏನು ಮಾಡುತ್ತಾರೆ ಮಹಾ, ನಾಲ್ಕೇಟು ಹೊಡೀತಾರೆ ಅಷ್ಟೇ ತಾನೇ. ಹೆಚ್ಚೆಂದರೆ ಮನೆಗೆ ಕಳಿಸಬಹುದು’ ಎಂದೆಲ್ಲ ಮಾತಾಡಿಕೊಳ್ಳುತ್ತಾ ಕೂತಿದ್ದೆವು. ಅಷ್ಟು ಹೊತ್ತಿಗೆ ಮೇಷ್ಟ್ರು ನಮ್ಮನ್ನು ಅವರ ರೂಮಿಗೆ ಕರೆಸಿಕೊಂಡರು.
ಇನ್ನೇನು ಬೈಗಳು ಶುರು ಅಂದುಕೊಳ್ಳುತ್ತಿರುವಾಗ ಅವರು ನಮ್ಮನ್ನೆಲ್ಲ ಕೂರಿಸಿ ಹೇಗಿತ್ತು ಸಿನಿಮಾ, ಕತೆ ಏನು?’ ಎಂದು ಸಹಜವಾಗಿ ಕೇಳಿ, ಇಡೀ ಸಿನಿಮಾದ ಕತೆ ಕೇಳಿ ತಿಳಿದುಕೊಂಡು ಎಂಪಿ ಶಂಕರ್ ಕೂಡ ನಟಿಸಿದ್ದಾರೆ ಎಂದು ಖುಷಿಯಾಗಿ ರಾಮಕೃಷ್ಣ ಮತ್ತು ವಿಷ್ಣು ಹಾಡುವ ಈ ಭಾವಗೀತೆ ನಿನಗಾಗಿ ಹಾಡಿದೆ’ ಹಾಡಿನಿಂದ ಪುಳಕಿತರಾಗಿ ಇನ್ನೂ ಎಷ್ಟು ದಿನ ಓಡಬಹುದು ಎಂದು ತಿಳಿದುಕೊಂಡು, ನಂತರ ನಮ್ಮನ್ನು ಬೈದಂತೆ ನಟಿಸಿದ್ದರು.
******
ಬಿಗುಮಾನ, ಸಿಟ್ಟು, ಸಹನೆ, ನಗು, ನಿರ್ಲಕ್ಷ್ಯ, ವೈರಾಗ್ಯ, ಹಂಬಲ, ಕೀಳರಿಮೆ, ಆತಂಕ, ಭಯ, ಅಭಯ, ಹುಡುಕಾಟ- ಇಷ್ಟೂ ವಿಭಿನ್ನ ಭಾವಗಳನ್ನು ಬೆನ್ನಿಗೆ ಕಟ್ಟಿಕೊಂಡು ಗೊತ್ತಿಲ್ಲದ ಹಾದಿಯಲ್ಲಿ ಗೊತ್ತಿಲ್ಲದ ಊರಿಗೆ ಪ್ರಯಾಣ ಹೊರಟ ಅಪರಿಚಿತನಂತೆ ಕಾಣುತ್ತಿದ್ದ ವಿಷ್ಣುವರ್ಧನ್, ಬಹುಶಃ ಯಾರಿಗೂ ಇಡಿಯಾಗಿ ದಕ್ಕಲೇ ಇಲ್ಲ. ತುಂಬ ನಗಿಸುತ್ತಿದ್ದರು ಎಂದು ಅಂಬರೀಷ್, ಒಂಟಿಯಾಗಿರುತ್ತಿದ್ದರು ಎಂದು ಕೀರ್ತಿ, ಸಿಟ್ಟಿನಲ್ಲಿರುತ್ತಿದ್ದರು ಎಂದು ನಿರ್ದೇಶಕರು, ಯಾರಿಗೂ ಯಾವತ್ತೂ ಬೈದಿಲ್ಲ ಎಂದು ಡ್ರೈವರ್ ರಾಧಾಕೃಷ್ಣ, ಏನನ್ನೂ ಬಯಸುತ್ತಿರಲಿಲ್ಲ ಎಂದು ಅಡುಗೆಯ ಶ್ರೀಧರ್, ಎಂಬತ್ತೊಂದು ಲಕ್ಷಕ್ಕಿಂತ ಒಂದು ಪೈಸೆ ಕಡಿಮೆ ಆದ್ರೂ ಒಪ್ಪೋಲ್ಲ ಅಂತಿದ್ರು ಎಂದು ನಿರ್ಮಾಪಕ ಅವರನ್ನು ಬಗೆಬಗೆಯಾಗಿ ವರ್ಣಿಸುತ್ತಿದ್ದರು. ಪತ್ರಕರ್ತರು ಮೂಡಿ ಫೆಲೋ ಎಂದು ಬರೆದು ಸುಮ್ಮನಾಗುತ್ತಿದ್ದರು. ಬಾಲ್ಯದ ಗೆಳೆಯರು ವಿಷ್ಣು ಮೊದಲಿನಿಂದಲೂ ಹಾಗೇನೇ ಅಂತ ಫರ್ಮಾನು ಹೊರಡಿಸಿ, ಅದೊಂದು ಮಾತಾಡುವ ವಿಚಾರವೇ ಅಲ್ಲ ಎಂದು ತಳ್ಳಿ ಹಾಕುತ್ತಿದ್ದರು.
ಬೇಕು ಎಂದರೆ ಬೇಕು, ಬೇಡ ಎಂದರೆ ಬೇಡ ಎಂಬಂತೆ ಬದುಕಿದವರು ವಿಷ್ಣುವರ್ಧನ್. ಅವರಿಗೆ ತುಂಬ ಹತ್ತಿರವಾಗಲು ಯತ್ನಿಸಿ ಸೋತವರಿದ್ದಾರೆ. ಅವರ ಮನಸ್ಸೆಂಬ ಏಳು ಸುತ್ತಿನ ಕೋಟೆಯ ಕೊನೆಯ ಸುತ್ತನ್ನು ಹೊಕ್ಕವರು ಬಹುಶಃ ಯಾರೂ ಇರಲಿಕ್ಕಿಲ್ಲ. ಇನ್ನೇನು ವಿಷ್ಣುವರ್ಧನ್ ವಿಶ್ವರೂಪ ದೊರಕಿತು ಎನ್ನುವಷ್ಟರಲ್ಲಿ ಅವರು ಕಣ್ಮರೆಯಾಗುತ್ತಿದ್ದರು. ಮತ್ತೊಂದು ಬಾರಿ ಕಂಡಾಗ ಮತ್ತೆ ಮೊದಲನೆ ಬಾಗಿಲಿನಿಂದಲೇ ಆರಂಭಿಸಬೇಕು. ಹಳೆಯ ಮಾತುಗಳಿಗೆ ಅರ್ಥವಿಲ್ಲ. ಪರಿಚಯಕ್ಕೂ ಸ್ನೇಹಕ್ಕೂ ಸಂಬಂಧವಿಲ್ಲ. ಪ್ರತಿಬಾರಿಯೂ ಅವರೂ ಹೊಸಬರು, ಭೇಟಿಯಾಗಲೂ ಹೋದವನೂ ಹೊಸಬ. ಕೈಕುಲುಕಲು ಹಸ್ತ ಚಾಚಿದರೆ, ಕಿರುಬೆರಳನ್ನು ಮುಂದಕ್ಕೆ ಚಾಚುತ್ತಿದ್ದವರು ಅವರು.
ವಿಷ್ಣು ವಿರಕ್ತ ಎಂದು ಕರೆಯವುದು ಸರಿಯಲ್ಲ. ಅನುರಕ್ತ ಅನ್ನುವುದೂ ತಪ್ಪು. ಗುಂಪಿನಿಂದ ದೂರ ಉಳಿಯಲು, ಸಂಬಂಧಗಳಿಂದ ಪಾರಾಗಲು, ಹೊಸ ಸ್ನೇಹಿತರನ್ನು ದೂರವಿಡಲು ಅವರು ಸಾವಿರ ಕಾರಣಗಳನ್ನು ಹುಡುಕುತ್ತಿದ್ದರು. ಕೆಲವೊಮ್ಮೆ ಉತ್ಸಾಹ ಬಂದರೆ ತಾವೇ ಫೋನ್ ಮಾಡಿ ಕರೆಸಿಕೊಳ್ಳುವುದೂ ಇತ್ತು.
ಕನ್ನಡದ ನಟರಲ್ಲಿ ಸಾಮಾನ್ಯವಾಗಿರುವ ಒಂದು ದುರ್ಗುಣವನ್ನು ಇಲ್ಲಿ ಪ್ರಸ್ತಾಪಿಸಬೇಕು. ನನಗೆ ಪ್ರಚಾರ ಬೇಕಾಗಿಲ್ಲ. ನನ್ನ ಬಗ್ಗೆ ಯಾರೂ ಬರೆಯಬೇಕಾಗಿಲ್ಲ. ಬರೆದರೆ ನಾನು ಹೇಳಿದ್ದನ್ನು ಮಾತ್ರ ಬರೆಯಬೇಕು ಎಂದು ಅವರು ನಿರೀಕ್ಷಿಸುತ್ತಿದ್ದರು. ಕನ್ನಡದ ನಟರು ವಿಮರ್ಶೆಯನ್ನೂ ಕಿಂಚಿತ್ತೂ ಸಹಿಸುತ್ತಿರಲಿಲ್ಲ, ಈಗಲೂ ಸಹಿಸುವುದಿಲ್ಲ. ಅಷ್ಟೇ ಅಲ್ಲ, ಅವರಿಗೆ ತಾವು ನಟಿಸುತ್ತಿರುವ ಚಿತ್ರದ ಬಗ್ಗೆ ಮಾತಾಡಬೇಕು ಅಂತಲೂ ಅನ್ನಿಸುವುದಿಲ್ಲ. ತಾನು ನಟಿಸುತ್ತಿರುವ ಚಿತ್ರ ತನ್ನದು ಎಂಬ ಪ್ರೀತಿಯನ್ನು ಪ್ರಕಾಶ್ ರೈ, ಅವಿನಾಶ್, ರವಿಚಂದ್ರನ್, ರಮೇಶ್ ಮುಂತಾದ ಕೆಲವು ನಟರನ್ನು ಬಿಟ್ಟರೆ ಬೇರೆ ಯಾರಲ್ಲೂ ನಾನು ಕಂಡಿಲ್ಲ. ನಾವು ಮಾತಾಡುವುದು ನಿಮ್ಮ ಸೌಭಾಗ್ಯ ಎಂಬ ಧಾಟಿಯಲ್ಲೇ ಅವರು ಮಾತಾಡುತ್ತಿದ್ದರು. ಯಾವತ್ತೂ ತನ್ನ ಸಿನಿಮಾ ನೂರು ದಿನ ಓಡಿತು ಎಂಬ ಸಂತೋಷಕ್ಕೆ ಒಬ್ಬ ಕಲಾವಿದ ಎಲ್ಲರನ್ನೂ ಕರೆದು ಒಂದು ಪಾರ್ಟಿ ಕೊಟ್ಟದ್ದಿಲ್ಲ. ಸಂತೋಷಕೂಟಕ್ಕೆ ಕರೆದದ್ದಿಲ್ಲ. ಅದೇನಿದ್ದರೂ ನಿರ್ಮಾಪಕರ ಕರ್ಮ ಎಂದೇ ಅವರೆಲ್ಲ
ಭಾವಿಸಿಕೊಂಡಿದ್ದವರು.
ವಿಷ್ಣುವರ್ಧನ್ ಕೂಡ ಸಿನಿಮಾದ ವಿಚಾರಕ್ಕೆ ಬಂದರೆ ಹಾಗೇ ಇದ್ದವರು. ಮುಹೂರ್ತದ ದಿನವಾಗಲೀ, ಶೂಟಿಂಗ್ ರೌಂಡಪ್‌ಗೆ ಹೋದಾಗಲಾಗಲೀ, ಚಿತ್ರ ಬಿಡುಗಡೆಯ ನಂತರವಾಗಲೀ ಅವರು ಜಾಸ್ತಿ ಮಾತಾಡುತ್ತಿರಲಿಲ್ಲ. ಆದರೆ, ಕೆಲವೊಮ್ಮೆ ಸುಮ್ಮನೆ ಎಲ್ಲರನ್ನೂ ಕರೆದು ಜೊತೆಗೆ ಊಟ ಮಾಡೋಣ ಅನ್ನುತ್ತಿದ್ದರು. ಸಂಜೆ ಮನೆಗೆ ಬನ್ನಿ ಅಂತ ಕರೆದು ಒಳ್ಳೆಯ ಊಟ ಹಾಕಿಸುತ್ತಿದ್ದರು. ಆಮೇಲೆ ಎಷ್ಟೋ ದಿನಗಳ ತನಕ ಮಾತೇ ಇರುತ್ತಿರಲಿಲ್ಲ.
ವಿಷ್ಣುವರ್ಧನ್ ಹಾಗಾಗುವುದಕ್ಕೆ ಕಾರಣ ಅವರ ಮೇಲಿದ್ದ ಒತ್ತಡ ಅನ್ನುವವರಿದ್ದಾರೆ. ತನ್ನನ್ನು ಹೊರಗಿಡುವುದಕ್ಕೆ ಇಡೀ ಉದ್ಯಮ ಯತ್ನಿಸಿತು ಎಂಬ ಕೊರಗು ಅವರನ್ನು ಕೊನೇ ತನಕ ಕಾಡುತ್ತಿತ್ತು. ನಾನು ಮಾತಾಡುವುದಿಲ್ಲ, ಮಾತಾಡಿದರೆ ಎಂತೆಂಥಾ ಸತ್ಯಗಳು ಹೊರಬೀಳುತ್ತವೋ ಗೊತ್ತಿಲ್ಲ. ದೊಡ್ಡವರು ಅಂದುಕೊಂಡವರ ಬಂಡವಾಳ ಎಲ್ಲವನ್ನೂ ಹೊರಗೆ ಹಾಕಬಲ್ಲೆ. ಆದರೆ ನಾನು ಮಾತಾಡುವುದಿಲ್ಲ ಎಂದು ಗುರುಗಳಿಗೆ ಮಾತು ಕೊಟ್ಟಿದ್ದೇನೆ’ ಎಂದು ವಿಷ್ಣು ಅನೇಕ ಸಾರಿ ಹೇಳಿಕೊಂಡಿದ್ದರು.
ಅವರನ್ನು ನೂರೋ ನೂರೈವತ್ತು ಸಲವೋ ಭೇಟಿ ಮಾಡಿದ ಮೇಲೂ ಮೊದಲ ಸಾರಿ ಭೇಟಿಯಾದಾಗ ಎಲ್ಲಿರುತ್ತಿದ್ದೆವೋ ಅಲ್ಲೇ ಇರುತ್ತಿದ್ದೆವು. ಅವರಿಗೆ ಹತ್ತಿರಾಗುವ ಎಲ್ಲಾ ಹುನ್ನಾರಗಳೂ ವ್ಯರ್ಥ ಎನ್ನಿಸುತ್ತಿದ್ದವು. ಹತ್ತಿರವಾಗಿದ್ದೇವೆ ಅಂದುಕೊಂಡವರೂ ಕ್ರಮೇಣ ಇದು ತಮ್ಮಿಂದ ಸಾಧ್ಯವಾಗದ ಮಾತು ಎಂದು ದೂರ ಸರಿಯುತ್ತಿದ್ದರು. ಅದು ಕಲ್ಲುವೀಣೆಯನ್ನು ನುಡಿಸುವ ಪ್ರಯತ್ನದಂತೆ ಎಂಬುದು ನಿಧಾನವಾಗಿ ಅರಿವಾಗುತ್ತಾ ಹೋಗುತ್ತಿತ್ತು.
ಇತ್ತೀಚೆಗೆ ಅವರನ್ನು ನೋಡಿದಾಗ, ಸಿನಿಮಾ ಸಾಕು ಅನ್ನಿಸಿ ಬರೆಯುವುದಕ್ಕೆ ಶುರುಮಾಡಿದ್ದೇನೆ ಅಂದಿದ್ದರು ವಿಷ್ಣು. ತಡೀರಿ ತೋರಿಸ್ತೀನಿ ಎಂದು ಹೇಳಿ ರಾಧಾಕೃಷ್ಣನ ಹತ್ತಿರ ಸೂಟ್‌ಕೇಸ್ ತರಿಸಿ, ಅದರೊಳಗಿಂದ ಡೈರಿ ತೆಗೆಸಿ, ತಾವು ಬರೆದಿಟ್ಟ ಸಾಲುಗಳನ್ನು ತೋರಿಸಿದ್ದರು. ಅದರಲ್ಲಿ ಒಂದು ಸಾಲು ಹೀಗಿತ್ತು:
ಹಗಲಿಡೀ ಅಹಂಕಾರ, ಮನೆಗೆ ಬಂದೊಡನೆ ಮಮಕಾರ’
ಹಾಗಂದರೆ ಏನು ಅನ್ನುವುದನ್ನೂ ಅವರೇ ವಿವರಿಸಿದ್ದರು. ಇಡೀ ದಿನ ಹೊರಗಿರ್ತೀವಿ. ನಾನು ವಿಷ್ಣು, ನಾನು ಸಾಹಸಸಿಂಹ, ನನಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ, ನಾನು ಏನು ಬೇಕಾದರೂ ಮಾಡಬಲ್ಲೆ ಅನ್ನೋ ಅಹಂಕಾರ ಆವರಿಸಿಕೊಂಡಿರುತ್ತೆ. ಆದರೆ ಸಂಜೆ ಮನೆಗೆ ಬಂದಾಕ್ಷಣ ಅಹಂಕಾರ ಕರಗಿ ಮಮಕಾರ ಮೂಡುತ್ತೆ. ನನ್ನ ಮಕ್ಕಳು, ನನ್ನ ಮನೆಯವರು ಅನ್ನುವ ಭಾವನೆ ಮೂಡುತ್ತಿದ್ದಂತೆ ನಾನು ಅವರಂತೆಯೇ, ಅವರಿಗಿಂತ ಸಣ್ಣವನು ಎಂಬ ಭಾವನೆ ಮೂಡುತ್ತೆ ಎಂದಿದ್ದರು.
ಅಹಂಕಾರ ಮತ್ತು ಮಮಕಾರಗಳ ನಡುವೆ ಅವರು ಸದಾ ತುಯ್ದಾಡುತ್ತಿದ್ದರು ಎಂದು ಕಾಣುತ್ತದೆ. ಬಹುಶಃ ಎಲ್ಲಾ ಪ್ರತಿಭಾವಂತರದೂ ಇದೇ ಕತೆಯೇನೋ?
ವಿಷ್ಣು ಇನ್ನಿಲ್ಲ ಎಂಬುದು ನಾನು ಇತ್ತೀಚೆಗೆ ಕೇಳಿದ ನಂಬಲಾಗದ ಸತ್ಯಸುದ್ದಿಗಳಲ್ಲಿ ಒಂದು ಅನ್ನುವುದಂತೂ ನಿಜ.

Tuesday, January 5, 2010
ಒಳ್ಳೇ ಲೇಖಕ ಒಳ್ಳೇ ಮನುಷ್ಯನೂ ಆಗಿರ್ತಾನೆ ಅಲ್ವಾ?
ಎಲ್ಲವನ್ನೂ ಪ್ರೀತಿಯಿಂದ ನೋಡು; ಅನುಮಾನದಿಂದ ನೋಡು; ಉಡಾಫೆಯಿಂದ ನೋಡು; ಅಗೌರವದಿಂದ ನೋಡು; ಅಕ್ಕರೆಯಿಂದ ನೋಡು ಅಂದವರು ವೈಎನ್‌ಕೆ. ಒಮ್ಮೆ ಅವರು ಸಾಹಿತಿಯೊಬ್ಬರ ಬಗ್ಗೆ ಮಾತಾಡುತ್ತಾ ಅವನು ಕೆಟ್ಟ ಬರಹಗಾರ’ ಎಂದು ರೇಗಿದರು. ಆದರೆ ಒಳ್ಳೆ ಮನುಷ್ಯ’ ಅಂತ ನಾನು ವಾದಿಸಿದೆ. ನಾನು ಓದುಗ. ಅವನು ಒಳ್ಳೆ ಮನುಷ್ಯ ಅನ್ನಿಸಿಕೊಂಡು ನನಗೇನೂ ಆಗಬೇಕಾಗಿಲ್ಲ. ನನಗವನು ಒಳ್ಳೆಯ ಲೇಖಕ ಆಗಿರಬೇಕು ಅಷ್ಟೇ. ಕುರ್ಚಿ ಟೇಬಲ್ಲು ಮಾಡಿಸುವವನು ಒಳ್ಳೇ ಕಸಬುದಾರ ಬಡಗಿಗಾಗಿ ಹುಡುಕುತ್ತಾನೆಯೇ ಹೊರತು, ಅವನ ಒಳ್ಳೇತನವನ್ನು ನೋಡುವುದಿಲ್ಲ’ ಎಂದು ನನ್ನ ವಾದವನ್ನು ಸಾರಾಸಗಟು ತಿರಸ್ಕರಿಸಿದರು. ಲೇಖಕನಿಗೂ ಬರಹಕ್ಕೂ ಸಂಬಂಧ ಇಲ್ಲ. ಲೇಖಕ ಸತ್ತು ಹೋಗ್ತಾನೆ. ಮುಂದಿನ ತಲೆಮಾರಿಗೆ ಉಳಿಯೋದು ಬರಹ ಮಾತ್ರ. ಷೇಕ್ಸ್‌ಪಿಯರ್ ಒಳ್ಳೆಯವನೋ ಕೆಟ್ಟವನೋ ಅನ್ನೋದು ಯಾರಿಗೆ ಬೇಕು, ಕಾಳಿದಾಸ ಸಜ್ಜನನೋ ದುರ್ಜನನೋ ಅನ್ನೋದನ್ನು ಯಾರು ಕೇಳ್ತಾರೆ. ಒಳ್ಳೇತನ, ಕೆಡುಕು ನಮ್ಮ ಸುತ್ತಲಿರುವ ಹತ್ತಾರು ಮಂದಿಗೆ ತಿಳಿಯುತ್ತದೆ ಅಷ್ಟೇ. ಅದನ್ನು ಮೀರಿ ನಿಂತು ಬರೆಯೋದು ಕಲೀಬೇಕು ಎಂದು ಇಡೀ ದಿನ, ನೆನಪಾದಾಗ ಆದಾಗಲೆಲ್ಲ ಹೇಳುತ್ತಲೇ ಇದ್ದರು. ದೊಡ್ಡವರ ಸಣ್ಣತನ, ಸಣ್ಣವರ ದೊಡ್ಡತನ ಎರಡನ್ನೂ ಕೇಳಿ, ನೋಡಿ ಗೊತ್ತಿದ್ದವರು ಹೀಗೆ ಮಾತಾಡುವುದು ಕೇಳಿ ನನಗೆ ಆಶ್ಚರ್ಯವಾಗಿತ್ತು.
ತುಂಬ ವರ್ಷಗಳ ಕಾಲ ಅದರ ಬಗ್ಗೆಯೇ ಯೋಚಿಸಿದೆ. ಒಳ್ಳೆಯ ಲೇಖಕ, ಒಳ್ಳೆಯ ಮನುಷ್ಯ- ಇವೆರಡರ ನಡುವಿನ ಗೊಂದಲ ಆಗಲೂ ಪರಿಹಾರ ಆಗಿರಲಿಲ್ಲ. ಮುಂದೊಂದು ದಿನ ಪೂರ್ಣಚಂದ್ರ ತೇಜಸ್ವಿ ಸಿಕ್ಕಾಗ ಇದರ ಪ್ರಸ್ತಾಪ ಮಾಡಿದ್ದೆ: ಯಾಕೋ ಒಳ್ಳೆಯವನಾಗಬೇಕು ಅಂತ ಸಾಯ್ತೀಯಾ? ಹೋಗ್ಲಿ ಯಾರ ಕಣ್ಣಲ್ಲಿ ಒಳ್ಳೆಯವನಾಗ್ತೀಯ ಹೇಳು? ಒಬ್ಬರಿಗೆ ಬೇಕಾದೋನಾದ್ರೆ ಇನ್ನೊಬ್ಬರಿಗೆ ಬೇಡದೋನಾಗ್ತೀಯ? ಸುಮ್ನೆ ಬದುಕೋದು ಕಲಿ. ಬರೀಬೇಕು ಅನ್ನಿಸಿದಾಗ ಬರಿ. ತುಂಬ ಬರೀತೀಯಾ ಅಂತಾರೆ. ಅವರಿಗೇನು ಹೋಗಬೇಕು? ಈ ಓದುಗರು, ಪ್ರಿಂಟಿಂಗ್ ಉದ್ಯಮ, ಮಾರಾಟಜಾಲ, ಓದೋ ಹುಚ್ಚು ಎಲ್ಲಾ ನಿಂತಿರೋದು ತುಂಬಾ ಬರೆಯೋರಿಂದಲೇ. ವರ್ಷಕ್ಕೆ ಒಂದೇ ಪುಸ್ತಕ ಬರೀಬೇಕು. ಬುದ್ದಿವಂತರು ಮಾತ್ರ ಬರೀಬೇಕು ಅನ್ನೋ ಹಾಗಿದ್ರೆ ಸಂಸ್ಕೃತದ ಹಾಗೆ, ಕನ್ನಡವೂ ಯಾವತ್ತೋ ಸತ್ತು ಹೋಗ್ತಿತ್ತು’ ಅಂತ ಉಪದೇಶ ಮಾಡಿದರು.

Subscribe to:
Posts (Atom)